ಮಂಗಳೂರು ಬ್ಲಾಸ್ಟ್‌ಗೂ ರಾಮೇಶ್ವರಂ ಕೆಫೆ ಸ್ಪೋಟಕ್ಕೂ ಲಿಂಕ್ ಕಾಣ್ತಿದೆ : ಸತ್ಯ ಬಿಚ್ಚಿಟ್ಟ ಡಿ ಕೆ ಶಿವಕುಮಾರ್‌

ಬೆಂಗಳೂರು, ಮಾರ್ಚ್‌ 02: ಮಂಗಳೂರಿನ ಘಟನೆಗೂ ಇದಕ್ಕೂ ಲಿಂಕ್ ಇರುವಂತೆ ಕಾಣುತ್ತಿದೆ. ಎರಡೂ ಕಡೆ ಬಳಸಿದ ಸ್ಫೋಟಕ ಸಾಮಾಗ್ರಿಗಳಲ್ಲಿ ಸಾಮ್ಯತೆ ಇದೆ. ಹೀಗಾಗಿ ಮಂಗಳೂರು ಹಾಗೂ ಶಿವಮೊಗ್ಗ ಪೊಲೀಸರು ಕೂಡ ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನ ಜನತೆ ಆತಂಕ ಪಡುವ ಅಗತ್ಯವಿಲ್ಲ ಎಂದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಿನ್ನೆಯ ಸ್ಫೋಟದ ಪ್ರಕರಣವನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ದುರ್ಘಟನೆಗೆ ಕಾರಣರಾಗಿರುವವರು ಯಾರೇ ಆಗಿದ್ದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

DK Shivakumar Managluru Cooker Blast And Bengaluru Rameshwaram Cafe Bomb Blast Both Are Same

ಪ್ರಕರಣದ ತನಿಖೆಗೆ 7-8 ತಂಡಗಳನ್ನು ನಿಯೋಜನೆ ಮಾಡಲಾಗಿದ್ದು, ಬೆಂಗಳೂರಿನಲ್ಲಿರುವ ಸಿಸಿಟಿವಿ ಪರಿಶೀಲನೆ ಮಾಡಲಾಗುತ್ತಿದೆ. ದುಷ್ಕರ್ಮಿ ಹೇಗೆ ಬಂದ, ಯಾವ ರೀತಿ ಸ್ಫೋಟಕ ಇಟ್ಟು ಹೋದ ಎಂಬ ಬಗ್ಗೆ ವಿಡಿಯೋ ಸಿಕ್ಕಿವೆ. ಅವನ ಚಹರೆ ಬಗ್ಗೆ ಸುಳಿವು ಸಿಕ್ಕಿದೆ. ಈ ತನಿಖೆಯ ಮಾಹಿತಿಯನ್ನು ಈ ಹಂತದಲ್ಲಿ ಬಹಿರಂಗಪಡಿಸುವುದಿಲ್ಲ. ಪೊಲೀಸ್ ಅಧಿಕಾರಿಗಳು ತನಿಖೆ ಮಾಡಲು ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೇವೆ. ಈ ಪ್ರಕರಣದಲ್ಲಿ ಪರಿಣಾಮಕಾರಿ ತನಿಖೆ ನಡೆಯಲಿದೆ.

ಬಿಜೆಪಿ ನಾಯಕರು ಏನೇ ಟೀಕೆ ಮಾಡಿಕೊಳ್ಳಲಿ ನಾವು ಅವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ. ನಮಗೆ ರಾಜ್ಯದ ಘನತೆ ಕಾಪಾಡುವುದು ಪ್ರಮುಖ ಆದ್ಯತೆ. ಈ ಪ್ರಕರಣದಲ್ಲಿ ಸಹಕಾರ ಕೊಟ್ಟರೂ ಸರಿ, ರಾಜಕಾರಣ ಮಾಡಿದರೂ ಸರಿ. ನಾವು ಮಾತ್ರ ಈ ಪ್ರಕರಣವನ್ನು ಎಲ್ಲಾ ಆಯಾಮದಲ್ಲಿ ನೋಡಿ ತನಿಖೆ ಮಾಡಲಾಗುವುದು ಎಂದು ಹೇಳಿದರು.

ಸಹಕಾರ ನೀಡುತ್ತೇವೆ ಆದರೆ ಪ್ರಕರಣ ಮುಚ್ಚಿಹಾಕಬಾರದು ಎಂಬ ಬಿಜೆಪಿ ನಾಯಕರ ಹೇಳಿಕೆ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಅವರು ಯಾವ ರೀತಿ ರಾಜಕಾರಣ ಮಾಡುತ್ತಿದ್ದಾರೆ ಎಂದು ನಾವು ನೋಡುತ್ತಿದ್ದೇವೆ. ಅವರ ಸಹಕಾರ ಬೇಡ. ಅವರು ಬೆಂಗಳೂರಿನ ಹೆಸರು ಹಾಳು ಮಾಡಲು ಏನೆಲ್ಲಾ ಪ್ರಯತ್ನ ಮಾಡುತ್ತಿದ್ದಾರೆ ಎಂಬುದು ನಮ್ಮ ಗಮನಕ್ಕೆ ಇದೆ ಎಂದು ಕಿಡಿಕಾರಿದರು.

ಗುಪ್ತಚರ ಇಲಾಖೆ ವೈಫಲ್ಯವೇ ಎಂಬ ಪ್ರಶ್ನೆಗೆ ಉತ್ತರಿಸಿ, "ಆ ರೀತಿ ಇಲ್ಲ. ಬಿಜೆಪಿ ಅವಧಿಯಲ್ಲೂ ಇಂತಹ ಘಟನೆಗಳು ನಡೆದಿವೆ. ಸಂಸತ್ತಿನಲ್ಲಿ ಏನಾಯ್ತು ಎಂದು ಎಲ್ಲರೂ ನೋಡಿದ್ದೇವೆ ಎಂದ ಅವರು, ಗಾಯಾಳುಗಳ ಚಿಕಿತ್ಸೆ ವೆಚ್ಚವನ್ನು ಬಿಬಿಎಂಪಿ ವತಿಯಿಂದ ಭರಿಸಲಾಗುವುದು. ಪರಿಹಾರ ನೀಡುವ ಸಂದರ್ಭ ಬಂದರೆ ಅದನ್ನು ನೀಡುತ್ತೇವೆ" ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಯಾವ ಕುಕ್ಕರ್​​ನಲ್ಲೂ ಬ್ಲಾಸ್ಟ್ ಆಗಿಲ್ಲ: ಸಿಎಂ

ಇನ್ನು, ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್​​ಗು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬ್ಲಾಸ್ಟ್​​ಗೂ ಸಾಮ್ಯತೆ ಇಲ್ಲ. ಮಂಗಳೂರಿನಲ್ಲಿ ಕುಕ್ಕರನಲ್ಲಿ ಆದ ಬ್ಲಾಸ್ಟ್, ಬೆಂಗಳೂರಿನಲ್ಲಿ ಯಾವ ಕುಕ್ಕರ್​​ನಲ್ಲೂ ಬ್ಲಾಸ್ಟ್ ಆಗಿಲ್ಲ. ತನಿಖೆ ನಡೆಯುತ್ತಿದೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+