DK Shivakumar: ಗುಟ್ಟಾಗಿಯೇ ಉಳಿದ ಅಧಿಕಾರ ಹಂಚಿಕೆ ಸೂತ್ರ!?: 2024ರ ಲೋಕಸಭಾ ಚುನಾವಣೆ ಬಳಿಕ ಡಿಕೆ ಶಿವಕುಮಾರ್ ಮುಖ್ಯಮಂತ್ರಿ?

ಬೆಂಗಳೂರು, ಮೇ 18: ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಕೊನೆಗೂ ಹೈಕಮಾಂಡ್‌ ನಾಯಕರ ಸಂಧಾನ ಯಶಸ್ವಿಯಾಗಿದ್ದು, ಸಿದ್ದರಾಮಯ್ಯ ಸಿಎಂ, ಡಿ ಕೆ ಶಿವಕುಮಾರ್‌ ಡಿಸಿಎಂ ಆಗಿ ಮೇ 20 ರಂದು ಪ್ರಮಾಣ ವಚನವನ್ನ ಸ್ವೀಕರಿಸಲಿದ್ದಾರೆ.

ಕಳೆದ ಐದು ದಿನಗಳಿಂದ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ಪಟ್ಟು ಹಿಡಿದಿದ್ದು, ಸೋನಿಯಾ ಗಾಂಧಿ ಸಭೆ ನಡೆಸಿದ್ದು, ಈ ಸಭೆಯಲ್ಲಿ ಸಂಧಾನ ಸೂತ್ರ ಫಲಿಸಿಲಿದೆ. ಈ ಹಿಂದೆ ಅಧಿಕಾರ ಹಂಚಿಕೆ ವಿಚಾರದಲ್ಲಿ ಇಬ್ಬರು ನಾಯಕರು ತಳ್ಳಿ ಹಾಕಿದ್ದು ರಾತ್ರೋರಾತ್ರಿ ಸಿದ್ದರಾಮಯ್ಯ ಸಿಎಂ ಹಾಗೂ ಡಿ ಕೆ ಶಿವಕುಮಾರ್‌ ಡಿಸಿಎಂ ಗೆ ಒಪ್ಪಿಕೊಂಡಿದ್ದಾರೆ. ಆದರೆ ಸಿದ್ದರಾಮಯ್ಯನವರ ಮುಖ್ಯಮಂತ್ರಿ ಅವಧಿ ಕೇವಲ ಒಂದು ವರ್ಷ ಮಾತ್ರ ಎಂದು ಹೇಳಲಾಗುತ್ತಿದೆ.

dk shivakumar cm after loksabha elections

ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶದಂತೆ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನವನ್ನ ಗೆಲ್ಲಲು ತಂತ್ರಗಾರಿಕೆಯನ್ನ ಕಾಂಗ್ರೆಸ್‌ ಹೈಕಮಾಂಡ್‌ ಹಾಕಿಕೊಂಡಿದೆ. ಹೀಗಾಗಿ ಒಂದು ವರ್ಷಗ ಕಾಲ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಲಿ, ಮುಂದಿನ ವರ್ಷದಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆ ಬಳಿಕ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವ ಸಾಧ್ಯತೆ ಇದೆ. ಈ ಕುರಿತು ಕಾಂಗ್ರೆಸ್ ಹೈಕಮಾಂಡ್ ಈ ಇಬ್ಬರು ನಾಯಕರ ಜೊತೆಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.

ಗುರುವಾರ ದೆಹಲಿಯಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಸುದ್ದಿಗೋಷ್ಠಿ ನಡೆಸಿ ಕರ್ನಾಟಕದ ನೂತನ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಹೆಸರು ಘೋಷಣೆ ಮಾಡಿದರು. ಈ ವೇಳೆ ಅಧಿಕಾರ ಹಂಚಿಕೆ ಸೂತ್ರದ ಕುರಿತು ಮಾತನಾಡಲು ನಿರಾಕರಿಸಿದ್ದಾರೆ. ರಾಜ್ಯದಲ್ಲಿ ಪಕ್ಷವನ್ನ ಅಧಿಕಾರಕ್ಕೆ ತರುವಲ್ಲಿ ಮುಖ್ಯಪಾತ್ರವನ್ನ ವಹಿಸಿದ ಡಿ ಕೆ ಶಿವಕುಮಾರ್‌ ಗೆ ಮುಖ್ಯಮಂತ್ರಿಯನ್ನಾಗಿ ಮಾಡುವುದಾಗಿ ಹೈಕಮಾಂಡ್‌ ಭರವಸೆ ಕೊಟ್ಟಿದೆ ಎನ್ನಲಾಗಿದೆ.

ಇನ್ನೂ ಹೈಕಮಾಂಡ್‌ ಮುಖ್ಯಮಂತ್ರಿ ಸ್ಥಾನ ನೀಡಿದರೂ ಸಿದ್ದರಾಮಯ್ಯ ಅವರ ಮುಖದಲ್ಲಿ ನಗು ಕಾಣಿಸುತ್ತಿಲ್ಲ. ಕೆಲ ದಿನಗಳಿಂದ ಸಿದ್ದರಾಮಯ್ಯ ಗಂಭೀರವಾಗಿದ್ದು, ಅದೇ ಗಂಭೀರತೆ ಮುಂದುವರಿದಿದೆ. ಆದರೆ ಈ ಬಾರೀ ಮುಖ್ಯಮಂತ್ರಿ ಸ್ಥಾನ ಬೇಕೇ ಬೇಕು ಎಂದು ಪಟ್ಟು ಹಿಡಿದಿದ್ದ ಡಿ ಕೆ ಶಿವಕುಮಾರ್‌ ಗೆ ಡಿಸಿಎಂ ಸ್ಥಾನ ನೀಡಿದರೂ ಮುಖದಲ್ಲಿ ನಗು ಇದೆ. ಇದರ ಹಿಂದೆ ಅಧಿಕಾರ ಹಂಚಿಕೆಯ ವಿಚಾರ ಚರ್ಚೆಯಾಗಿದೆ ಎಂಬುದು ಸ್ಪಷ್ಟವಾಗುತ್ತಿದೆ.

ಇನ್ನೂ ಸುದ್ದಿಗೋಷ್ಠಿಯಲ್ಲಿ ವೇಣುಗೋಪಾಲ್ ಡಿಕೆ ಶಿವಕುಮಾರ್ 2024ರ ಲೋಕಸಭಾ ಚನಾವಣೆವರೆಗೆ ಕೆಪಿಸಿಸಿ ಅಧ್ಯಕ್ಷರಾಗಿಯೂ ಮುಂದುವರಿಯಲಿದ್ದಾರೆ ಎಂದಿದ್ದಾರೆ. ಹೀಗಾಗಿ 2024ರ ಬಳಿಕ ಅಂದರೆ ಲೋಕಸಭಾ ಚನಾವಣೆ ಬಳಿಕ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಚರ್ಚೆಗಳು ಜೋರಾಗಿದ್ದು, ಅಧಿಕಾರ ಹಂಚಿಕೆಯ ಸೂತ್ರದ ಕುರಿತು ಹೈಕಮಾಂಡ್‌ ನಾಯಕರ ಮಟ್ಟದಲ್ಲಿ ಚರ್ಚೆಯಾದ ಬಳಿಕವೇ ಸಿದ್ದರಾಮಯ್ಯ ಅವರಿಗೆ ಸಿಎಂ, ಡಿ ಕೆ ಶಿವಕುಮಾರ್‌ ಗೆ ಡಿಸಿಎಂ ಸ್ಥಾನ ನೀಡಿದ್ದಾರೆ ಎನ್ನಲಾಗಿದೆ.

ಇನ್ನೂ ಖಾಸಗಿ ಸುಸದ್ದಿ ವಾಹಿನಿ ನೀಡಿದ ಸಂದರ್ಶನದಲ್ಲೂ ಅಧಿಕಾರ ಹಂಚಿಕೆ ಸೂತ್ರದ ಬಗ್ಗೆ ಮಾತನಾಡಿದರೇ ಆಡಳಿಕಕ್ಕೆ ಧಕ್ಕೆಯಾಗಲಿದೆ ಎಂದು ಡಿ ಕೆ ಶಿವಕುಮಾರ್‌ ಹೇಳುವ ಮೂಲಕ ಅಧಿಕಾರ ಹಂಚಿಕೆಯ ಸುಳಿವು ನೀಡಿದ್ದಾರೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+