ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿ.ಕೆ.ಶಿವಕುಮಾರ್‌ಗೆ ಸಚಿವ ಸ್ಥಾನ, ಕೆಪಿಸಿಸಿ ಅಧ್ಯಕ್ಷ ಪಟ್ಟ?

By Gururaj
|
Google Oneindia Kannada News

ಬೆಂಗಳೂರು, ಮೇ 24 : ಕಾಂಗ್ರೆಸ್-ಜೆಡಿಎಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಬಹುಮತವಿಲ್ಲದೇ ಬಿಜೆಪಿ ಸರ್ಕಾರ ಪತನವಾಗುವಂತೆ ಮಾಡಿದ ಡಿ.ಕೆ.ಶಿವಕುಮಾರ್ ಅವರಿಗೆ ಯಾವ ಹುದ್ದೆ ಸಿಗಲಿದೆ? ಎಂಬ ಚರ್ಚೆಗಳು ಆರಂಭವಾಗಿದೆ.

ಉಪಮುಖ್ಯಮಂತ್ರಿಯಾದ ಬಳಿಕ ಡಾ.ಜಿ.ಪರಮೇಶ್ವರ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸುವ ಜೊತೆಗೆ, ಸಚಿವ ಸಂಪುಟದಲ್ಲಿಯೂ ಪ್ರಭಾವಿ ಖಾತೆ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

ಛೆ, ಕಾಂಗ್ರೆಸ್ಸಿನ ಟ್ರಬಲ್ ಶೂಟರ್ ಡಿಕೆಶಿಗ್ಯಾಕೆ ಇಂಥ ಸ್ಥಿತಿ?!ಛೆ, ಕಾಂಗ್ರೆಸ್ಸಿನ ಟ್ರಬಲ್ ಶೂಟರ್ ಡಿಕೆಶಿಗ್ಯಾಕೆ ಇಂಥ ಸ್ಥಿತಿ?!

ಕಾಂಗ್ರೆಸ್‌ನಲ್ಲಿ ಒಬ್ಬರಿಗೆ ಒಂದೇ ಹುದ್ದೆ ಎಂಬ ನಿಯಮವಿದೆ. ಆದರೆ, ಅದನ್ನು ಬದಿಗೊತ್ತಿ ಡಿ.ಕೆ.ಶಿವಕುಮಾರ್ ಅವರಿಗೆ 2 ಹುದ್ದೆಗಳನ್ನು ನೀಡಲಾಗುತ್ತದೆ ಎಂಬುದು ಸದ್ಯದ ಸುದ್ದಿ. ಬಿಜೆಪಿ ಸರ್ಕಾರ ಪತನವಾಗುವಲ್ಲಿ ಮಹತ್ವದ ಪಾತ್ರ ವಹಿಸಿದ ಡಿ.ಕೆ.ಶಿವಕುಮಾರ್ ಅವರಿಗೆ ಈ ಮೂಲಕ ಹೈಕಮಾಂಡ್ ಕೊಡುಗೆ ನೀಡಲಿದೆ.

DK Shivakumar may get KPCC chief and minister post

ಬುಧವಾರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರು ಎಚ್.ಡಿ.ಕುಮಾರಸ್ವಾಮಿ ಅವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಬೆಂಗಳೂರಿಗೆ ಬಂದಿದ್ದರು. ಕಾರ್ಯಕ್ರಮ ಮುಗಿದ ಬಳಿಕ ಕಾಂಗ್ರೆಸ್‌ ಶಾಸಕರು ತಂಗಿರುವ ಹೋಟೆಲ್‌ನಲ್ಲಿ ಸಭೆ ನಡೆಸಿದೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿ : ಡಿ.ಕೆ.ಶಿವಕುಮಾರ್‌ಗೆ ಯಾವ ಹುದ್ದೆ?ಕಾಂಗ್ರೆಸ್-ಜೆಡಿಎಸ್ ಮೈತ್ರಿ : ಡಿ.ಕೆ.ಶಿವಕುಮಾರ್‌ಗೆ ಯಾವ ಹುದ್ದೆ?

ಸಭೆಯಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಯಾವ ಹುದ್ದೆ ನೀಡಬೇಕು? ಎಂಬ ಬಗ್ಗೆ ಚರ್ಚೆ ನಡೆದಿದೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಡಿ.ಕೆ.ಶಿವಕುಮಾರ್ ಅವರಿಗೆ ಸೂಕ್ತವಾದ ಹುದ್ದೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಡಿ.ಕೆ.ಶಿವಕುಮಾರ್ ಅವರು 2018ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದರು. ಈಗ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಸಾಧ್ಯತೆ ಇದೆ.

English summary
D.K.Shivakumar likely to be appointed as the next KPCC president and he may get minister post in H.D.Kumaraswamy cabinet. D.K.Shivakumar who had played a crucial role in defeat BJP during the floor test in Karnataka assembly.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X