ರಾಹುಲ್ ಗಾಂಧಿ ಜೊತೆ ಡಿ. ಕೆ. ಶಿವಕುಮಾರ್ ಮಹತ್ವದ ಸಭೆ

ಬೆಂಗಳೂರು, ಜೂನ್ 24 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನಿಯೋಜಿತ ಅಧ್ಯಕ್ಷ ಡಿ. ಕೆ. ಶಿವಕುಮಾರ್ ರಾಹುಲ್ ಗಾಂಧಿ ಜೊತೆ ಸಭೆ ನಡೆಸಿದರು. ರಾಜ್ಯದ ಸದ್ಯದ ಸ್ಥಿತಿಗತಿ ಹಾಗೂ ಇನ್ನಿತರ ವಿಚಾರಗಳ ಕುರಿತಂತೆ ಮಾಹಿತಿ ಹಂಚಿಕೊಂಡರು.

ಬುಧವಾರ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರುಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಡಿ. ಕೆ. ಶಿವಕುಮಾರ್ ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪ್ರತಿದಿನ ಹೆಚ್ಚಾಗುತ್ತಿವೆ. ಕಾಂಗ್ರೆಸ್ ಪಕ್ಷ ದೇಶಾದ್ಯಂತ ಇದರ ವಿರುದ್ಧ ಹೋರಾಟ ಮಾಡಲು ರೂಪುರೇಷೆ ತಯಾರು ಮಾಡುತ್ತಿದೆ. ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರುಗಳ ಜೊತೆ ಈ ಕುರಿತು ರಾಹುಲ್ ಗಾಂಧಿ ಚರ್ಚೆ ನಡೆಸಿದರು.

DK Shivakumar Meeting With Rahul Gandhi

ಕೆಪಿಸಿಸಿಯ ನಿಯೋಜಿತ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಈ ಸಭೆಯಲ್ಲಿ ಪಾಲ್ಗೊಂಡು ರಾಜ್ಯದಲ್ಲಿನ ಸ್ಥಿತಿಗತಿಗಳ ಕುರಿತಂತೆ ಮಾಹಿತಿಗಳನ್ನು ಹಂಚಿಕೊಂಡರು.

ಡಿ. ಕೆ. ಶಿವಕುಮಾರ್ ಜುಲೈ 2ರಂದು ಕೆಪಿಸಿಸಿಯ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ. ಮಾರ್ಚ್‌ನಲ್ಲಿ ಅವರು ಅಧ್ಯಕ್ಷರಾಗಿ ನಿಯೋಜನೆಗೊಂಡರೂ ಲಾಕ್ ಡೌನ್ ಕಾರಣದಿಂದಾಗಿ ಅಧಿಕೃತವಾಗಿ ಪದಗ್ರಹಣ ಮಾಡಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+