ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಹುಲ್ ಗಾಂಧಿ ಜೊತೆ ಡಿ. ಕೆ. ಶಿವಕುಮಾರ್ ಮಹತ್ವದ ಸಭೆ

|
Google Oneindia Kannada News

ಬೆಂಗಳೂರು, ಜೂನ್ 24 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನಿಯೋಜಿತ ಅಧ್ಯಕ್ಷ ಡಿ. ಕೆ. ಶಿವಕುಮಾರ್ ರಾಹುಲ್ ಗಾಂಧಿ ಜೊತೆ ಸಭೆ ನಡೆಸಿದರು. ರಾಜ್ಯದ ಸದ್ಯದ ಸ್ಥಿತಿಗತಿ ಹಾಗೂ ಇನ್ನಿತರ ವಿಚಾರಗಳ ಕುರಿತಂತೆ ಮಾಹಿತಿ ಹಂಚಿಕೊಂಡರು.

ಬುಧವಾರ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರುಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಡಿ. ಕೆ. ಶಿವಕುಮಾರ್ ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

ಲಡಾಖ್ ಘರ್ಷಣೆ ಕುರಿತು ರಾಹುಲ್ ಗಾಂಧಿ ಮತ್ತೊಂದು ಟೀಕೆಲಡಾಖ್ ಘರ್ಷಣೆ ಕುರಿತು ರಾಹುಲ್ ಗಾಂಧಿ ಮತ್ತೊಂದು ಟೀಕೆ

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪ್ರತಿದಿನ ಹೆಚ್ಚಾಗುತ್ತಿವೆ. ಕಾಂಗ್ರೆಸ್ ಪಕ್ಷ ದೇಶಾದ್ಯಂತ ಇದರ ವಿರುದ್ಧ ಹೋರಾಟ ಮಾಡಲು ರೂಪುರೇಷೆ ತಯಾರು ಮಾಡುತ್ತಿದೆ. ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರುಗಳ ಜೊತೆ ಈ ಕುರಿತು ರಾಹುಲ್ ಗಾಂಧಿ ಚರ್ಚೆ ನಡೆಸಿದರು.

ಡಿಕೆ ಶಿವಕುಮಾರ್‌ಗಾಗಿ ಉರುಳು ಸೇವೆ ಮಾಡಿ ಅಭಿಮಾನಿಡಿಕೆ ಶಿವಕುಮಾರ್‌ಗಾಗಿ ಉರುಳು ಸೇವೆ ಮಾಡಿ ಅಭಿಮಾನಿ

DK Shivakumar Meeting With Rahul Gandhi

ಕೆಪಿಸಿಸಿಯ ನಿಯೋಜಿತ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಈ ಸಭೆಯಲ್ಲಿ ಪಾಲ್ಗೊಂಡು ರಾಜ್ಯದಲ್ಲಿನ ಸ್ಥಿತಿಗತಿಗಳ ಕುರಿತಂತೆ ಮಾಹಿತಿಗಳನ್ನು ಹಂಚಿಕೊಂಡರು.

ಸಂತ್ರಸ್ಥರಿಗೆ 1 ರೂಪಾಯಿಯೂ ಸಿಕ್ಕಿಲ್ಲ: ಡಿಕೆ ಶಿವಕುಮಾರ್ ಅಸಮಾಧಾನಸಂತ್ರಸ್ಥರಿಗೆ 1 ರೂಪಾಯಿಯೂ ಸಿಕ್ಕಿಲ್ಲ: ಡಿಕೆ ಶಿವಕುಮಾರ್ ಅಸಮಾಧಾನ

ಡಿ. ಕೆ. ಶಿವಕುಮಾರ್ ಜುಲೈ 2ರಂದು ಕೆಪಿಸಿಸಿಯ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ. ಮಾರ್ಚ್‌ನಲ್ಲಿ ಅವರು ಅಧ್ಯಕ್ಷರಾಗಿ ನಿಯೋಜನೆಗೊಂಡರೂ ಲಾಕ್ ಡೌನ್ ಕಾರಣದಿಂದಾಗಿ ಅಧಿಕೃತವಾಗಿ ಪದಗ್ರಹಣ ಮಾಡಿಲ್ಲ.

English summary
Karnataka Pradesh Congress Committee president D. K. Shivakumar attended the meeting chaired by Rahul Gandhi through video conferencing on June 24, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X