ಕರ್ನಾಟಕದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಬಿ ಖಾತಾ - ಎ ಖಾತಾ ಸೇರಿ ಆಸ್ತಿದಾರರಿಗೆ ಡಿ.ಕೆ ಶಿವಕುಮಾರ್ ಬಂಪರ್

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಿ.ಕೆ ಶಿವಕುಮಾರ್ ಅವರು ಹಲವು ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಹಲವು ಪ್ರಮುಖ ನಿರ್ಧಾರಗಳನ್ನು ಡಿ.ಕೆ ಶಿವಕುಮಾರ್ ಅವರು ತೆಗೆದುಕೊಂಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯ ನಂತರ ಮಾತನಾಡಿದ ಡಿ.ಕೆ ಶಿವಕುಮಾರ್ ಅವರು, ನಾನು ಯಾವುದೇ ಜಾತಿ - ಧರ್ಮವನ್ನು ನೋಡಿ ರಾಜಕೀಯ ಮಾಡಲ್ಲ. ನನಗೆ ಮಾನವ ಧರ್ಮ, ಮಾನವೀಯತೆಯ ಮೇಲೆ ನಂಬಿಕೆ ಇದೆ ಎಂದು ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ. ಇನ್ನು ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬೆನ್ನಲ್ಲೇ ರಾಜ್ಯದ ಆಸ್ತಿದಾರರಿಗೆ ಹಾಗೂ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ರಾಜ್ಯದ ಎಲ್ಲ ಶಾಲಾ - ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಕೊಡುವುದಾಗಿ ಘೋಷಣೆ ಮಾಡಿದ್ದಾರೆ.

ಬುಧವಾರ ಸಂಜೆ ವಿಧಾನಸೌಧದಲ್ಲಿ ನಡೆದ ತಮ್ಮ ನೇತೃತ್ವದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಕರ್ನಾಟಕದಲ್ಲಿ ಹೊಸ ಯುಗ ಪ್ರಾರಂಭಿಸಲು, ನಾವು ಮೊದಲ ಸಚಿವ ಸಂಪುಟ ಸಭೆಯಲ್ಲಿ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ ಎಂದು ಅವರು ಹೇಳಿದ್ದಾರೆ. ಕರ್ನಾಟಕದಲ್ಲಿ ಇನ್ಮುಂದೆ ವಿದ್ಯಾರ್ಥಿನಿಯರಂತೆ ಎಲ್ಲಾ ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗು ಸಹ ಉಚಿತ ಬಸ್ ಪಾಸ್ ಕೊಡಲಾಗುವುದು. ಶೈಕ್ಷಣಿಕ ವರ್ಷ ಪ್ರಾರಂಭವಾಗಿದ್ದು, ಶೀಘ್ರದಲ್ಲೇ ಉಚಿತ ಬಸ್ ಪಾಸ್ ವಿತರಿಸಲು ಅರ್ಜಿ ಕರೆಯಲಾಗುವುದು ಎಂದು ನೂತನ ಮುಖ್ಯಮಂತ್ರಿ ಘೋಷಿಸಿದ್ದಾರೆ.

DK Shivakumar

ಆಸ್ತಿದಾರರಿಗೆ ಗುಡ್‌ನ್ಯೂಸ್ ಕೊಟ್ಟ ಡಿ.ಕೆ ಶಿವಕುಮಾರ್

ಇನ್ನು ಕರ್ನಾಟಕದ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಡುವುದರೊಂದಿಗೆ ರಾಜ್ಯದ ಲಕ್ಷಾಂತರ ಜನ ಆಸ್ತಿದಾರರಿಗೂ ಡಿ.ಕೆ ಶಿವಕುಮಾರ್ ಅವರು ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಬೆಂಗಳೂರಿಗೆ ಸೀಮಿತವಾಗಿದ್ದ ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಯೋಜನೆಯು ಕರ್ನಾಟಕದಾದ್ಯಂತ ವಿಸ್ತರಿಸಲಾಗಿದೆ. ಬಿ ಖಾತಾಯಿಂದ ಎ ಖಾತೆ ಯೋಜನೆ ರಾಜ್ಯಕ್ಕೆ ವಿಸ್ತರಣೆ ಮಾಡುವುದಾಗಿ ನೂತನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಘೋಷಣೆ ಮಾಡಿದ್ದಾರೆ.

ಬೆಂಗಳೂರಿಗಷ್ಟೇ ಸೀಮಿತವಾಗಿದ್ದ ಬಿ ಖಾತಾಯಿಂದ ಎ ಖಾತೆ ಯೋಜನೆಯನ್ನು ಇದೀಗ ರಾಜ್ಯಾದ್ಯಂತ ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ. ಅನಧಿಕೃತ ಕಟ್ಟಡಗಳಿಗೆ ಎ-ಖಾತಾ ದಾಖಲೆ ನೀಡುವ ಅಭಿಯಾನವನ್ನು ಇನ್ಮುಂದೆ ಇಡೀ ರಾಜ್ಯಕ್ಕೆ ವಿಸ್ತರಿಸುತ್ತೇವೆ ಎಂದು ಡಿಕೆಶಿ ಹೇಳಿದ್ದಾರೆ.

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್, ಎಚ್‌ಡಿಕೆಯಿಂದಲೂ ಅಚ್ಚರಿಯ ಟ್ವೀಟ್
ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್, ಎಚ್‌ಡಿಕೆಯಿಂದಲೂ ಅಚ್ಚರಿಯ ಟ್ವೀಟ್

ಮೊದಲ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಧಾರಗಳು

ಕರ್ನಾಟಕದ ಶಾಲಾ - ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್

ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ಬಿ ಖಾತಾದಿಂದ ಎ ಖಾತೆ ಪರಿವರ್ತನೆ ಯೋಜನೆ ರಾಜ್ಯದಾದ್ಯಂತ ವಿಸ್ತರಣೆ

ಕರ್ನಾಟಕದ ರಸ್ತೆಗಳ ನಿರ್ಮಾಣಕ್ಕೆ 2000 ಕೋಟಿ ರೂ. ಘೋಷಣೆ

2,500 ಚದರ ಅಡಿವರೆಗೂ ಒಸಿ ವಿನಾಯಿತಿ. ಇದರೊಂದಿಗೆ 2,500 ಚ.ಅಡಿ ವಿಸ್ತೀರ್ಣ ಕಟ್ಟಡಕ್ಕೆ ಅರ್ಜಿ ಹಾಕಿದವರಿಗೆ ಬಿಗ್ ರಿಲೀಫ್.

ಪ್ರತಿ‌ ಪಂಚಾಯತ್‌ಗೂ ಭಾರತ್ ಜೋಡೋ ಯುವಕ ಸಂಘ ಸ್ಥಾಪನೆಗೆ 10 ಸಾವಿರ ರೂ. ಘೋಷಣೆ.

ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಹುಡುಕುತ್ತಿದ್ದವರಿಗೆ ಖಾಸಗಿ ಉದ್ಯೋಗ ವಿನಿಮಯ ಕೇಂದ್ರ ಸ್ಥಾಪನೆ.

ಭಾರತ್ ಜೋಡೋ ಯುವ ಸಂಘಕ್ಕೆ 10 ಲಕ್ಷ ರೂ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+