Mega Jewellery Park : ಕರ್ನಾಟಕದಲ್ಲಿ ಮೆಗಾ ಜ್ಯುವೆಲರಿ ಪಾರ್ಕ್‌: 50 ಎಕರೆ ಜಮೀನು ಮಂಜೂರಿಗೆ ಆಗ್ರಹ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆದಿನಾರಾಯಣಹೊಸಹಳ್ಳಿ ಕೈಗಾರಿಕಾ ಪ್ರದೇಶದ 2ನೇ ಹಂತದಲ್ಲಿ ಮೆಗಾ ಜ್ಯೂವೆಲರಿ ಪಾರ್ಕ್ ಸ್ಥಾಪಿಸಲು 50 ಎಕರೆ ಜಮೀನು ಮಂಜೂರು ಮಾಡುವಂತೆ ಕರ್ನಾಟಕ ವಿಧಾನ ಪರಿಷತ್ ಸದಸ್ಯರು ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾದ ಟಿ.ಎ. ಶರವಣ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯರಾದ ಶರವಣ ಅವರು, 2022-23ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಮೆಗಾ ಜ್ಯೂವೆಲರಿ ಪಾರ್ಕ್ ಸ್ಥಾಪಿಸುವ ಕುರಿತು ಘೋಷಣೆ ಮಾಡಲಾಗಿತ್ತು. ಆದರೆ, ಇದುವರೆಗೆ ಯೋಜನೆ ಕಾರ್ಯಗತವಾಗದಿರುವುದು ವಿಷಾದನೀಯವಾಗಿದೆ ಎಂದು ತಿಳಿಸಿದರು.

DK Shivakumar Mega Jewellery Park in Karnataka Demand for 50 Acres of Land

ಈ ಹಿಂದೆ ಜ್ಯೂವೆಲರಿ ಪಾರ್ಕ್ ಸ್ಥಾಪನೆಗಾಗಿ ಜಮೀನು ಮಂಜೂರು ಮಾಡುವಂತೆ ಹಲವು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದು, ಸಂಬಂಧಪಟ್ಟ ಇಲಾಖೆಗೆ ಸೂಕ್ತ ಕ್ರಮಕ್ಕಾಗಿ ಸೂಚಿಸಲಾಗಿದ್ದರೂ ಇದುವರೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅವರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

ಮೆಗಾ ಜ್ಯೂವೆಲರಿ ಪಾರ್ಕ್ ಸ್ಥಾಪನೆಯಾದಲ್ಲಿ ರಾಜ್ಯಕ್ಕೆ ಸಾವಿರಾರು ಕೋಟಿ ರೂಪಾಯಿ ಜಿಎಸ್‌ಟಿ ಆದಾಯ ದೊರೆಯುವುದರ ಜೊತೆಗೆ, ಸುಮಾರು 5 ಲಕ್ಷ ಉದ್ಯಮಿಗಳಿಗೆ ಹಾಗೂ 10 ಸಾವಿರ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಮೂಲಕ ರಾಜ್ಯದ ಆರ್ಥಿಕ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಲಿದೆ ಎಂದು ಶರವಣ ಅವರು ವಿವರಿಸಿದರು.

ಆದ್ದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆದಿನಾರಾಯಣಹೊಸಹಳ್ಳಿ ಕೈಗಾರಿಕಾ ಪ್ರದೇಶದ 2ನೇ ಹಂತದಲ್ಲಿ ಮೆಗಾ ಜ್ಯೂವೆಲರಿ ಪಾರ್ಕ್ ಸ್ಥಾಪಿಸಲು ಅಗತ್ಯವಿರುವ 50 ಎಕರೆ ಜಮೀನು ಮಂಜೂರು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಷಣ ಸೂಕ್ತ ನಿರ್ದೇಶನ ನೀಡಬೇಕು ಎಂದು ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು. ಮನವಿಯನ್ನು ಸ್ವೀಕರಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದಕ್ಷಿಣ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಜ್ಯುವೆಲ್ಲರಿ ಪಾರ್ಕ್ ಸ್ಥಾಪಿಸುವುದಾಗಿ ಭರವಸೆ ನೀಡಿದರು.

ಸಿಎಂ ಭೇಟಿಯಾದ ರಾಜ್ಯ ವಕೀಲರ ಪರಿಷತ್ತಿನ ಸದಸ್ಯರು

ಇನ್ನೂ ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಸದಸ್ಯರು ಕೃಷ್ಣಾದಲ್ಲಿ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಪರಿಷತ್ತಿನ ಅಧ್ಯಕ್ಷ ಕಾಮರಡ್ಡಿ ವಿ. ಡಿ. ಅವರ ನೇತೃತ್ವದಲ್ಲಿ ಇತರ ಪದಾಧಿಕಾರಿಗಳು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದರು. ಮುಖ್ಯಮಂತ್ರಿಯವರ ರಾಜಕೀಯ ಸಲಹೆಗಾರ ಎ. ಎಸ್. ಪೊನ್ನಣ್ಣ ಹಾಗೂ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+