ದೇವೇಗೌಡರ ಭೇಟಿ ಮಾಡಿದ ಡಿಕೆಶಿ, ಸರ್ಕಾರ ಉಳಿಸಲು ಹೊಸ ತಂತ್ರ
ಬೆಂಗಳೂರು, ಜುಲೈ 07: ಹದಿಮೂರು ಶಾಸಕರು ರಾಜೀನಾಮೆ ನೀಡಿದ ಬೆನ್ನಲ್ಲೆ ಇಂದು ಸಚಿವ ಡಿ.ಕೆ.ಶಿವಕುಮಾರ್ ಅವರು ಜೆಡಿಎಸ್ ವರಿಷ್ಠ ದೇವೇಗೌಡ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಪದ್ಮನಾಭನಗರ ನಿವಾಸಕ್ಕೆ ಭೇಟಿ ನೀಡಿದ ಡಿ.ಕೆ.ಶಿವಕುಮಾರ್ ಅವರು, ವಸ್ತುಸ್ಥಿತಿ ವಿವರಣೆ ಮಾಡಿದ ಡಿ.ಕೆ.ಶಿವಕುಮಾರ್, ಹೆಚ್ಚಿನ ಡ್ಯಾಮೆಜ್ ಆಗದಂತೆ ತೆಗೆದುಕೊಳ್ಳಲಾಗುತ್ತಿರುವ ಕ್ರಮಗಳು, ಕಾಂಗ್ರೆಸ್ ಶಾಸಕರ ಸ್ಥಿತಿ ಎಲ್ಲವನ್ನೂ ವಿವರಿಸಿದ್ದಾರೆ.
ಇಬ್ಬರೂ ಸೇರಿ ಮುಂದೆ ಆಗಬೇಕಾದ ಕಾರ್ಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ಜೊತೆ ಸಚಿವ ಎಚ್.ಡಿ.ರೇವಣ್ಣ ಅವರು ಸಹ ದೇವೇಗೌಡ ಅವರನ್ನು ಭೇಟಿ ಮಾಡಿದರು.

ಮೂವರು ನಾಯಕರು ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳುವ ಬಗೆಯನ್ನು ಚರ್ಚಿಸಿದ್ದಾರೆ. ಹೊಸ ಕಾರ್ಯತಂತ್ರವನ್ನು ಸಹ ಹೆಣೆದಿದ್ದಾರೆ ಎನ್ನಲಾಗಿದೆ.
ಈಗಾಗಲೇ ಡಿ.ಕೆ.ಶಿವಕುಮಾರ್ ಶಿಡ್ಲಘಟ್ಟದ ಅತೃಪ್ತ ಕೈ ಶಾಸಕ ಮುನಿಯಪ್ಪ ಅವರನ್ನು ಕರೆಸಿಕೊಂಡಿದ್ದಾರೆ. ಇನ್ನೂ ಕೆಲವು ಶಾಸಕರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ದೇವೇಗೌಡ ಅವರು ಸಹ ಜೆಡಿಎಸ್ ಶಾಸಕರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ ಎನ್ನಲಾಗಿದೆ.












Click it and Unblock the Notifications