ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಶಾಸಕ ಶರತ್ ಬಚ್ಚೇಗೌಡ ತಡರಾತ್ರಿ ಭೇಟಿ ರಹಸ್ಯ ಬಯಲು!

|
Google Oneindia Kannada News

ಬೆಂಗಳೂರು, ಡಿ. 17: ಮಹತ್ವದ ಬೆಳವಣಿಗೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ನಿನ್ನೆ (ಡಿ.16) ತಡರಾತ್ರಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿನ ಡಿ.ಕೆ. ಶಿವಕುಮಾರ್ ಅವರ ನಿವಾಸದಲ್ಲಿ ಭೇಟಿ ನಡೆದಿದ್ದು, ಇದೇ ಸಂದರ್ಭದಲ್ಲಿ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಾಗಿದೆ.

ಹೊಸಕೋಟೆ ಉಪ ಚುನಾವಣೆಯಲ್ಲಿ ಮಾಜಿ ಸಚಿವ ಎಂ.ಟಿ.ಬಿ. ನಾಗರಾಜ್ ಅವರ ವಿರುದ್ಧ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಗೆಲುವು ಸಾಧಿಸುವ ಮೂಲಕ ಬಿಜೆಪಿ ನಾಯಕರಿಗೆ ಸೆಡ್ಡು ಹೊಡೆದಿದ್ದರು. ಅದಾದ ಬಳಿಕ ಬಿಜೆಪಿ ಸೇರ್ಪಡೆ ಪ್ರಯತ್ನವನ್ನೂ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಹಲವು ಬಾರಿ ಮಾಡಿದ್ದರು ಎನ್ನಲಾಗಿದೆ. ಅದಕ್ಕೆ ಬಿಜೆಪಿಯಲ್ಲಿನ ಬೆಂಗಳೂರಿನ ಕೆಲವು ಹಿರಿಯ ಒಕ್ಕಲಿಗ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ತಮಗೆ ಪರ್ಯಾಯವಾಗಿ ಶರತ್ ಬಚ್ಚೇಗೌಡ ಅವರು ಬೆಳೆಯಬಹುದು ಎಂಬ ದೂರಾಲೋಚನೆಯಿಂದ ಅಂತಹ ಪ್ರಯತ್ನ ನಡೆದಿತ್ತು. ಇದೀಗ ಗ್ರಾಮ ಪಂಚಾಯತ್ ಚುನಾವಣೆ ಸಂದರ್ಭದಲ್ಲಿ ಶಾಸಕ ಶರತ್ ಬಚ್ಚೇಗೌಡ ಅವರು ಡಿಕೆಶಿ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ.

ಗ್ರಾಮ ಪಂಚಾಯತ್ ಚುನಾವಣೆ

ಗ್ರಾಮ ಪಂಚಾಯತ್ ಚುನಾವಣೆ

ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಡಿಕೆಶಿ ಹಾಗೂ ಶರತ್ ಬಚ್ಚೇಗೌಡ ಅವರ ಭೇಟಿ ನಡೆದಿದೆ ಎನ್ನಲಾಗಿದೆ. ಈಗಾಗಲೇ ಕಾಂಗ್ರೆಸ್ ಪಕ್ಷದ ಹಲವು ಮಹತ್ವದ ಸಭೆಗಳಲ್ಲಿಯೂ ಶರತ್ ಬಚ್ಚೇಗೌಡ ಅವರು ಭಾಗಿಯಾಗಿದ್ದಾರೆ. ಅಲ್ಲಿನ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ತಮ್ಮದೆ ಆದಂತಹ ತಂತ್ರಗಳನ್ನು ಶರತ್ ಅವರು ಮಾಡಿದ್ದಾರೆ. ಅದಕ್ಕೆ ಪೂರಕವಾಗಿ ಈ ಭೇಟಿ ನಡೆದಿದೆ ಎನ್ನಲಾಗಿದೆ.

ಕಾಂಗ್ರೆಸ್ ಸೇರ್ಪಡೆಗೆ ವಿರೋಧ

ಕಾಂಗ್ರೆಸ್ ಸೇರ್ಪಡೆಗೆ ವಿರೋಧ

ಕಳೆದ ಅಕ್ಟೋಬರ್ ತಿಂಗಳಿನಲ್ಲಿಯೇ ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ನಿಗದಿ ಆಗಿತ್ತು. ಆದರೆ ಸ್ಥಳೀಯ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿದ್ದರಿಂದ ಪಕ್ಷ ಸೇರ್ಪಡೆ ಕಾರ್ಯಕ್ರಮ ಮುಂದೂಡಲಾಗಿತ್ತು. ಆದರೂ ಕಾಂಗ್ರೆಸ್ ಪಕ್ಷದ ಪರವಾಗಿ ಶರತ್ ಬಚ್ಚೇಗೌಡ ಅವರು ಹೊಸಕೋಟೆ ಕ್ಷೇತ್ರದಲ್ಲಿ ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಇದೀಗ ಅಲ್ಲಿನ ಸ್ಥಳೀಯ ನಾಯಕರೂ ಕೂಡ ಕಾಂಗ್ರೆಸ್ ರಾಜ್ಯ ನಾಯಕರಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎನ್ನಲಾಗಿದೆ.

ಯಾವಾಗ ಪಕ್ಷ ಸೇರ್ಪಡೆ?

ಯಾವಾಗ ಪಕ್ಷ ಸೇರ್ಪಡೆ?

ಹೊಸ ವರ್ಷದಲ್ಲಿ ಸಂಕ್ರಾಂತಿ ಬಳಿಕ ಶರತ್ ಬಚ್ಚೇಗೌಡ ಅವರು 'ಕೈ' ಹಿಡಿಯಲಿದ್ದಾರೆ. ಸಂಕ್ರಾಂತಿ ಸಂದರ್ಭದಲ್ಲಿ ಬೇರೆ ಪಕ್ಷಗಳ ಇನ್ನಷ್ಟು ನಾಯಕರು ಕಾಂಗ್ರೆಸ್ ಸೇರಲಿದ್ದಾರೆ. ಅದೇ ಸಂದರ್ಭದಲ್ಲಿ ಶಾಸಕ ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್ ಸೇರಲು ಮುಹೂರ್ತ ನಿಗದಿ ಮಾಡಲಾಗಿದೆ. ಅದಕ್ಕೂ ಮೊದಲು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಶರತ್ ಅವರು ಸಕ್ರಿಯವಾಗಿ ಕಾಂಗ್ರೆಸ್ ಪ್ರಚಾರ, ಇನ್ನಿತರ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಇದೇ ಮಾತುಕತೆ ನಿನ್ನೆ ತಡರಾತ್ರಿ ಭೇಟಿಯಲ್ಲಿ ತೀರ್ಮಾನವಾಗಿದೆ ಎಂಬ ಖಚಿತ ಮಾಹಿತಿ ಬಂದಿದೆ. ಭೇಟಿ ಸಂದರ್ಭದಲ್ಲಿ ಮಾಜಿ ಸಚಿವ ಕೃಷ್ಣ ಭೈರೇಗೌಡ ಅವರು ಉಪಸ್ಥಿತರಿದ್ದರು.

Recommended Video

ಆಸ್ಟ್ರೇಲಿಯದಲ್ಲಿ ಹೀರೋ ..! ಭಾರತದಲ್ಲಿ ಝೀರೋ !! | Oneindia Kannada
ಕಾಂಗ್ರೆಸ್‌ ಪಕ್ಷಕ್ಕೆನು ಲಾಭ?

ಕಾಂಗ್ರೆಸ್‌ ಪಕ್ಷಕ್ಕೆನು ಲಾಭ?

ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್ ಸೇರುವುದರಿಂದ ಎಂ.ಟಿ.ಬಿ. ನಾಗರಾಜ್ ಅವರ ಸ್ಥಾನವನ್ನು ಅತ್ಯಂತ ಬಲವಾಗಿ ತುಂಬಲಿದ್ದಾರೆ. ಜೊತೆಗೆ ಒಕ್ಕಲಿಗ ಸಮುದಾಯಕ್ಕೆ ಸೇರಿದ ಯುವ ನಾಯಕ ಆಗಿರುವುದರಿಂದ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ದೊಡ್ಡಬಳ್ಳಾಪುರ ಭಾಗದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಲ ಬಂದಂತಾಗುತ್ತದೆ. ಅದರೊಂದಿಗೆ ಪಕ್ಷದಲ್ಲಿ ಸಿದ್ದರಾಮಯ್ಯ ಅವರ ಪ್ರಾಬಲ್ಯದ ವಿರುದ್ಧ, ತಮ್ಮದೆ ಆದಂತಹ ಪಡೆ ಕಟ್ಟಿಕೊಳ್ಳುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪ್ರಯತ್ನವೂ ಇದರ ಹಿಂದಿದೆ ಎನ್ನಲಾಗಿದೆ.

English summary
Independent MLA Sharath Bachegowda will officially join the Congress party in New Year 2021. KPCC President DK Shivakumar had held talks with Sharath Bachegowda yesterday late night. Former minister Krishna Byre Gowda was present at the meeting.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X