ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಾಮೀನಿಗಾಗಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಡಿ. ಕೆ. ಶಿವಕುಮಾರ್

|
Google Oneindia Kannada News

Recommended Video

DK Shivakumar case : ಜಾಮೀನಿಗಾಗಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಡಿ. ಕೆ. ಶಿವಕುಮಾರ್ | Oneindia Kannada

ಬೆಂಗಳೂರು, ಸೆಪ್ಟೆಂಬರ್ 26 : ಕರ್ನಾಟಕ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಡಿ. ಕೆ. ಶಿವಕುಮಾರ್ ದೆಹಲಿ ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಂಗ ಬಂಧನದಲ್ಲಿರುವ ಅವರು ಪ್ರಸ್ತುತ ದೆಹಲಿ ತಿಹಾರ್ ಜೈಲಿನಲ್ಲಿದ್ದಾರೆ.

ಗುರುವಾರ ಡಿ. ಕೆ. ಶಿವಕುಮಾರ್ ಪರ ವಕೀಲರು ದೆಹಲಿ ಹೈಕೋರ್ಟ್‌ಗೆ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದಾರೆ. ಇಡಿ ವಿಶೇಷ ನ್ಯಾಯಾಲಯ ಡಿ. ಕೆ. ಶಿವಕುಮಾರ್‌ರನ್ನು ಅಕ್ಟೋಬರ್ 1ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಡಿಕೆ ಶಿವಕುಮಾರ್ ಜಾಮೀನು ಅರ್ಜಿ ವಜಾಡಿಕೆ ಶಿವಕುಮಾರ್ ಜಾಮೀನು ಅರ್ಜಿ ವಜಾ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಡಿ. ಕೆ. ಶಿವಕುಮಾರ್ ಬಂಧಿಸಿದೆ. ಬುಧವಾರ ಇಡಿ ವಿಶೇಷ ನ್ಯಾಯಾಲಯ ಡಿ. ಕೆ. ಶಿವಕುಮಾರ್ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೇಳಿತ್ತು.

ಡಿಕೆ ಶಿವಕುಮಾರ್ ಜಾಮೀನು ಅರ್ಜಿ ವಜಾವಾಗಿದ್ದು ಏಕೆ?ಡಿಕೆ ಶಿವಕುಮಾರ್ ಜಾಮೀನು ಅರ್ಜಿ ವಜಾವಾಗಿದ್ದು ಏಕೆ?

ಡಿ. ಕೆ. ಶಿವಕುಮಾರ್‌ರನ್ನು ದೆಹಲಿಯಲ್ಲಿ ಇಡಿ ಬಂಧಿಸಿರುವುದರಿಂದ ದೆಹಲಿ ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಲಾಗಿದೆ. ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಎಂದು ಕೈಗೆತ್ತಿಕೊಳ್ಳಲಿದೆ? ಎಂದು ಕಾದು ನೋಡಬೇಕಿದೆ.

ಡಿಕೆ ಶಿವಕುಮಾರ್ ಮುಂದಿನ ನಡೆ ಏನು?ಡಿಕೆ ಶಿವಕುಮಾರ್ ಮುಂದಿನ ನಡೆ ಏನು?

ಡಿಕೆ ಶಿವಕುಮಾರ್ ಜಾಮೀನು ಅರ್ಜಿ

ಡಿಕೆ ಶಿವಕುಮಾರ್ ಜಾಮೀನು ಅರ್ಜಿ

ದೆಹಲಿಯ ಇಡಿ ವಿಶೇಷ ನ್ಯಾಯಾಲಯ ಮೂರು ಕಾರಣಗಳನ್ನು ನೀಡಿ ಡಿ. ಕೆ. ಶಿವಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬುಧವಾರ ವಜಾಗೊಳಿಸಿತ್ತು. ನ್ಯಾಯಾಧೀಶ ಅಜಯ್ ಕುಮಾರ್ ಕುಹರ್ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಆದೇಶ ನೀಡಿದ್ದರು.

ತಿಹಾರ್ ಜೈಲಿನಲ್ಲಿದ್ದಾರೆ

ತಿಹಾರ್ ಜೈಲಿನಲ್ಲಿದ್ದಾರೆ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಡಿ. ಕೆ. ಶಿವಕುಮಾರ್‌ರನ್ನು ಸೆಪ್ಟೆಂಬರ್ 3ರಂದು ಬಂಧಿಸಿದೆ. 14 ದಿನಗಳ ಕಾಲ ಅವರನ್ನು ಇಡಿ ವಶಕ್ಕೆ ನ್ಯಾಯಾಲಯ ನೀಡಿತ್ತು. ಪ್ರಸ್ತುತ ಅವರು ನ್ಯಾಯಾಂಗ ಬಂಧನದಲ್ಲಿದ್ದು, ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ.

ದೆಹಲಿ ಹೈಕೋರ್ಟ್ ಮೊರೆ

ದೆಹಲಿ ಹೈಕೋರ್ಟ್ ಮೊರೆ

ಡಿ. ಕೆ. ಶಿವಕುಮಾರ್‌ರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವುದು ದೆಹಲಿಯಲ್ಲಿ. ಇಡಿ ವಿಶೇಷ ನ್ಯಾಯಾಲಯ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಆದ್ದರಿಂದ, ದೆಹಲಿ ಹೈಕೋರ್ಟ್‌ನಲ್ಲಿಯೇ ಅವರು ಜಾಮೀನು ಅರ್ಜಿಯನ್ನು ಸಲ್ಲಿಸಿದ್ದಾರೆ.

ನ್ಯಾಯಾಂಗ ಬಂಧನ ಮುಗಿದಿಲ್ಲ

ನ್ಯಾಯಾಂಗ ಬಂಧನ ಮುಗಿದಿಲ್ಲ

ಡಿ. ಕೆ. ಶಿವಕುಮಾರ್‌ರನ್ನು ಇಡಿ ವಿಶೇಷ ನ್ಯಾಯಾಲಯ ಅಕ್ಟೋಬರ್ 1ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಈಗ ಅವರು ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಹೈಕೋರ್ಟ್‌ನಲ್ಲಿ ಅರ್ಜಿಯ ವಿಚಾರಣೆ ನಡೆಯಲು ಕನಿಷ್ಠ ಒಂದು ವಾರ ಬೇಕಾಗಿದ್ದು, ಅಲ್ಲಿಯ ತನಕ ಅವರು ಜೈಲಿನಲ್ಲಿಯೇ ಇರಬೇಕಿದೆ.

English summary
Karnataka Congress leader D.K.Shivakumar moved Delhi high court for bail. Enforcement directorate special court rejected bail for him on September 25, 2019. D.K.Shivakumar arrested by Enforcement Directorate in connection with a money laundering case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X