ಹಣ ಪತ್ತೆ ಕೇಸು : ಹೈಕೋರ್ಟ್ ಮೊರೆ ಹೋದ ಡಿ.ಕೆ.ಶಿವಕುಮಾರ್

ಬೆಂಗಳೂರು, ಫೆಬ್ರವರಿ 04 : ಜಲಸಂನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ. ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯ ದಾಖಲಿಸಿರುವ ಇಸಿಐಆರ್ ರದ್ದುಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.

ಜಾರಿ ನಿರ್ದೇಶನಾಲಯ ಡಿ.ಕೆ.ಶಿವಕುಮಾರ್ ವಿರುದ್ಧ Enforcement Case Information Report (ECIR) ದಾಖಲಿಸಿದೆ. ಫೆ.8ರಂದು ವಿಚಾರಣೆಗೆ ಹಾಜರಾಗುವಂತೆ ಡಿ.ಕೆ.ಶಿವಕುಮಾರ್ ಅವರಿಗೆ ನೋಟಿಸ್ ನೀಡಲಾಗಿದೆ.

DK Shivakumar moves High Court seeks ECIR quash

ಬಂಧನದ ಭೀತಿ ಹಿನ್ನಲೆಯಲ್ಲಿ ಸೋಮವಾರ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಜಾರಿ ನಿರ್ದೇಶನಾಲಯ ದಾಖಲು ಮಾಡಿರುವ ಇಸಿಐಆರ್ ರದ್ದುಗೊಳಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಏನಿದು ಪ್ರಕರಣ : ಡಿ.ಕೆ.ಶಿವಕುಮಾರ್ ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ದಾಳಿಯ ಬಳಿಕ ಜಾರಿ ನಿರ್ದೇಶನಾಲಯಕ್ಕೆ ವರದಿ ಸಲ್ಲಿಸಿದ್ದರು. ಈ ವರದಿಯನ್ನು ಆಧಾರವಾಗಿ ಇಟ್ಟುಕೊಂಡು ಇಸಿಐಆರ್ ದಾಖಲು ಮಾಡಲಾಗಿದೆ.

ಆದಾಯ ತೆರಿಗೆ ಇಲಾಖೆ ದಾಳಿಯ ವೇಳೆ ದೆಹಲಿಯ ಡಿ.ಕೆ.ಶಿವಕುಮಾರ್ ಅವರ ಫ್ಲ್ಯಾಟ್‌ನಲ್ಲಿ 8 ಕೋಟಿ ದಾಖಲೆ ಇಲ್ಲದ ಹಣ ಸಿಕ್ಕಿತ್ತು. ಖರೀದಿ ಮಾಡಿದ ಫ್ಲ್ಯಾಟ್‌ಗೆ ಸಹ ದಾಖಲೆ ಇಲ್ಲದ 4 ಕೋಟಿ ಹಣ ನೀಡಲಾಗಿದೆ ಎಂಬುದು ಆರೋಪವಾಗಿದೆ.

ದಾಳಿಯ ವೇಳೆ ಸಿಕ್ಕ 8 ಕೋಟಿ ಹಣ ನನಗೆ ಕೃಷಿ ಮೂಲದಿಂದ ಬಂದಿದ್ದು ಎಂದು ಡಿ.ಕೆ.ಶಿವಕುಮಾರ್ ಇಡಿ ವಿಚಾರಣೆ ವೇಳೆ ಹೇಳಿದ್ದಾರೆ. ಇಡಿ ಕೇಳಿರುವ ಪ್ರಶ್ನೆಗಳಿಗೆ ಅವರು ಸರಿಯಾದ ಉತ್ತರ ನೀಡಿಲ್ಲ. ಆದ್ದರಿಂದ, ಫೆ.8ರಂದು ಪುನಃ ವಿಚಾರಣೆಗೆ ಆಗಮಿಸಬೇಕು ಎಂದು ನೋಟಿಸ್ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+