Ranya Rao: ರನ್ಯಾ ರಾವ್ ಕೇಸ್‌ನಲ್ಲಿ ಪ್ರಭಾವಿ ಸಚಿವರ ಕೈವಾಡ: ಡಿಸಿಎಂ ಡಿ ಕೆ ಶಿವಕುಮಾರ್ ಏನಂದ್ರು?
ಬೆಂಗಳೂರು, ಮಾರ್ಚ್ 10: ವಿದೇಶದಿಂದ ಚಿನ್ನ ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ಅವರನ್ನು ಬಂಧನ ಮಾಡಲಾಗಿದೆ. ಈ ಪ್ರಕರಣದಲ್ಲಿ ಪ್ರಭಾವಿ ಸಚಿವರ ಪಾತ್ರ ಇದೆ ಎಂಬ ಆರೋಪ ಕೇಳಿಬರುತ್ತಿದೆ. ಈ ಪ್ರಕರಣದಲ್ಲಿ ಪ್ರಭಾವಿ ಕಾಂಗ್ರೆಸ್ ಸಚಿವರ ಪಾತ್ರದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತೀವ್ರ ಜಟಾಪಟಿ ನಡೆಯುತ್ತಿದೆ. ಕಾಂಗ್ರೆಸ್ ಪ್ರಭಾವಿ ಸಚಿವರುಗಳಿಗೆ ರನ್ಯಾ ರಾವ್ ಫೋನ್ ಕರೆ ಮಾಡಿದ್ದಾರೆ, ಅದು ಬಹಿರಂಗವಾಗಲಿ ಎಂದು ಬಿಜೆಪಿ ಶಾಸಕರು ಆಗ್ರಹಿಸಿದ್ದಾರೆ.
ಈ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾತನಾಡಿ, ರನ್ನಾ ರಾವ್ ಪ್ರಕರಣದಲ್ಲಿ ಯಾವ ಸಚಿವರೂ ಭಾಗಿಯಾಗಿಲ್ಲ. ಅವರಿಗೂ ಪ್ರಕಾರಣಕ್ಕೂ ಯಾವುದೇ ಸಂಬಂಧವಿಲ್ಲ. ಕಾನೂನು ಪ್ರಕಾರ ತನಿಖಾಧಿಕಾರಿಗಳು ಕೆಲಸ ಮಾಡುತ್ತಾರೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.ನಟಿ ರನ್ಯಾ ರಾವ್ ಅವರು ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಪ್ರಕರಣದಲ್ಲಿ ಸಚಿವರಿಗೂ ಇದಕ್ಕೂ ಸಂಬಂಧವಿಲ್ಲ. ಕೇಂದ್ರ ಸರ್ಕಾರದವರು ತನಿಖೆ ಮಾಡುತ್ತೇವೆ ಎಂದು ಹೇಳಿದ್ದಾರೆ, ಮಾಡಲಿ ಎಂದು ತಿಳಿಸಿದರು.

ಮರೆಗುದ್ದಿ ಏತ ನೀರಾವರಿ ಯೋಜನೆ ಜಾರಿ
ಮರೆಗುದ್ದಿ ಏತ ನೀರಾವರಿ ಯೋಜನೆಯನ್ನು ಹಂತ ಹಂತವಾಗಿ ಜಾರಿಗೊಳಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಸೋಮವಾರ ಭರವಸೆ ನೀಡಿದರು. ಗಮನ ಸೆಳೆಯುವ ಸೂಚನೆ ಮೇಲೆ ಮಾತನಾಡಿದ ಶಾಸಕ ಜಗದೀಶ್ ಗುಡಗುಂಟಿ ಅವರು, ಜಮಖಂಡಿ, ಮುಧೋಳ ತಾಲೂಕಿನ 2035 ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಒದಗಿಸುವ ಮರೆಗುದ್ದಿ ಏತ ನೀರಾವರಿ ಯೋಜನೆಯ ಮೊದಲ ಹಂತ ಆರಂಭಿಸಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಉತ್ತರಿಸಿದ ಶಿವಕುಮಾರ್ ಅವರು, 31 ಚೆಕ್ ಡ್ಯಾಂ, 4 ಕೆರೆಗಳನ್ನು ತುಂಬಿಸುವ ಮರೆಗುದ್ದಿ ಏತ ನೀರಾವರಿ ಯೋಜನೆಗೆ ₹214 ಕೋಟಿ ರೂಪಾಯಿ ಅನುಮೋದನೆ ನೀಡಿದ್ದೇವೆ. ವೆಂಕಟೇಶ್ವರ ಏತ ನೀರಾವರಿ ಯೋಜನೆ ಮೂಲಕ ಸುಮಾರು 1648 ಹೆಕ್ಟೇರ್ ಪ್ರದೇಶಕ್ಕೆ ನೀರುಣಿಸಲಾಗುತ್ತಿದೆ. 387 ಎಕರೆ ಅಚ್ಚುಕಟ್ಟು ಪ್ರದೇಶ ಮಾತ್ರ ಬಾಕಿ ಉಳಿದಿದೆ. ಇದಕ್ಕೆ ಅಗತ್ಯವಾದ ಅಚ್ಚುಕಟ್ಟು ಪ್ರದೇಶಗಳನ್ನು ಉಲ್ಲಾಳ, ಹುಣಸಿಕಟ್ಟಿ ಮತ್ತು ಬಿಎಂ ಗುದ್ದಿ ಗ್ರಾಮಗಳಲ್ಲಿ ಗುರುತಿಸಿ, ಹಂತ ಹಂತವಾಗಿ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.
ಬಿಜೆಪಿ ಶಾಸಕ ಭರತ್ ಶೆಟ್ಟಿ ಅವರು, 'ಕಿಯೋನಿಕ್ಸ್ ಜಾಗದಲ್ಲಿ ಐಟಿ ಪಾರ್ಕ್ ಮಾಡುವಾಗ, ಅಗತ್ಯ ಉತ್ತೇಜನ ಸಿಗುತ್ತಿಲ್ಲ ಎಂಬ ವಿಚಾರವಾಗಿ ಕೇಳಿದಾಗ, ಬಿಯಾಂಡ್ ಬೆಂಗಳೂರು' ಎಂಬ ಪರಿಕಲ್ಪನೆಯಲ್ಲಿ ಕೈಗಾರಿಕೆಗಳನ್ನು ಎರಡನೇ ಹಾಗೂ ಮೂರನೇ ಹಂತದ ನಗರಗಳಲ್ಲಿ ಸ್ಥಾಪಿಸುವುದಕ್ಕೆ ಉತ್ತೇಜನ ನೀಡಲಾಗುತ್ತಿದೆ. ಈ ಭಾಗಗಳಲ್ಲಿ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡಲು ಕೈಗಾರಿಕೆ, ಉದ್ಯಮಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲು ನಮ್ಮ ಸಚಿವರ ಜತೆ ಚರ್ಚೆ ಮಾಡಲಾಗಿದೆ. ನಿಮ್ಮ ವಿಚಾರವನ್ನು ವಿವರವಾಗಿ ಪತ್ರದ ಮೂಲಕ ಸಲ್ಲಿಸಿ, ನಾವು ಸಚಿವರ ಜತೆ ಚರ್ಚೆ ಮಾಡಿ ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ. ಇನ್ನು ಕರಾವಳಿ ಭಾಗದ ಶಾಸಕರ ಜತೆ ಪ್ರವಾಸೋದ್ಯಮದ ವಿಚಾರವಾಗಿ ಸಭೆ ಮಾಡಲು ತೀರ್ಮಾನಿಸಲಾಗಿದೆ. ಆ ಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪ ಮಾಡಿ ಎಂದು ತಿಳಿಸಿದರು.












Click it and Unblock the Notifications