ಹಗರಣವಿಲ್ಲದೆ ಹುದ್ದೆಗಳ ಭರ್ತಿಗೆ ಕ್ರಮ, ಯುವಕರು ಧೈರ್ಯವಾಗಿರಿ: ಡಿ.ಕೆ.ಶಿವಕುಮಾರ್ ಅಭಯ
ಬೆಂಗಳೂರು: ಸರ್ಕಾರಿ ಹುದ್ದೆಗಳ ನೇಮಕಾತಿ ವಿಳಂಬದ ವಿರುದ್ಧ ಧಾರವಾಡದಲ್ಲಿ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳು ಬೀದಿಗಿಳಿದು ಪ್ರತಿಭಟಿಸುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಸರ್ಕಾರ ಹಗರಣ ರಹಿತವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಬದ್ಧವಾಗಿದೆ. ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದರು.
ನಗರದ ನೆಹರೂ ತಾರಾಲಯದ ಬಳಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಧಾರವಾಡದಲ್ಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಯುವಕರ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸಾಧ್ಯವಾಗಲಿಲ್ಲ. ಆ ಅವಧಿಯಲ್ಲಿ ಹಲವು ಹಗರಣಗಳು ನಡೆದವು. ನಮಗೆ ಯುವಕರ ನೋವು ಅರ್ಥವಾಗುತ್ತದೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದು ನಮ್ಮ ಸರ್ಕಾರದ ಆದ್ಯತೆ ಎಂದರು.

ಯುವನಿಧಿ ಯೋಜನೆ ಜಾರಿಗೆ ತಂದಿದ್ದೇವೆ
ಹುದ್ದೆಗಳ ಭರ್ತಿ ಕುರಿತು ಸರ್ಕಾರ ಸಮಗ್ರ ಯೋಜನೆ ರೂಪಿಸಿರುವುದಾಗಿ ಅವರು ಹೇಳಿದರು. ಕೆಪಿಎಸ್‌ಸಿ ಸೇರಿದಂತೆ ವಿವಿಧ ನೇಮಕಾತಿ ಸಂಸ್ಥೆಗಳಿಗೆ ಜವಾಬ್ದಾರಿ ನೀಡಲಾಗಿದೆ. ಶಿಕ್ಷಕರ ಹಾಗೂ ಆರೋಗ್ಯ ಇಲಾಖೆಯ ಹುದ್ದೆಗಳ ಭರ್ತಿ ಪ್ರಕ್ರಿಯೆ ಮುಂದುವರಿದಿದೆ ಎಂದರು. ಒಳಮೀಸಲಾತಿ ವಿಚಾರದಲ್ಲಿ ಕೆಲವು ಅಡಚಣೆಗಳು ಎದುರಾಗುತ್ತಿವೆ. ನಿರುದ್ಯೋಗಿ ಯುವಕರಿಗೆ ನೆರವಾಗುವ ಉದ್ದೇಶದಿಂದಲೇ ಯುವನಿಧಿ ಯೋಜನೆ ಜಾರಿಗೆ ತಂದಿದ್ದೇವೆ ಎಂದು ಹೇಳಿದರು.
2027ರೊಳಗೆ ಮೆಟ್ರೋ ವಿಸ್ತರಣೆ
ಮೆಟ್ರೋ ಜಾಲವನ್ನು 2027ರೊಳಗೆ 175 ಕಿ.ಮೀ.ಗೆ ವಿಸ್ತರಿಸಲು ಗಡುವು ನೀಡಿರುವ ಕುರಿತು ಪ್ರಶ್ನಿಸಿದಾಗ, ಈ ಕುರಿತು ಸರ್ವೇ ನಡೆಯುತ್ತಿದೆ. ಮೆಟ್ರೋ ವಿಚಾರದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುತ್ತೇವೆ. ಡಬಲ್ ಡೆಕ್ಕರ್ ಯೋಜನೆಗೆ ಸಂಬಂಧಿಸಿದಂತೆ ಕೆಲವು ಸ್ಪಷ್ಟನೆಗಳಿಗಾಗಿ ಕೇಂದ್ರ ಸಚಿವರನ್ನು ಶೀಘ್ರದಲ್ಲೇ ಭೇಟಿ ಮಾಡುತ್ತೇನೆ. ಮೆಟ್ರೋ ವಿಸ್ತರಣೆ ಮೂಲಕ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸುವುದು ನಮ್ಮ ಉದ್ದೇಶ ಎಂದು ಹೇಳಿದರು.
ಇನ್ನು ಎಲ್ಲ ಇಲಾಖೆಗಳಲ್ಲೂ ಬಿಲ್ ಬಾಕಿ ಇರುವ ಬಗ್ಗೆ ಕೇಳಿದಾಗ, "ಹಿಂದಿನ ಸರ್ಕಾರಗಳು ಆರ್ಥಿಕ ಸ್ಥಿತಿ ಪರಿಶೀಲಿಸದೆ ಹೆಚ್ಚಿನ ಕಾಮಗಾರಿಗಳಿಗೆ ಅನುಮತಿ ನೀಡಿದ ಪರಿಣಾಮ ಈಗ ಸಮಸ್ಯೆಗಳು ಎದುರಾಗಿವೆ. ಹಣ ಲಭ್ಯತೆ ಇಲ್ಲದ ಸಂದರ್ಭದಲ್ಲಿ ಕಾಮಗಾರಿಗಳನ್ನು ಕೈಗೊಳ್ಳಬೇಡಿ ಎಂದು ನಾವು ಸಲಹೆ ನೀಡಿದ್ದರೂ, ಕೆಲವು ಗುತ್ತಿಗೆದಾರರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದರು.
ಗುತ್ತಿಗೆದಾರರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವ ಬಗ್ಗೆ ಕೇಳಿದಾಗ, "ಈ ಕುರಿತು ಅವರೊಂದಿಗೆ ಚರ್ಚೆ ಮಾಡುತ್ತೇನೆ ಎಂದೂ ಹೇಳಿದರು. ಖಾಲಿ ಹುದ್ದೆಗಳ ಭರ್ತಿ, ಮೆಟ್ರೋ ವಿಸ್ತರಣೆ ಹಾಗೂ ಬಿಲ್ ಬಾಕಿ ಸಮಸ್ಯೆಗಳ ಕುರಿತು ಸರ್ಕಾರ ಶೀಘ್ರ ಕ್ರಮ ಕೈಗೊಳ್ಳುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದರು.
ಸಿಎಂ ಹೇಳಿದ್ದೇನು?
ಈ ಪ್ರತಿಭಟನೆ ಬಗ್ಗೆ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ ಪರಿಗಣಿಸಿದ್ದೇನೆ. ರಾಜ್ಯದ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಅನುಭವಿಸುತ್ತಿರುವ ಆತಂಕ, ನಿರಾಶೆ ಮತ್ತು ಅನಿಶ್ಚಿತತೆಯನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಉದ್ಯೋಗಕ್ಕಾಗಿ ಸಲ್ಲಿಸುವ ಪ್ರತಿ ಅರ್ಜಿಯ ಹಿಂದೆ ಒಂದು ಕನಸಿರುತ್ತದೆ, ಕುಟುಂಬದ ನಿರೀಕ್ಷೆ, ವರ್ಷಗಳ ಕಠಿಣ ಪರಿಶ್ರಮ ಮತ್ತು ನಾಡಿಗಾಗಿ ಸೇವೆ ಸಲ್ಲಿಸುವ ಆಕಾಂಕ್ಷೆ ಇರುತ್ತದೆ. ಯುವಜನರ ಆತಂಕ ಅಹವಾಲುಗಳು ನನ್ನನ್ನು ತಲುಪಿದೆ. ಅವರ ಭವಿಷ್ಯ ನಮಗೂ ಅತ್ಯಂತ ಮಹತ್ವದ್ದು ಎಂದಿದ್ದಾರೆ.
-
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ












Click it and Unblock the Notifications