ಉಪ ಚುನಾವಣೆ ಫಲಿತಾಂಶದ ಟ್ರೆಂಡ್, ಡಿಕೆಶಿ ಮೊದಲ ಪ್ರತಿಕ್ರಿಯೆ
Recommended Video
ಬೆಂಗಳೂರು, ಡಿಸೆಂಬರ್ 09: ಕರ್ನಾಟಕದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಡಿಸೆಂಬರ್ 9ರಂದು ಆರಂಭವಾಗಿದ್ದು, ಆರಂಭಿಕ ಟ್ರೆಂಡ್ ನಂತೆ ಬಿಜೆಪಿಗೆ ಗೆಲುವು ಎಂಬ ಮಾಹಿತಿ ಹೊರ ಬಂದಿದೆ. ಈ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಎಲ್ಲಾ ಸಮೀಕ್ಷೆಗಳ ಸರಾಸರಿ ನೋಡಿದರೆ ಕೇವಲ 8 ರಿಂದ 10 ಸ್ಥಾನ ಗೆಲ್ಲುವ ವಿಶ್ವಾಸ ವ್ಯಕ್ತವಾಗಿದೆ. ಬಿಜೆಪಿ ಸಮೀಕ್ಷೆ ಕೂಡ 10ಕ್ಕೂ ಕಡಿಮೆ ಕ್ಷೇತ್ರಗಳಲ್ಲಿ ಗೆಲ್ಲಬಹುದು ಎಂಬ ವರದಿ ಬಂದಿದೆ. ಈಗ ಈ ಸಮಯದ ಟ್ರೆಂಡ್ ನೋಡಿದರೆ ಕನಿಷ್ಠ 10-12ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, ಕನಿಷ್ಠ 10 ಸ್ಥಾನ ಗೆಲ್ಲುವ ಖಾತ್ರಿ ಹೊಂದಿದೆ ಎಂಬ ಟ್ರೆಂಡ್ ಸುದ್ದಿ ಬಗ್ಗೆ ಡಿಕೆ ಶಿವಕುಮಾರ್ ಅವರು ಎಎನ್ಐ ಪ್ರತಿನಿಧಿ ಜೊತೆ ಮಾತನಾಡಿದರು.
"ಮತದಾರರು ನೀಡಿದ ತೀರ್ಪಿಗೆ ತಲೆ ಬಾಗಲೇಬೇಕು, 15 ಕ್ಷೇತ್ರಗಳಲ್ಲಿ ಯಾವ ರೀತಿ ಫಲಿತಾಂಶ ಬಂದರೂ ಸ್ವೀಕರಿಸಲು ಸಿದ್ಧವಾಗಿದ್ದೇವೆ. ಅನರ್ಹರಂದು ಜನರು ಒಪ್ಪಿಕೊಂಡು ಆಶೀರ್ವದಿಸಿದರೆ, ನಾವು ನಮ್ಮ ಸೋಲೊಪ್ಪಿಕೊಳ್ಳಬೇಕಾಗುತ್ತದೆ. ಇದರಿಂದ ಹಿನ್ನಡೆಯಾಗಿದೆ ಎನ್ನಲಾಗುವುದಿಲ್ಲ, ರಾಜಕೀಯ ಸ್ಥಿತ್ಯಂತರ ಒಪ್ಪಿಕೊಳ್ಳಬೇಕು'' ಎಂದು ಡಿಕೆ ಶಿವಕುಮಾರ್ ಹೇಳಿದರು.

ಕರ್ನಾಟಕ ವಿಧಾನಸಭೆಯಲ್ಲಿ ಬಿಜೆಪಿ 105 ಸದಸ್ಯ ಬಲ ಹೊಂದಿದೆ. ವಿಧಾನಸಭೆ ಸದಸ್ಯ ಬಲ 112 ಆಗಲು ಬಿಜೆಪಿ 7 ಸ್ಥಾನವನ್ನು ಗೆಲ್ಲಲೇಬೇಕು. ಆಗ ಮಾತ್ರ ಸರ್ಕಾರ ಬಹುಮತ ಪಡೆಯಲು ಸಾಧ್ಯ. ಇನ್ನೂ 2 ಕ್ಷೇತ್ರದ ಉಪ ಚುನಾವಣೆ ನಡೆಯಬೇಕು. ಆದ್ದರಿಂದ, ಸೋಮವಾರ ಫಲಿತಾಂಶ ಪ್ರಕಟಗೊಂಡ ಬಳಿಕ ಸದನದ ಬಲ 222ಕ್ಕೆ ಏರಿಕೆಯಾಗಲಿದೆ.












Click it and Unblock the Notifications