ಅಧಿಕಾರ ಬದಲಾವಣೆ; ನನ್ನ-ಸಿಎಂ ಬಿಟ್ಟು ಬೇರೆಯವರ ಮಾತು ಮುಖ್ಯವಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ
ಹುಬ್ಬಳ್ಳಿ: ನಾನು ಕಾಂಗ್ರೆಸ್ ಪಕ್ಷದ ರಾಜ್ಯ ಅಧ್ಯಕ್ಷ. ಅಧಿಕಾರ ಬದಲಾವಣೆ ವಿಚಾರದಲ್ಲಿ ನನ್ನ ಹಾಗೂ ಸಿಎಂ ಸಿದ್ದರಾಮಯ್ಯ ಹೇಳಿಕೆ ಹೊರತಾಗಿ ಬೇರೆಯವರ ಮಾತು ಮುಖ್ಯವಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದರು. 2028ರವರೆಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಎಂಬ ಸಚಿವ ಪರಮೇಶ್ವರ್ ಹೇಳಿಕೆ ಬಗ್ಗೆ ಕೇಳಿದಾಗ, ನಾನು ಬೇರೆಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಡಿಕೆ.ಶಿವಕುಮಾರ್, ಚುನಾವಣೆ ಬಳಿಕ ನಾಯಕತ್ವ ಬದಲಾವಣೆ ಚರ್ಚೆ ಆಗುವುದೇ ಎಂದು ಕೇಳಿದಾಗ, ಈ ವಿಚಾರವಾಗಿ ನೀವು ಸಮಸ್ಯೆ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ ಎಂದರು. ಚುನಾವಣೆ ನಂತರ ನೀವು ಸಿಎಂ ಆಗುತ್ತೀರಿ ಎಂದು ಚರ್ಚೆಯಾಗುತ್ತಿದೆ ಎಂದಾಗ, ಎಲ್ಲಕ್ಕೂ ಕಾಲವೇ ಉತ್ತರಿಸಲಿದೆ ಎಂದರು.

ಎರಡೂ ಕ್ಷೇತ್ರಗಳಲ್ಲಿ ನಮ್ಮದೇ ಗೆಲುವು
ರಾಜ್ಯದ ಎರಡು ಕ್ಷೇತ್ರಗಳ ಉಪಚುನಾವಣೆ ಬಗ್ಗೆ ಕೇಳಿದಾಗ, "ನಾನು ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕಡೆ ಹೋಗಿದ್ದೇನೆ. ಬಹಳ ಚೆನ್ನಾಗಿ ಪ್ರಚಾರ ನಡೆದಿದೆ. ಎರಡೂ ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ. ನಮ್ಮ ಸರ್ಕಾರದ ಕಾರ್ಯಕ್ರಮಗಳಿಂದ ಜನ ತೃಪ್ತರಾಗಿದ್ದಾರೆ. ಈಗ ಆಗುತ್ತಿರುವ ಬೆಲೆ ಏರಿಕೆ ಬಗ್ಗೆ ಬಿಜೆಪಿಗರು ಬಾಯಿ ಬಿಚ್ಚುತ್ತಿಲ್ಲ. ಕೇಂದ್ರ ಸರ್ಕಾರ ಕೂಡ ಯಾವುದೇ ಪರಿಹಾರ ಪ್ರಕಟಿಸಿಲ್ಲ. ನಮ್ಮ ಐದು ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಸ್ವಲ್ಪ ಪ್ರಮಾಣದ ನೆರವು ಸಿಕ್ಕಿದೆ. ನಾವು ಎರಡೂ ಕ್ಷೇತ್ರದಲ್ಲಿ ಗೆಲ್ಲಲಿದ್ದು, ಯಾವುದೇ ಸಮಸ್ಯೆ ಇಲ್ಲ" ಎಂದು ತಿಳಿಸಿದರು.
ದಕ್ಷಿಣ ಭಾರತದ ನಿರ್ಲಕ್ಷ್ಯ
ಅಡುಗೆ ಅನಿಲ ಕೊರತೆಗೆ ಪರ್ಯಾಯವಾಗಿ ಪೆಟ್ರೋಲ್ ಬಳಸಲು ಪ್ರಹ್ಲಾದ್ ಜೋಶಿ ಅವರು ನೀಡಿರುವ ಸಲಹೆ ಬಗ್ಗೆ ಕೇಳಿದಾಗ, ಜೋಶಿ ಅವರು ನಮ್ಮ ರಾಜ್ಯದ ಹಿತಕ್ಕೆ ಸಹಾಯ ಮಾಡಬೇಕು. ಕೊಲ್ಲಿ ರಾಷ್ಟ್ರಗಳಿಂದ ಇಂಧನ ತಂದ ಎರಡು ಹಡಗುಗಳು ಗುಜರಾತಿಗೆ ಹೋಗಿದ್ದು ಯಾಕೆ? ಮಂಗಳೂರು, ಕೇರಳ ಬಂದರಿಗೆ ಯಾಕೆ ಬರಲಿಲ್ಲ? ಅವರು ಕೇವಲ ಉತ್ತರ ಭಾರತದತ್ತ ಮಾತ್ರ ನೋಡುತ್ತಿದ್ದಾರೆ. ದಕ್ಷಿಣ ಭಾರತವನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದರು. ಇದರಲ್ಲೂ ರಾಜಕಾರಣ ಮಾಡುತ್ತಿದ್ದಾರಾ ಎಂದು ಕೇಳಿದಾಗ, "ದಕ್ಷಿಣ ಭಾರತದಲ್ಲಿ ಅವರಿಗೆ ನೆಲೆ ಇಲ್ಲ, ಹೀಗಾಗಿ ರಾಜಕೀಯ ಮಾಡುತ್ತಿದ್ದಾರೆ ಎಂದರು.
ಕೇರಳಂನಲ್ಲಿ ಯುಡಿಎಫ್ ಬಹುಮತ
ಕೇರಳಂ ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರದ ಬಗ್ಗೆ ಮಾತನಾಡಿದ ಅವರು, ನಾನು ಹಾಗೂ ಕೆಲವು ಶಾಸಕರು ಕೇರಳಂ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಿ ಬಂದಿದ್ದೇವೆ. ಈ ಬಾರಿ ಕೇರಳಂನಲ್ಲಿ ಯುಡಿಎಫ್ ಮೈತ್ರಿಕೂಟಕ್ಕೆ ಮೂರನೇ ಎರಡರಷ್ಟು ಬಹುಮತ ಸಿಗುವ ಆತ್ಮವಿಶ್ವಾಸವಿದೆ. 10 ವರ್ಷಗಳ ಎಲ್‌ಡಿಎಫ್ ಆಡಳಿತದಿಂದ ಅಲ್ಲಿನ ಜನ ಬೇಸತ್ತಿದ್ದಾರೆ. ಅವರು ಬಿಜೆಪಿ ಜತೆ ಒಳಒಪ್ಪಂದ ಮಾಡಿಕೊಂಡಿದ್ದಾರೆ. ಕಳೆದ 10 ವರ್ಷಗಳಲ್ಲಿ ಅಲ್ಲಿ ಯಾವುದೇ ಗುರುತರವಾದ ಅಭಿವೃದ್ಧಿಯಾಗಿಲ್ಲ ಎಂದು ದೂರಿದರು.
ಹೊರ ದೇಶದಲ್ಲಿರುವ ಮತದಾರರು ಚುನಾವಣೆಯಲ್ಲಿ ಮತ ಹಾಕಲು ಸಾಧ್ಯವಾಗುತ್ತಿಲ್ಲ. ಕೇರಳಂ ಮೂಲದ ಅನಿವಾಸಿ ಭಾರತೀಯರು ಯುಡಿಎಫ್ ಮೈತ್ರಿಕೂಟಕ್ಕೆ ಮತ ಹಾಕುತ್ತಾರೆ ಎಂದು ಅವರು ಚುನಾವಣೆಯಲ್ಲಿ ಭಾಗವಹಿಸಲು ಬರಲು ಹೆಚ್ಚು ವಿಮಾನ ಸೌಲಭ್ಯ ಕಲ್ಪಿಸುತ್ತಿಲ್ಲ. ಯುಡಿಎಫ್ ಮೈತ್ರಿಕೂಟ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದು, ನಾನು 14 ಪ್ರಚಾರ ಸಭೆ, ರೋಡ್ ಶೋಗಳಲ್ಲಿ ಭಾಗವಹಿಸಿ ಬಂದಿದ್ದೇನೆ. ಅಲ್ಲಿ ಎಲ್ಲ ರಾಜಕೀಯ ಪಕ್ಷಗಳಲ್ಲಿ ಶಿಸ್ತು ಹೆಚ್ಚಾಗಿದ್ದು, ಅವರಿಂದ ಕಲಿಯುವುದು ಸಾಕಷ್ಟಿದೆ ಎಂದು ಹೇಳಿದರು.
-
ಗೃಹ ಸಚಿವರ 'ಸಿದ್ದರಾಮಯ್ಯ ಇನ್ನೂ 2 ವರ್ಷ ಸಿಎಂ' ಹೇಳಿಕೆ: ಡಿಕೆ ಸುರೇಶ್ ಹೇಳಿದ್ದೇನು? -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
ಅಸ್ತಿತ್ವಕ್ಕಾಗಿ ಬಿಜೆಪಿ ಸೇರ್ಪಡೆ: ವಿರೋಧ ಪಕ್ಷಗಳ ಮೇಲೆ ಸಿದ್ದರಾಮಯ್ಯರ ಕಿಡಿ -
ಬಾಗಲಕೋಟೆಗೆ ಸಿದ್ದರಾಮಯ್ಯ ದ್ರೋಹ ಮಾಡಿದ್ರೆ ಪಕ್ಷ ಮತ್ತೆ ಗೆಲ್ಲುತ್ತಿತ್ತೇ? ಬಸವರಾಜ ಬೊಮ್ಮಾಯಿಗೆ ಕಾಂಗ್ರೆಸ್ ತಿರುಗೇಟು -
ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ದಕ್ಷಿಣ ಭಾರತದ ಧ್ವನಿ ಅಡಗಿಸುವ ಪಿತೂರಿ: ಮೋದಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ -
ಕಾವೇರಿ ನೀರಿನ ಬಾಕಿ ಬಿಲ್ ಕಟ್ಟುವವರಿಗಾಗಿ ಇಂದಿನಿಂದಲೇ 'ಒಟಿಎಸ್' ಆರಂಭ; 5.11 ಲಕ್ಷ ಮಂದಿಗೆ ಬಿಲ್ ಜತೆ ನೋಟಿಸ್ -
ಕೇರಳಂನಲ್ಲಿ ಕಾಂಗ್ರೆಸ್ - ಯುಡಿಎಫ್ ಮೈತ್ರಿಕೂಟಕ್ಕೆ ಮೂರನೇ ಎರಡರಷ್ಟು ಬಹುಮತ: ಡಿಸಿಎಂ ಡಿ.ಕೆ. ಶಿವಕುಮಾರ್ -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
ಧನುಷ್ ಜೊತೆ ಸ್ನೇಹ ಕಳೆದುಕೊಂಡಿದ್ದು ನನ್ನ ಜೀವನದ ದೊಡ್ಡ ನಷ್ಟ: ಪತ್ನಿ ನಯನತಾರ ಜೊತೆಗಿನ ಮನಸ್ತಾಪಕ್ಕೆ ವಿಘ್ನೇಶ್ ಶಿವನ್ ಬೇಸರ -
"ನಾನು ಔಟ್ ಆಗಿದ್ದಕ್ಕೇ ತುಂಬಾ ಖುಷಿಯಾಯ್ತು": ಸಿಎಸ್ಕೆ ಎದುರು ರನ್ ಮಳೆ ಹರಿಸಿದ ಬಳಿಕ ಪಡಿಕ್ಕಲ್ ಹೀಗಂದಿದ್ದೇಕೆ? -
2026ರ PUC ಫಲಿತಾಂಶಕ್ಕೆ ಕ್ಷಣಗಣನೆ; ಈ ಬಾರಿ ಡಿಜಿಲಾಕರ್ನಲ್ಲೂ ರಿಸಲ್ಟ್ ಲಭ್ಯ, ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru: ನಸುಕಿನ ಜಾವ 3 ಗಂಟೆಗೆ ರಾಪಿಡೋ ರೈಡರ್ ತೋರಿದ ಮಾನವೀಯತೆಗೆ ಮಹಿಳೆ ಫಿದಾ, Video Viral -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
Gold Price April 6: ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ












Click it and Unblock the Notifications