ಚಿತ್ರಗಳು : ಮಧ್ಯಪ್ರದೇಶದ ದೇವಾಲಯದಲ್ಲಿ ಡಿಕೆಶಿ ಹೋಮ, ಹವನ

ಬೆಂಗಳೂರು, ಜನವರಿ 23 : ಮಾಜಿ ಸಚಿವ, ಕನಕಪುರ ಶಾಸಕ ಡಿ. ಕೆ. ಶಿವಕುಮಾರ್ ಟೆಂಪಲ್ ರನ್ ಮುಂದುವರೆದಿದೆ. ಮಧ್ಯಪ್ರದೇಶದ ದೇವಾಲಯದಲ್ಲಿ ಅವರು ಹೋಮ, ಹವನ ಮಾಡಿದ್ದು, ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ.

ಗುರುವಾರ ಮಧ್ಯಪ್ರದೇಶದ ಧಾತಿಯಾ ಜಿಲ್ಲೆಯ ಪೀತಾಂಬರ ಪೀಠದ ಬಾಗಲ್ಮುಖಿ ಹಾಗೂ ದೂಮವತಿ ದೇಗುಲದಲ್ಲಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಹೋಮ ಮತ್ತು ವಿಶೇಷ ಪೂಜೆ ನೆರವೇರಿಸಿದರು. ಈ ಕುರಿತ ಚಿತ್ರಗಳನ್ನು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಸಂಕ್ರಾಂತಿ ಬಳಿಕ ಡಿ. ಕೆ. ಶಿವಕುಮಾರ್ ಹಲವು ದೇವಾಲಯಗಳಿಗೆ ಭೇಟಿ ನೀಡಿದ್ದಾರೆ. ಬೆಂಗಳೂರು ಮತ್ತು ತುಮಕೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಈಗ ಮಧ್ಯಪ್ರದೇಶದ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ಡಿ. ಕೆ. ಶಿವಕುಮಾರ್ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಎಐಸಿಸಿ ಅಧ್ಯಕ್ಷರ ಘೋಷಣೆಯನ್ನು ತಡ ಮಾಡುತ್ತಿದೆ. ಕೆಪಿಸಿಸಿ ಅಧ್ಯಕ್ಷರಾಗುವ ಸುದ್ದಿ ಹಬ್ಬುತ್ತಿದ್ದಂತೆ ಡಿ. ಕೆ. ಶಿವಕುಮಾರ್ ದೇವಾಲಯಗಳ ಭೇಟಿ ಆರಂಭಿಸಿದ್ದಾರೆ.

ಹೋಮದಲ್ಲಿ ಪಾಲ್ಗೊಂಡ ಡಿ. ಕೆ. ಶಿವಕುಮಾರ್

ಹೋಮದಲ್ಲಿ ಪಾಲ್ಗೊಂಡ ಡಿ. ಕೆ. ಶಿವಕುಮಾರ್

ಮಧ್ಯಪ್ರದೇಶದ ಪೀತಾಂಬರ ಪೀಠದ ಬಾಗಲ್ಮುಖಿ ಹಾಗೂ ದೂಮವತಿ ದೇವಾಲಯದಲ್ಲಿ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಗುರುವಾರ ಹೋಮದಲ್ಲಿ ಪಾಲ್ಗೊಂಡರು. ಬಳಿಕ ವಿಶೇಷ ಪೂಜೆಯನ್ನು ಸಲ್ಲಿಸಿದರು.

ಮಹಾಯಾಗದಲ್ಲಿ ಭಾಗಿ

ಮಹಾಯಾಗದಲ್ಲಿ ಭಾಗಿ

ಕುಣಿಗಲ್ ತಾಲೂಕಿನ ಶ್ರೀ ವಿದ್ಯಾಚೌಡೇಶ್ವರಿ ಮಹಾಸಂಸ್ಥಾನ ಮಠಕ್ಕೆ ಜನವರಿ 17ರ ಶುಕ್ರವಾರ ಭೇಟಿ ನೀಡಿದ್ದ ಡಿ. ಕೆ. ಶಿವಕುಮಾರ್ ಅಮ್ಮನವರ ವರ್ಧಂತಿ ಮಹೋತ್ಸವ ಹಾಗೂ ಶತಚಂಡಿ ಮಹಾಯಾಗದಲ್ಲಿ ಪಾಲ್ಗೊಂಡಿದ್ದರು.

ಸರ್ಕಲ್ ಮಾರಮ್ಮ ದೇವಾಲಯಕ್ಕೆ ಭೇಟಿ

ಸರ್ಕಲ್ ಮಾರಮ್ಮ ದೇವಾಲಯಕ್ಕೆ ಭೇಟಿ

ಡಿ. ಕೆ. ಶಿವಕುಮಾರ್ ಅಭಿಮಾನಿಗಳು ಹೊತ್ತಿದ್ದ ಹರಕೆಯನ್ನು ತೀರಿಸಲು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸರ್ಕಲ್ ಮಾರಮ್ಮ ದೇವಾಲಯಕ್ಕೆ ಮಂಗಳವಾರ ಭೇಟಿದ್ದರು. ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಹರಕೆ ತೀರಿಸಿದ್ದರು.

ಮಧ್ಯಪ್ರದೇಶಕ್ಕೆ ಭೇಟಿ

ಮಧ್ಯಪ್ರದೇಶಕ್ಕೆ ಭೇಟಿ

ರೈಲಿನಲ್ಲಿ ಮಧ್ಯಪ್ರದೇಶಕ್ಕೆ ತೆರಳಿದ ಡಿ. ಕೆ. ಶಿವಕುಮಾರ್ ಬಾಗಲ್ಮುಖಿ ಹಾಗೂ ದೂಮವತಿ ದೇವಾಲಯದಲ್ಲಿ ಗುರುವಾರ ಹೋಮ ನಡೆಸಿದ್ದಾರೆ, ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+