ಗ್ರೇಟರ್ ಬೆಂಗಳೂರು ವಿರೋಧ; ಆ 900 ಎಕರೆ ಜಾಗವನ್ನು ಕೊಟ್ಟಿದ್ದೇಕೆ? ಡಿ ಕೆ ಶಿವಕುಮಾರ್ ಪ್ರಶ್ನೆ
ರಾಮನಗರ, ಸೆಪ್ಟೆಂಬರ್27: ಬಿಡದಿಯಲ್ಲಿ ಗ್ರೇಟರ್ ಬೆಂಗಳೂರು ಸಮಗ್ರ ನಗರ ಯೋಜನೆಗೆ ವಿರೋಧ ಮಾಡುತ್ತಿರುವ ದೇವೇಗೌಡರು, ಕುಮಾರಸ್ವಾಮಿ, ಮಾಜಿ ಶಾಸಕ ಮಂಜುನಾಥ್ ಅವರು, ಬಿಜೆಪಿ ಸರ್ಕಾರ 900 ಎಕರೆ ಜಾಗವನ್ನು ಕೆಐಎಡಿಬಿಎಗೆ ನೀಡುವಾಗ ಸಹಕಾರ ಕೊಟ್ಟಿದ್ದೇಕೆ? ಈಗ ನನ್ನನ್ನು ಪ್ರಶ್ನೆ ಮಾಡುತ್ತಿರುವುದೇಕೆ? ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.
ಜಿಬಿಐಟಿ ವಿರುದ್ಧ ದೇವೇಗೌಡರು ಹೋರಾಟ ಮಾಡುವ ಕುರಿತು ರಾಮನಗರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಾತನಾಡಿ, ದೇವೇಗೌಡರು ಹೋರಾಟ ಮಾಡುವುದಾದರೆ ಬಹಳ ಸಂತೋಷ. ಈ ಯೋಜನೆಗೆ ಅಧಿಸೂಚನೆ ಹೊರಡಿಸಿದ್ದೇ ಅವರ ಸುಪುತ್ರ. ಈ ಬಿಡದಿ ಟೌನ್ ಶಿಪ್ ಗೆ ಡಿಎಲ್ ಎಫ್ ಜೊತೆ ಒಪ್ಪಂದ ಮಾಡಿಕೊಂಡಿದ್ದೂ ಅವರೇ, ಹಣ ಕಟ್ಟಿಸಿಕೊಂಡಿದ್ದೂ ಅವರೇ. ಅವರ ಆಡಳಿತ ಅವಧಿಯಲ್ಲಿ ಈ ಭೂಮಿಯನ್ನು ಯಾಕೆ ಡಿನೋಟಿಫಿಕೇಷನ್ ಮಾಡಲಿಲ್ಲ? ಯಡಿಯೂರಪ್ಪ ಅವರು ಕೆಐಎಡಿಬಿಗೆ ಭೂಮಿ ಕೊಟ್ಟಾಗ ಆ ಭಾಗದ ಎಲ್ಲಾ ರೈತರು ಪರಿಹಾರ ಪಡೆದಿದ್ದಾರೆ. ಈಗ ಆ ಜಾಗ ಕೆಐಎಡಿಬಿ ಸ್ವತ್ತಾಗಿದೆ. ಇವರೆಲ್ಲ ಅಂದು ಪ್ರಶ್ನೆ ಮಾಡದೇ ಸಹಕಾರ ಕೊಟ್ಟಿದ್ದೇಕೆ? ಎಂದು ಕೇಳಿದರು.

ಡಿನೋಟಿಫಿಕೇಶನ್ ಮಾಡುವುದು ಬೇಡ, ಆ ಭೂಮಿಯನ್ನು ಯಥಾಸ್ಥಿತಿಯಲ್ಲಿ ಬಿಡಿ ಎಂಬ ಆಗ್ರಹದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಅವರ ಮಾತು ಕೇಳಲು ನಾನು ತಯಾರಿಲ್ಲ. ನಮ್ಮ ಸರ್ಕಾರ ಕಾನೂನು ಪ್ರಕಾರ ಕೆಲಸ ಮಾಡುತ್ತಿದೆ. ಯಡಿಯೂರಪ್ಪ ಅವರ ಕಾಲದಲ್ಲೂ ಇಲ್ಲಿನ ಭೂಮಿಗೆ 90 ಲಕ್ಷದಿಂದ 1 ಕೋಟಿಗೆ ಪರಿಹಾರ ನಿಗದಿ ಮಾಡಿದಾಗ, ಆ ಜಾಗವನ್ನು ಯಥಾಸ್ಥಿತಿಯಲ್ಲೇ ಬಿಡಿಸಬಹುದಿತ್ತಲ್ಲವೇ? ಯಾಕೆ ಬಿಡಿಸಲಿಲ್ಲ? ಆಗ ಮಂಜುನಾಥ್ ಅವರೇ ಶಾಸಕರಾಗಿದ್ದರಲ್ಲವೇ? ಈ ಯೋಜನೆಗೆ ರೈತರ ವಿರೋಧವಿಲ್ಲ, ರೈತರ ಸಂಪೂರ್ಣ ಸಹಕಾರವಿದೆ ಎಂದು ತಿಳಿಸಿದರು.
ಈ ವಿಚಾರವಾಗಿ ಗಲಾಟೆಗಳಾಗುತ್ತಿವೆ ಎಂಬ ಪ್ರಶ್ನೆಗೆ ಉತ್ತರಿಸಿ, ಕಾನೂನಿದೆ, ಕಾನೂನು ಚೌಕಟ್ಟಿನಲ್ಲಿ ನಾವು ಮುಂದುವರಿಯುತ್ತೇವೆ. ನಾನು ರೈತರಿಗೆ ದೊಡ್ಡ ಆಫರ್ ಕೊಟ್ಟಿದ್ದೇನೆ. ಯಾರು ಈ ಪರಿಹಾರ ಬೇಡ ಎನ್ನುತ್ತಾರೋ ಅವರಿಗೆ ಕಾನೂನು ಪ್ರಕಾರ ಈ ಹಿಂದೆ ಹೊರಡಿಸಿದ್ದ ಅಧಿಸೂಚನೆಗೆ ಇರುವ ಮಾರ್ಗಸೂಚಿ ಮೌಲ್ಯ ಆಧಾರದ ಮೇಲೆ ನ್ಯಾಯಾಲಯಕ್ಕೆ ನಾವು ಹಣ ಠೇವಣಿ ಮಾಡುತ್ತೇವೆ. ಅವರ ಕಾಲದಲ್ಲೇ ಸರಿ ಮಾಡಬಹುದಿತ್ತಲ್ಲವೇ? ಅವರು ಯಾರೋ ಬ್ರೋಕರ್ ಹೇಳುತ್ತಾರೆ ಎಂದು ನಾನು ಕೇಳುವುದಿಲ್ಲ, ನೈಜ ರೈತರು ಯಾರು, ನಕಲಿ ರೈತರು ಯಾರು ಎಂಬುದೂ ಗೊತ್ತಿದೆ.
ಏಜೆಂಟ್ ಗಳು ಯಾರು ಎಂಬುದೂ ಗೊತ್ತಿದೆ. ಕೆಐಡಿಬಿಗೆ 900 ಎಕರೆ ಭೂಮಿ ಕೊಟ್ಟಾಗ ಯಾರು ಹಣ ಪಡೆದಿದ್ದಾರೆ ಎನ್ನುವ ಪಟ್ಟಿ ಬಿಡುಗಡೆ ಮಾಡಲೇ? ಟೊಯೋಟಾ ಕಂಪೆನಿಯವರು ನನ್ನನ್ನು ಭೇಟಿ ಮಾಡಿ ವಾಸದ ಉದ್ದೇಶಕ್ಕೆ 300 ಎಕರೆ ಭೂಮಿ ಬೇಕು ಎಂದು ಕೇಳಿದರು. ಅದಕ್ಕೆ ನಾನು ಹೇಳಿದೆ, 300 ಎಕರೆ ತೆಗೆದುಕೊಳ್ಳುವುದು ಮುಖ್ಯವಲ್ಲ. ಜಪಾನ್ ಟೌನ್ ಶಿಪ್ ಮಾದರಿಯಲ್ಲೇ ನಿಮ್ಮ ಟೌನ್ ಶಿಪ್ ಮಾಡಬೇಕು ಎಂದು ನಿರ್ದೇಶನ ನೀಡಿದ್ದೇನೆ ಎಂದು ತಿಳಿಸಿದರು.
ರಾಜಕೀಯವಾಗಿ ವಿರೋಧ ಮಾಡಲು ಆರ್.ಅಶೋಕ್, ದೇವೇಗೌಡರು ಆಗಮಿಸುತ್ತಿದ್ದಾರೆ ಎಂಬ ಬಗ್ಗೆ ಮಾತನಾಡಿ, ಅಶೋಕ್ ಅವರಾದರೂ ಬರಲಿ, ದೇವೇಗೌಡರಾದರೂ ಬರಲಿ. ಅವರ ರಾಜಕೀಯ ಹೋರಾಟಕ್ಕೆ ನಾನು ಬೇಸರ ಮಾಡಿಕೊಳ್ಳುವುದಿಲ್ಲ. ಅವರಿಗೂ ವಾಸ್ತವಾಂಶ ಗೊತ್ತಿದೆ. ಅಶೋಕ್ ಅವರಿಗೆ ಪೆನ್ ಹಿಡಿಯುವ ಅಧಿಕಾರ ಇದ್ದಾಗ ಈ ಭೂಮಿಯನ್ನು ಏಕೆ ಬಿಡಿಸಲಿಲ್ಲ? ಯಡಿಯೂರಪ್ಪ ಅವರು ಏಕೆ ಬಿಡಿಸಲಿಲ್ಲ? ದೇವೇಗೌಡರು ತಮ್ಮ ಮಗನ ಮೂಲಕ ಏಕೆ ಬಿಡಿಸಲಿಲ್ಲ? ಆಗ ಇದು ಅವರದೇ ಕ್ಷೇತ್ರವಾಗಿತ್ತು. ಆಗ ನಾನು ಮಂತ್ರಿಯಾಗಿರಲಿಲ್ಲ, ಅವರ ಮಗನಿಗೆ ಇದು ಸರಿ ಇಲ್ಲ ಬೇಡ ಎಂದು ಹೇಳಬಹುದಿತ್ತಲ್ಲವೇ? ಅವತ್ತು ಸರಿ ಮಾಡದೇ ಇವತ್ತು ರಾಜಕಾರಣ ಮಾಡಲು ನಮ್ಮ ಕಡೆ ಬೊಟ್ಟು ಮಾಡುತ್ತಿದ್ದಾರೆ. ಶಾಸಕ ಬಾಲಕೃಷ್ಣ ಅವರ ರಾಜಕೀಯ ವಿರೋಧಿಗಳು ಮಾತ್ರ ಇಂದು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
-
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ವಿವಿಧ ರಾಜ್ಯಗಳ ಚುನಾವಣೆ ಬಳಿಕ ಪ್ರಧಾನಿ ಭೇಟಿಗೆ ಸರ್ವಪಕ್ಷ ಸಂಸದರ ನಿಯೋಗ ತೀರ್ಮಾನ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು












Click it and Unblock the Notifications