ಸ್ವಾತಂತ್ರ್ಯ, ದೇಶ ಕುರಿತು ಡಿಕೆ ಶಿವಕುಮಾರ್ Rapid ಉತ್ತರ
ಬೆಂಗಳೂರು ಆಗಸ್ಟ್ 13: ಭಾರತಕ್ಕೆ ಸ್ವಾತಂತ್ರ್ಯ ಬಂದು 75ವರ್ಷ ತುಂಬುತ್ತಿರುವ ಸವಿನೆನಪಿನ ಅಮೃತ ಮಹೋತ್ಸವ ಸಂಬಂದ ಕರ್ನಾಟಕ ಕಾಂಗ್ರೆಸ್ ಬೃಹತ್ 'ಸ್ವಾತಂತ್ರ್ಯ ನಡಿಗೆ' ಹಮ್ಮಿಕೊಂಡಿದೆ. ಇದರ ಭಾಗವಾಗಿ ಸಾಮಾಜಿಕ ಜಾಲತಾಣ ಕೂ ವೇದಿಕೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ದೇಶ, ಸ್ವಾತಂತ್ರ್ಯ ಕುರಿತು ಉತ್ತರಿಸಿದ್ದಾರೆ.
75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಆಗಸ್ಟ್ 15ರಂದು ಮಧ್ಯಾಹ್ನ 2ಗಂಟೆಗೆ ನಗರದ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದವರೆಗೆ ಸ್ವಾತಂತ್ರ್ಯ ಪಾದಯಾತ್ರೆಯನ್ನು (ಫ್ರೀಡಂಮಾರ್ಚ)ಹಮ್ಮಿಕೊಂಡಿದೆ.
ಇದರಲ್ಲಿ ಭಾಗವಹಿಸುವಂತೆ ಕೋರಿರುವ ಕೆಪಿಸಿಸಿ ಅಧ್ಯಕಷ ಡಿ.ಕೆ.ಶಿವಕುಮಾರ್ ಅವರು ರ್‍ಪಿಡ್ ಸುತ್ತಿನ ಪ್ರಶ್ನೆಗಳಿಗೆ ಏನೆಂದು ಉತ್ತರಿಸಿದ್ದಾರೆ ಎಂದು ಇಲ್ಲಿ ನೋಡಬಹುದು.

ನಿರುದ್ಯೋಗ, ಕೋಮುಗಲಭೆ, ಅಸಮಾನತೆ ನಿವಾರಣೆ ಆಗಿರಬೇಕು
ಭಾರತದ 100ನೇ ವರ್ಷದ ಸ್ವಾತಂತ್ರ್ಯೊತ್ಸವದ ವೇಳೆ ಯಾವ ಮೂರು ವಿಷಯಗಳು ನಿವಾರಣೆ ಆಗಿರಬೇಕೆಂದು ಭಾವಿಸುತ್ತೀರಿ ಎಂಬ ಕಾಂಗ್ರೆಸ್‌ನ ಪ್ರಶ್ನೆಗೆ ಉತ್ತರಿಸಿದ ಡಿ.ಕೆ.ಶಿವಕುಮಾರ್ ಅವರು, ಸ್ವಾತಂತ್ರ್ಯ ಶತಮಾನೋತ್ಸವ ವೇಳೆಗೆ ದೇಶದಲ್ಲಿ ನಿರುದ್ಯೋಗ, ಕೋಮುಗಲಭೆ ಮತ್ತು ಮಹಿಳಾ ಅಸಮಾನತೆ ತೊಲಗಿರಬೇಕು ಎಂದು ಬಯಸುತ್ತೇನೆ. ಈ ನಿಟ್ಟಿನಲ್ಲಿ ಮುಂದೆ ಅಧಿಕಾರಕ್ಕೆ ಬರಲಿರುವ ಕಾಂಗ್ರೆಸ್ ಶ್ರಮಿಸಲಿದೆ ಎಂದು ತಿಳಿಸಿದ್ದಾರೆ.
ಭಾರತವನ್ನು ಮೂರು ಪದಗಳಲ್ಲಿ ವಿವರಿಸುವುದಾದರೆ 'ನನ್ನ ಪ್ರೀತಿಯ ರಾಷ್ಟ್ರ' ಎಂದು ಹೇಳಿದ್ದಾರೆ. ನನ್ನ ಪ್ರಕಾರ ಮೂರೇ ಪದಗಳಲ್ಲಿ ಸ್ವಾತಂತ್ರ್ಯ ಎಂದರೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ನೀಡಿದ 'ಸಂವಿಧಾನ, ಹಕ್ಕುಗಳು, ಅಹಿಂಸೆ ಎಂದು ತಿಳಿಸಿದರು.
ಭಾರತ ರೂಪಿಸಲು ಕಾರಣವಾದ ಐದು ಅಂಶಗಳು
ಇನ್ನೂ ಸ್ವಾತಂತ್ರ್ಯ ಭಾರತ ರೂಪಿಸಲು ಕಾರಣವಾದ ಐದು ಅಂಶಗಳ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಮಹಾತ್ಮ ಗಾಂಧಿಯವರ ಹತ್ಯೆ, ಮಾಜಿ ಪ್ರಧಾನಿ ದಿ.ಜವಾಹರಲಾಲ್ ನೆಹರು ಅವರಿಂದ ಭಾಷಾವಾರು ರಾಜ್ಯಗಳ ರಚನೆ, ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಅವರು ಹಸಿರು ಕ್ರಾಂತಿ, ಬ್ಯಾಂಕುಗಳ ರಾಷ್ಟ್ರೀಕರಣ. ರಾಜೀವ್ ಗಾಂಧಿಯವರ ಗಣಕಯಂತ್ರ ಕ್ರಾಂತಿ ಹಾಗೂ ಸೋನಿಯಾ ಗಾಂಧಿ ಅವರ ನರೇಗಾ ನೀತಿಗಳು. ಇವು ಭಾರತವನ್ನು ರೂಪಿಸಲು ಪ್ರಮುಖ ಕಾರಣವಾಗಿವೆ ಎಂದರು.

ರಾಷ್ಟ್ರಧ್ವಜದ ಮೂರು ಬಣ್ಣಗಳು ನಾವೆಲ್ಲರೂ ಒಗ್ಗಟ್ಟಿನಿಂದ ನಿಲ್ಲಬೇಕು ಎಂಬುದನ್ನು ಸೂಚಿಸುತ್ತದೆ. ಅಂತೆಯೇ ನಾವೇಲ್ಲರೂ ಒಗ್ಗಟ್ಟಿನಿಂದ ದೇಶಕ್ಕಾಗಿ ನಿಲ್ಲಬೇಕು ಎನ್ನುವ ಮೂಲಕ ಕೂ ವೇದಿಕೆಯಲ್ಲಿ ಹಲವು ಪ್ರಶ್ನೆಗಳಿಗೆ ಅವರು ಉತ್ತರಿಸಿದರು. ಅಲ್ಲದೇ ಸಂಚಾರ ದಟ್ಟಣೆ ಕಡಿಮೆ ಮಾಡಲು ಸಾರ್ವಜನಿಕರ ಸಾರಿಗೆಯನ್ನೇ ಬಳಸಿ ಎಂದು ಡಿ.ಕೆ.ಶಿವಕುಮಾರ್ ಕರೆ ನೀಡಿದರು.
ಇನ್ನು ಕಾಂಗ್ರೆಸ್ ನಡೆಸುತ್ತಿರುವ ಐತಿಹಾಸಿಕ 'ಸ್ವಾತಂತ್ರ್ಯ ನಡಿ'ಗೆ ಕಾರ್ಯಕ್ರಮದಲ್ಲಿ ನಾನೂ ಭಾಗವಹಿಸುತ್ತೇನೆ, ನೀವು ಭಾಗವಹಿಸಿ ಎನ್ನುವ ಮೂಲಕ ಕಾಂಗ್ರೆಸ್ ನಾಯಕರು ಅಭಿಯಾನ ಆರಂಭಿಸಿದ್ದಾರೆ. ಪ್ರಿಯಾಂಕ್ ಖರ್ಗೆ ಸೇರಿದಂತೆ ಅನೇಕ ನಾಯಕರು ಕೂ ಮಾಡಿದ್ದಾರೆ.
-
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ












Click it and Unblock the Notifications