Karnataka Exit Poll: ಸರ್ವೆಗಳನ್ನು ನಂಬಲ್ಲ ಎಂದ ಡಿಕೆ ಶಿವಕುಮಾರ್
ಎಕ್ಸಿಟ್ ಪೋಲ್ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಸಮೀಕ್ಷೆಗಳನ್ನು ನಾನು ನಂಬುವುದಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್ ಈ ಬಾರಿ 146 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ. ನಾವು ಕಷ್ಟ ಪಟ್ಟು ಕೆಲಸ ಮಾಡಿದ್ದೇವೆ, ಗೆಲುವು ಸಾಧಿಸುವ ನಂಬಿಕೆ ಇದೆ ಎಂದರು. ರಾಜ್ಯದಲ್ಲಿ ಡಬಲ್ ಇಂಜಿನ್ ಫೇಲ್ ಆಗಿದ್ದು ಜನ ಬದಲಾವಣೆ ಬಯಸಿದ್ದಾರೆ ಎಂದು ಹೇಳಿದರು.
ಜನ ನಮ್ಮ ಮೇಲೆ ನಂಬಿಕೆ ಇಟ್ಟಿದ್ದಾರೆ, ಬದಲಾವಣೆ ಬಯಸಿದ್ದಾರೆ ನಾವು ಹೋದಲ್ಲೆಲ್ಲಾ ಹೆಚ್ಚಿನ ಪ್ರೀತಿ ತೋರಿಸಿದ್ದಾರೆ ಎಂದು ಹೇಳಿದರು. ಬಿಜೆಪಿಯವರು ಅಭಿವೃದ್ಧಿ ಮಾಡಿದ್ದರೆ, ಮೋದಿ ಹೆಸರಿನಲ್ಲಿ ಮತ ಕೇಳುತ್ತಿರಲಿಲ್ಲ ಎಂದಿದ್ದಾರೆ.

ನರೇಂದ್ರ ಮೋದಿ ರಾಜ್ಯದಲ್ಲಿ ಪ್ರಚಾರ ಮಾಡಿರುವುದು ಸಹಾಯಕ್ಕೆ ಬರಲ್ಲ ಎಂದು ಹೇಳಿದ್ದಾರೆ. ಅವರು ಅಭಿವೃದ್ಧಿಯ ಬಗ್ಗೆ ಮಾತನಾಡುವುದು ಬಿಟ್ಟು ಧರ್ಮದ ಹೆಸರಿನಲ್ಲಿ ಮತ ಕೇಳಿದ್ದಾರೆ, ಜನಕ್ಕೆ ಈಗ ಎಲ್ಲವೂ ಅರ್ಥವಾಗಿದೆ ಎಂದು ಹೇಳಿದರು.
ಸಿದ್ದರಾಮಯ್ಯ ಜೊತೆ ಈಗಾಗಲೇ ಚರ್ಚೆ ಮಾಡಿದ್ದೇನೆ, ಅವರು ಒಂದು ದಿನವೂ ವಿಶ್ರಾಂತಿ ಪಡೆಯದೆ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ನಾವು ಎಲ್ಲಾ ಕಡೆ ಓಡಾಡಿ ಪ್ರಚಾರ ಮಾಡಿದ್ಧೇವೆ, ಅವರ ಬದ್ಧತೆಗೆ ಧನ್ಯವಾದ ತಿಳಿಸಿದ್ದೇನೆ ಎಂದರು. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕ ಗಾಂಧಿ ಕೂಡ ಉತ್ತಮವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು.












Click it and Unblock the Notifications