ಭಾರೀ ಕುತೂಹಲ ಮೂಡಿಸಿದ ಜಗದೀಶ್ ಶೆಟ್ಟರ್ - ರಮೇಶ್ ಜಾರಕಿಹೊಳಿ ಭೇಟಿ; ಡಿ ಕೆ ಶಿವಕುಮಾರ್ ಹೇಳಿದ್ದೇನು?
ಬೆಂಗಳೂರು, ಅಕ್ಟೋಬರ್ 18: ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗ ಜಗದೀಶ್ ಶೆಟ್ಟರ್ ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ ಬಿಸಿತುಪ್ಪವಾಗಿ ಪರಿಣಮಿಸಿದ್ದಾರೆ.ಈಗಾಗಲೇ ಉತ್ತರ ಕರ್ನಾಟಕ ಭಾಗದಲ್ಲಿ ಲೋಕಸಭಾ ಚುನಾವಣೆ ಭರ್ಜರಿ ಪಕ್ಷ ಸಂಘಟನೆ ನಡೆಸಿರುವ ಜಗದೀಶ್ ಶೆಟ್ಟರ್ ಅವರನ್ನ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ ಮಾಡಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.
ಈ ಕುರಿತು ಬುಧವಾರ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಜಗದೀಶ್ ಶೆಟ್ಟರ್ ಹಾಗೂ ರಮೇಶ್ ಜಾರಕಿಹೊಳಿ ಭೇಟಿ ಕುರಿತು ಮಾಧ್ಯಮಗಳ ಮಾತನಾಡಿ, ಹಾಗೆಲ್ಲ ಎಲ್ಲದರಲ್ಲೂ ಅನುಮಾನಪಡಲು ಆಗಲ್ಲ. ಜಗದೀಶ್ ಶೆಟ್ಟರ್ ಅವರು, ತಮ್ಮ ಶಕ್ತಿ ಏನಿದೆ ಎಂದು ತೋರಿಸಿದ್ದಾರೆ. ಈ ಬಗ್ಗೆ ನಾನೇನು ಹೆಚ್ಚು ಮಾತನಾಡುವುದಿಲ್ಲ ಎಂದು ಹೇಳಿದರು.

ಬಿಜೆಪಿಯ ತಂಡವೊಂದು ಸರ್ಕಾರ ಬೀಳಿಸಲು ಕೆಲಸ ಮಾಡುತ್ತಿದೆ ಎನ್ನುವ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ಎಲ್ಲಾ ಗೊತ್ತಿದೆ ನನಗೆ. ಯಾವ ಶಾಸಕರನ್ನು, ಯಾರು ಯಾವಾಗ ಭೇಟಿ ಮಾಡಿದರು, ಮಾಡುತ್ತಿದ್ದಾರೆ ಎಂದು ಸಂಬಂಧಪಟ್ಟವರೇ ನನಗೆ ಮತ್ತು ಸಿಎಂಗೆ ಮಾಹಿತಿ ನೀಡುತ್ತಿದ್ದಾರೆ.
ಬಿಜೆಪಿಯವರು ಏನು ಆಫರ್ ಕೊಡುತ್ತಿದ್ದಾರೆ ಅನ್ನೋದನ್ನೂ ಹೇಳಿದ್ದಾರೆ. ನಮ್ಮ ಬಳಿ ಪ್ರತಿಯೊಂದು ಮಾಹಿತಿ ಇದೆ. ಯಾರನ್ನೆಲ್ಲ ಭೇಟಿಯಾಗಿದ್ದಾರೆ ಎಂಬುದನ್ನು ಅಧಿವೇಶನದಲ್ಲಿ ಹೇಳಿಸುತ್ತೇನೆ ಎಂದು ಹೇಳಿದರು.
ಬಿಜೆಪಿ ಮತ್ತು ಜೆಡಿಎಸ್ ನಿಮ್ಮ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಮತ್ತು ಜನತಾದಳದವರು ಹತಾಶೆಯ ಅಂತಿಮ ಸ್ಥಿತಿ ತಲುಪಿದ್ದಾರೆ. ಅವರಿಗೆ ಡಾಕ್ಟರ್‌ಗಳೇ ಮೇಜರ್ ಆಪರೇಶನ್ ಮಾಡಬೇಕು" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.












Click it and Unblock the Notifications