DCM DK Shivakumar: ಮೆಟ್ರೋ ಟಿಕೆಟ್‌ ದರ ಇಳಿಕೆಗೆ ಮುಂದಾದ BMRCL: ಡಿ ಕೆ ಶಿವಕುಮಾರ್‌ ಏನಂದ್ರು?

ಬೆಂಗಳೂರು, ಫೆಬ್ರವರಿ 13: ಮೆಟ್ರೋ ದರ ಇಳಿಸಬೇಕು ಎಂದು ನಮ್ಮ ಸರ್ಕಾರ ಅಭಿಪ್ರಾಯವನ್ನು ಬಿಎಂಆರ್ ಸಿಎಲ್ ಗೆ ತಿಳಿಸಿದ್ದು, ಅಂತಿಮ ತೀರ್ಮಾನ ಕೇಂದ್ರ ಸಮಿತಿಯದ್ದು ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಈ ಕುರಿತು ವಿಧಾನಸೌಧ ಆವರಣದಲ್ಲಿ ಗುರುವಾರ ಮಾಧ್ಯಮಗಳ ಜೊತೆಗೆ ಬಿಎಂಆರ್ ಸಿಎಲ್ ಮೆಟ್ರೋ ಟಿಕೆಟ್ ದರ ಕಡಿಮೆ ಮಾಡಲು ಮುಂದಾಗಿರುವ ಬಗ್ಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ನಮಗೂ ಅದಕ್ಕೂ ಸಂಬಂಧವಿಲ್ಲ. ಈ ವಿಚಾರ ರಾಜ್ಯ ಸರ್ಕಾರದ ಸುಪರ್ದಿಗೆ ಬರಲ್ಲ, ಇದಕ್ಕಾಗಿಯೇ ಕೇಂದ್ರ ಸಮಿತಿ ರಚಿಸಲಾಗಿದೆ. ಜನರ ಮನವಿ ಆಲಿಸಿ ಮುಖ್ಯಮಂತ್ರಿಗಳು ಮೆಟ್ರೋ ದರ ಇಳಿಸುವ ಬಗ್ಗೆ ಅಭಿಪ್ರಾಯ ತಿಳಿಸಿದ್ದಾರೆ. ಜನಸಾಮಾನ್ಯರು ಹಾಗೂ ಮೆಟ್ರೋ ಹಿತಾಸಕ್ತಿ ಕಾಯಲು ಯಾವ ನಿರ್ಧಾರ ಮಾಡುತ್ತಾರೋ ಮಾಡಲಿ. ಈ ದರ ನಿಗದಿಗೆ ನ್ಯಾಯಾಧೀಶರ ನೇತೃತ್ವದ ಪ್ರತ್ಯೇಕ ಕೇಂದ್ರ ಸಮಿತಿ ಮಾಡಲಾಗಿದೆ. ಆ ಸಮಿತಿಗೆ ನಾವು ನಮ್ಮ ಅಭಿಪ್ರಾಯ ತಿಳಿಸುತ್ತೇವೆ, ಅಂತಿಮ ನಿರ್ಧಾರ ಅವರದು ಎಂದು ತಿಳಿಸಿದರು.

DK Shivakumar reaction on the reduction in metro ticket prices

ಮೆಟ್ರೋ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಿಗಳ ಜತೆ ಬೆಳಗ್ಗೆ ಚರ್ಚೆ ಮಾಡಿದ್ದು, ಈ ದರವನ್ನು ಮರು ಪರಿಶೀಲನೆ ಮಾಡಬೇಕು ಎಂದು ಮುಖ್ಯಮಂತ್ರಿಗಳು ಹಾಗೂ ನಾನು ಹೇಳಿದ್ದೇವೆ. ಆದರೆ ಮೆಟ್ರೋ ದರ ಪರಿಷ್ಕರಣೆ ನಮ್ಮ ಕೈಯಲ್ಲಿ ಇಲ್ಲ. ಕೇಂದ್ರ ಸರ್ಕಾರದ ಕಾರ್ಯದರ್ಶಿಗಳೇ ಮೆಟ್ರೋಗೆ ಮುಖ್ಯಸ್ಥರಾಗಿದ್ದಾರೆ. ಮೆಟ್ರೋ ದರ ನಿಗದಿಗೆ ರಚಿಸಲಾಗಿರುವ ಸಮಿತಿ ಸಾಧಕ ಬಾಧಕಗಳನ್ನು ನೋಡಿ ತೀರ್ಮಾನ ಮಾಡುತ್ತದೆ. ದರ ಏರಿಕೆ ಮಾನದಂಡಗಳನ್ನು ಪರಿಶೀಲಿಸಿ, ಮತ್ತೆ ಲೆಕ್ಕಾಚಾರ ಮಾಡಿ ದರ ಕಡಿಮೆ ಮಾಡಲು ಸಮಿತಿಯ ಮುಂದೆ ಪ್ರಸ್ತಾಪ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ಇನ್ನೂ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದು, ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್) ಇತ್ತೀಚೆಗೆ ಪರಿಷ್ಕರಿಸಿರುವ ಪ್ರಯಾಣ ದರ ಏರಿಕೆ ಹಲವು ರೀತಿಯ ವೈಪರೀತ್ಯಗಳಿಂದ ಕೂಡಿದ್ದು, ಕೆಲವು ಕಡೆಗಳಲ್ಲಿ ಪ್ರಯಾಣ ದರ ದುಪ್ಪಟ್ಟಾಗಿರುವುದನ್ನು ಗಮನಿಸಿದ್ದೇನೆ. ಇದರ ವಿರುದ್ಧ ವ್ಯಕ್ತವಾದ ಸಾರ್ವಜನಿಕರ ವಿರೋಧವನ್ನು ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಪ್ರಯಾಣ ದರ ಇಳಿಸುವಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ.

ಮೆಟ್ರೊ ರೈಲು ವ್ಯವಸ್ಥೆ ದೊಡ್ಡ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮಾಡಬೇಕಾಗಿರುವ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾಗಿರುವ ಕಾರಣ ಪ್ರಯಾಣ ದರ ಪರಿಷ್ಕರಣೆ ಅನಿವಾರ್ಯವಾಗಿತ್ತು ಎನ್ನುವುದು ನಿಜವಾದರೂ ಅಂತಿಮವಾಗಿ ಪ್ರಯಾಣಿಕರ ಹಿತರಕ್ಷಣೆ ಮಾಡಬೇಕಾಗಿರುವುದು ನಮ್ಮ ಕರ್ತವ್ಯ ಎನ್ನುವುದನ್ನು ಬಿಎಂಆರ್‌ಸಿಎಲ್ ಗಮನಕ್ಕೆ ತಂದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+