DK Shivakumar: ಸಿಎಂ ಆಗುವ ಕುರಿತು ವಿನಯ್ ಗುರೂಜಿ ಭವಿಷ್ಯ: ಡಿ ಕೆ ಶಿವಕುಮಾರ್‌ ಏನಂದ್ರು?

ಬೆಂಗಳೂರು, ಜನವರಿ 11: ಡಿ.ಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಆಗುವಂತ ಯೋಗವಿದೆ. ಗುರುಗಳ ದಯೆ, ಬಲದಿಂದ ಡಿ ಕೆ ಶಿವಕುಮಾರ್‌ ಅವರು ಮುಖ್ಯಮಂತ್ರಿ ಆಗಲಿದ್ದಾರೆ ಎಂಬುದಾಗಿ ವಿನಯ್ ಗುರೂಜಿ ಭವಿಷ್ಯ ನುಡಿದಿದ್ದಾರೆ. ಈ ಭವಿಷ್ಯದ ಕುರಿತು ರಾಜ್ಯ ರಾಜಕೀಯದಲ್ಲಿ ಚರ್ಚೆ ನಡೆಯುತ್ತಿದ್ದು, ಈ ಕುರಿತು ಡಿಸಿಎಂ ಡಿ ಕೆ ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ.

ಇದೇ ಅವಧಿಯಲ್ಲಿ ನೀವು ಸಿಎಂ ಆಗುತ್ತೀರಿ ಎಂಬ ವಿನಯ್ ಗುರೂಜಿ ಅವರ ಹೇಳಿಕೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಸರ್ಕಾರ ಸುಭದ್ರವಾಗಿದ್ದು, ಯಾವುದೇ ಸ್ವಾಮೀಜಿಗಳು ನಮ್ಮ ಸರ್ಕಾರದ ಬಗ್ಗೆ ಭವಿಷ್ಯ ನುಡಿಯುವುದು ಬೇಡ ಎಂದು ಮನವಿ ಮಾಡುತ್ತೇನೆ. ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದು ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.

DK Shivakumar Reaction to Vinay Guruji s statement on becoming CM

ಗಾಂಧಿ ಭಾರತ ಕಾರ್ಯಕ್ರಮ ಅಂಗವಾಗಿ ಇದೇ ತಿಂಗಳು 21ರಂದು ನಡೆಯಲಿರುವ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಹಾಗೂ 100 ಕಾಂಗ್ರೆಸ್ ಕಚೇರಿ ನಿರ್ಮಾಣದ ಬಗ್ಗೆ ಹಿರಿಯ ನಾಯಕರ ಸಭೆಯಲ್ಲಿ ಚರ್ಚಿಸಲಾಯಿತುಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಈಗಾಗಲೇ 72 ಕಡೆ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಅರ್ಜಿ ಬಂದಿವೆ. ಉಳಿದ ಕಡೆಗಳು ಸೇರಿ 100 ಕಚೇರಿ ನಿರ್ಮಾಣ ಮಾಡಲಾಗುವುದು. ಸಚಿವರು ಪಕ್ಷದ ಹಿರಿಯ ನಾಯಕರಿಗೆ ಇದರ ಜವಾಬ್ದಾರಿ ನೀಡಲಾಗಿದೆ. ಶಾಸಕರಿಗೂ ಬೇರೆ ಬೇರೆ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿಸಿದರು.

ಪವರ್ ಶೇರಿಂಗ್ ಬಗ್ಗೆ ಚರ್ಚೆ ಆಗುತ್ತಿರುವಾಗ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಮಾತನಾಡಿ, ಯಾವ ಪವರ್ ಇಲ್ಲ, ಶೇರು ಇಲ್ಲ. ಐದು ವರ್ಷ ಕಾಂಗ್ರೆಸ್ ಸರ್ಕಾರ ಇರುತ್ತದೆ ಎಂದರು. ಇನ್ನೂ ಜಾತಿ ಗಣತಿ ವಿರೋಧಿಸಿ ಒಕ್ಕಲಿಗ ಹಾಗೂ ಲಿಂಗಾಯತ ನಾಯಕರ ಸಭೆ ಬಗ್ಗೆ ನನಗೆ ಗೊತ್ತಿರುವ ಮಾಹಿತಿ ಪ್ರಕಾರ ಈ ಬಗ್ಗೆ ಯಾವುದೇ ಸಭೆ ಇಲ್ಲ. ಅದರ ಅಗತ್ಯವಿಲ್ಲ. ಮುಖ್ಯಮಂತ್ರಿಗಳು ಈ ವಿಚಾರವನ್ನು ಸಚಿವ ಸಂಪುಟದಲ್ಲಿ ಪ್ರಸ್ತಾಪಿಸುವುದಾಗಿ ಹೇಳಿದ್ದು, ಅಲ್ಲಿ ನಾವು ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.

ಜನವರಿ 13ರಂದು ಕರೆಯಲಾಗುವ ಸಿಎಲ್ ಪಿ ಸಭೆ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿ, ನಾನು ಹಾಗೂ ಸಿಎಂ ಚರ್ಚೆ ಮಾಡಿಯೇ ಕರೆದಿದ್ದೇವೆ. ಅಂದು ಇಡೀ ದಿನ ಪಕ್ಷಕ್ಕೆ ಮುಡಿಪಾಗಿಡಬೇಕು ಎಂದು ಹೇಳಿ, ಅಂದಿನ ಕಾರ್ಯಕ್ರಮ ರದ್ದು ಮಾಡಿದ್ದೇವೆ. ಬೆಳಗ್ಗೆ 11 ಗಂಟೆಗೆಭಾರತ ಜೋಡೋ ಭವನದಲ್ಲಿ ಬ್ಲಾಕ್, ಜಿಲ್ಲಾ ಅಧ್ಯಕ್ಷರ ಸಭೆ ಕರೆಯಲಾಗಿದೆ. ಸಂಜೆ 4 ಗಂಟೆಗೆ ಪದಾಧಿಕಾರಿಗಳ ಸಭೆ ಕರೆದಿದ್ದೇವೆ. ಸಂಜೆ 6 ಗಂಟೆಗೆ ಶಾಸಕರು, ಸಚಿವರ ಸಭೆ ಮಾಡಿ ಜವಾಬ್ದಾರಿ ನೀಡಲಾಗುವುದು. 14ರಂದು ನಾನು ಹಾಗೂ ಸಿಎಂ ದೆಹಲಿಗೆ ತೆರಳಲಿದ್ದು, 15ರಂದು ದೆಹಲಿಯಲ್ಲಿ ಕಾಂಗ್ರೆಸ್ ನೂತನ ಕಚೇರಿ ಉದ್ಘಾಟನೆ ಮಾಡಲಾಗುವುದು ಎಂದು ತಿಳಿಸಿದರು.

ಪ್ರತಿ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂಬ ಕುಮಾರಸ್ವಾಮಿ ಆರೋಪದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ನಮಗೆ ಈ ವಿಚಾರ ಗೊತ್ತಿಲ್ಲ. ಅವರು ತಮ್ಮ ಅನುಭವದ ಮೇಲೆ ಮಾತನಾಡುತ್ತಿರಬೇಕು ಎಂದು ತಿಳಿಸಿದರು. ಇನ್ನೂ ಶತ್ರುಗಳ ನಾಶಕ್ಕೆ ಪೂಜೆ ಮಾಡಿಸಿದ್ದಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಉತ್ತರಿಸಿ, ಅದು ಅವರ ಅನುಭವವಲ್ಲವೇ. ಅವರು ಕದ್ದು ಮುಚ್ಚಿ ಹೋಮ ಮಾಡುತ್ತಾರೆ. ನಾನು ಬಹಿರಂಗವಾಗಿ ಮಾಡುತ್ತೇನೆ. ದಿನ ಬೆಳಗಾದರೆ ನಾನು ದೇವರಿಗೆ ಪೂಜೆ ಮಾಡುತ್ತೇನೆ ಎಂದರು.

ನಮ್ಮ ಸಭೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂಬ ರಾಜಣ್ಣ ಅವರ ಹೇಳಿಕೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ನಿನಗೆ ಈ ಬಗ್ಗೆ ಗೊತ್ತಿಲ್ಲ. ನಾವು ಯಾರನ್ನೂ ತಡೆದಿಲ್ಲ. ಅದರ ಅವಶ್ಯಕತೆ ನಮಗಿಲ್ಲ. ದೊಡ್ಡವರ ಬಗ್ಗೆ ಮಾತನಾಡುವುದು ಬೇಡ ಡಿಸಿಎಂ ಡಿ ಕೆ ಶಿವಕುಮಾರ್‌ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+