ಹಾಸನಾಂಬ ತಾಯಿ ದರ್ಶನ ಪಡೆದ ಸಿಎಂ, ಡಿಸಿಎಂ: ಯಾರಿಗೆ ತಾಯಿ ಪ್ರಸಾದ?
ಬೆಂಗಳೂರು, ಅಕ್ಟೋಬರ್ 17: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಾಸನಾಂಬ ತಾಯಿಗೆ ಸಿಎಂ ಸ್ಥಾನದ ಪರೀಕ್ಷೆ ಒಡ್ಡಿದ್ದು, ಹಾಸನಾಂಬ ತಾಯಿ ಸಿದ್ದರಾಮಯ್ಯ ಅವರಿಗೆ ಸೊನ್ನೆ, ಡಿ.ಕೆ. ಶಿವಕುಮಾರ್ ಅವರಿಗೆ ಅಂಕದ ಪ್ರಸಾದ ನೀಡಿದ್ದಾಳೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತಿಳಿಸಿದ್ದಾರೆ.
ಹಾಸನಾಂಬ ದರ್ಶನದಲ್ಲಿ ಡಿ.ಕೆ. ಶಿವಕುಮಾರ್ ಅವರಿಗೆ ಎರಡು ಹೂವುಗಳ ಪ್ರಸಾದ ಸಿಕ್ಕಿದೆ. ಒಂದು ಪ್ರಸಾದದಲ್ಲಿ ಕೆಂಪು ಹೂ ಬಂದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಗೆ ಎನ್ನುವ ಸಂದೇಶ ನೀಡಿದೆ. ಮತ್ತೊಂದು ಪ್ರಸಾದದಲ್ಲಿ ಹಳದಿ ಹೂ ಬಂದಿದ್ದು, ಅವರಿಗೆ ಮುಖ್ಯಮಂತ್ರಿ ಆಗುವುದಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು ವಿವರಿಸಿದರು. ಸಿದ್ದರಾಮಯ್ಯ ಅವರು ಸ್ಪರ್ಧಿಸುವ ರೀತಿಯಲ್ಲಿ ಮರುದಿನವೇ ಹಾಸನಾಂಬ ದೇವರ ಬಳಿ ವರ ಕೇಳುವುದಕ್ಕೆ ಹೋಗಿದ್ದಾರೆ. ಆದರೆ ಸಿದ್ದರಾಮಯ್ಯ ಅವರಿಗೆ ವರ ನೀಡಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರ ಬಂದು ಎರಡೂವರೆ ವರ್ಷ ಆಗಿದ್ದು, ನವೆಂಬರ್ ಕ್ರಾಂತಿ ಶುರುವಾಗಿದೆ. ಡಿ.ಕೆ. ಶಿವಕುಮಾರ್ ಅವರು ಇಷ್ಟು ದಿನ ಹೇಳದ ಸತ್ಯವನ್ನು ಈ ಸಂದರ್ಭದಲ್ಲಿ ಪದೇ ಪದೇ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಸಿದ್ದರಾಮಯ್ಯ ಅವರಿಗೆ ಬೆದರಿಕೆ ಹಾಕುವುದಕ್ಕೆ ಹೇಳುತ್ತಿದ್ದಾರೆಯೇ ಎಂದು ಪ್ರಶ್ನಿಸಿದರು. ಅವರ ಹೇಳಿಕೆ ನಿಜವಾಗಿದ್ದರೆ ಕರೆ ಮಾಡಿದವರು ಯಾರು, ಯಾವ ನಂಬರ್‍ನಿಂದ ಕರೆ ಬಂದಿತ್ತು ಮತ್ತು ಯಾವ ಕಾರಣಕ್ಕೆ ಕರೆ ಮಾಡಿದರು ಎಂದು ನಿಜ ಹೇಳಬೇಕು ಎಂದು ತಿಳಿಸಿದರು.
ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸವಾಲು ಹಾಕಿದ್ದಾರೆ. ಸಿಎಂ ಸ್ಥಾನ ನೀಡುವುದು ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟಿದ್ದು, ಆದರೆ ಹೇಳಿಕೆ ನೀಡಿರುವ ಉದ್ದೇಶ ಅಧಿಕಾರ ಹಸ್ತಾಂತರ ಸಮಯ ಮತ್ತು ಕ್ರಾಂತಿ ಎಂಬುದು ನವೆಂಬರ್‍ನಲ್ಲಿ ಆಗಬೇಕು ಎಂದು ತಿಳಿಸಿದರು. ಶಿವಕುಮಾರ್ ಅವರು ನಿಷ್ಠಾವಂತ ಪಕ್ಷದ ಕಾರ್ಯಕರ್ತ ಎಂದು ಹೇಳುತ್ತಾರೆ. ಹಾಗಿದ್ದಲ್ಲಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ನಕಲಿ ಕಾರ್ಯಕರ್ತರೇ ಎಂದು ಪ್ರಶ್ನಿಸಿದರು. ಜನರಿಗೆ ಸಿದ್ದರಾಮಯ್ಯ ಅವರು ನಕಲಿ ಕಾಂಗ್ರೆಸ್ ಕಾರ್ಯಕರ್ತ ಎಂದು ಡಿ.ಕೆ. ಶಿವಕುಮಾರ್ ಅವರು ಸಂದೇಶ ನೀಡುತ್ತಿದ್ದು, ಒಂದೇ ಕಲ್ಲಿನಲ್ಲಿ ಎರಡು ಹಕ್ಕಿಯನ್ನು ಹೊಡೆಯುವ ಉದ್ದೇಶ ಅವರದು ಎಂದು ತಿಳಿಸಿದರು.
ಶಿವಕುಮಾರ್ ಅವರು ಭ್ರಷ್ಟಾಚಾರದ ಪ್ರಕರಣದಲ್ಲಿ ಜೈಲಿಗೆ ಹೋಗಿಬಂದಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಆದರೆ ಈ ಸಂದರ್ಭದಲ್ಲಿ ಹೇಳುತ್ತಿದ್ದಾರೆ ಎಂದರೆ, ಅವರಿಗೆ ಸಿಎಂ ಸ್ಥಾನವನ್ನು ನೀಡಿದರೆ ಹಸಿರು ಬಣ್ಣದ ಬಸ್ ಹತ್ತುತ್ತೇನೆ; ಕೊಡದಿದ್ದರೆ ಕೆಂಪು ಬಸ್ ಹತ್ತುತ್ತೇನೆ ಎಂದು ಕಾಂಗ್ರೆಸ್ ಹೈಕಮಾಂಡಿಗೆ ಸಂದೇಶ ನೀಡುತ್ತಿದ್ದಾರೆ ಎಂದು ವಿಶ್ಲೇಷಿಸಿದರು. ಶಿವಕುಮಾರ್ ಅವರು ನವೆಂಬರ್ ಕ್ರಾಂತಿಯ ಮುನ್ಸೂಚನೆ ನೀಡುತ್ತಿದ್ದು, ಸಿಎಂ ಸ್ಥಾನ ಸಿಗದಿದ್ದರೆ ಅವರಿಗೆ ಕರೆ ಮಾಡಿರುವವರ ಬಳಿ ಹೋಗುತ್ತೇನೆ ಎಂದು ಕಾಂಗ್ರೆಸ್ ಹೈಕಮಾಂಡಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದರು.
ರಾಜ್ಯದ ಪಾಲಾಗಬೇಕಿದ್ದ ಎಐ ಕಂಪನಿಯು ಆಂಧ್ರದ ಪಾಲಾಗಿದೆ. ಇದರಿಂದ 30 ಸಾವಿರ ಉದ್ಯೋಗಗಳು ಕೈತಪ್ಪಿವೆ. ಕರ್ನಾಟಕದಲ್ಲಿನ ರಸ್ತೆ ಗುಂಡಿಗಳು ಮತ್ತು ಬೆಂಗಳೂರಿನ ಕಸದ ರಾಶಿಗೆ ಯಾವ ಉದ್ಯಮಿಗಳೂ ಬರುವುದಿಲ್ಲ. ಇದನ್ನು ಮುಚ್ಚಿಹಾಕಲು ಸಿದ್ದರಾಮಯ್ಯ ಅವರು ಆರ್.ಎಸ್.ಎಸ್ ವಿಚಾರವನ್ನು ಪ್ರಿಯಾಂಕ್ ಖರ್ಗೆ ಅವರ ಕೈಯಲ್ಲಿ ಹೇಳಿಸುತ್ತಿದ್ದು, ಅವರನ್ನು ಬಲಿಪಶು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಆರ್.ಎಸ್.ಎಸ್. ಸಂಘಟನೆಯ ಬಗ್ಗೆ ಮಾತನಾಡುವುದನ್ನು ಬಿಟ್ಟು ಸರ್ಕಾರ ರಾಜ್ಯದ ಅಭಿವೃದ್ಧಿ ಕಡೆ ಗಮನ ಕೊಡಬೇಕು ಮತ್ತು ರಾಜ್ಯದ ಯುವಕರಿಗೆ ಉದ್ಯೋಗ ಅವಕಾಶಗಳನ್ನು ಸೃಷ್ಟಿಸಬೇಕು ಎಂದು ಅವರು ಆಗ್ರಹಿಸಿದರು.
-
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Government Employees: ಸರ್ಕಾರಿ ನೌಕರರ ವರ್ಗಾವಣೆ ಕುರಿತು ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ












Click it and Unblock the Notifications