ಸಭಾಪತಿಗಳು ಸದನಕ್ಕೆ ಬರದಂತೆ ತಡೆದ ಗೂಂಡಾಗಳು ಯಾರು?: ಡಿ.ಕೆ. ಶಿವಕುಮಾರ್
ಬೆಂಗಳೂರು,
ಡಿ. 16: ಸರ್ಕಾರದ ಮನವಿಗೆ ಗೌರವ ನೀಡಿ ಸಭಾಪತಿಗಳು ಕಲಾಪ ನಡೆಸಲು ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಸಂವಿಧಾನ ಬಾಹಿರವಾಗಿ ಸಭಾಪತಿಗಳಿಗೆ ನಿರ್ಬಂಧ ಹೇರಿದ್ದು ಯಾಕೆ? ಆ ಅಧಿಕಾರವನ್ನು ಅವರಿಗೆ ಕೊಟ್ಟಿದ್ದು ಯಾರು? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್ ಅವರು ವಿಧಾನ ಪರಿಷತ್ ಕಲಾಪದಲ್ಲಿ ನಡೆದ ಘಟನೆ ಖಂಡಿಸಿದ್ದಾರೆ. id="toptextpromo"> id='are-slot-1' class='oiad oi-axt oiadv'>ನಮ್ಮ
ಸದನಗಳಿಗೆ ಬಹಳ ಗೌರವ, ಘನತೆ ಇದೆ. ರಾಜ್ಯಪಾಲರು, ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದರು. ಅದರ ಆಧಾರದ ಮೇಲೆ ಕಾರ್ಯದರ್ಶಿಗಳು ಪತ್ರ ಬರೆದರು ಎಂದು ವಿಧಾನ ಪರಿಷತ್ತಿನ ಸಭಾಪತಿಗಳು ಇಂದು ಕಲಾಪ ನಡೆಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದರು. ಸಭಾಪತಿಗಳು ಬಂದು, ಕಲಾಪದ ಬೆಲ್ ನಿಲ್ಲುವುದಕ್ಕೂ ಮೊದಲೇ ಉಪ ಸಭಾಪತಿಗಳು ಹಠಾತ್ತನೆ ಬಂದು ಬಾಗಿಲು ಮುಚ್ಚಿ, ಪೀಠದ ಮೇಲೆ ಕುಳಿತಿದ್ದಾರೆ. ಜೊತೆಗೆ ಸಭಾಪತಿಗಳ ಪ್ರವೇಶಕ್ಕೆ ನಿರ್ಬಂಧ ಕೂಡ ಹಾಕಲಾಗಿದೆ. ಇದು ಕರ್ನಾಟಕ ವಿಧಾನ ಮಂಡಲ ಹಾಗೂ ಅದರಲ್ಲೂ ವಿಶೇಷವಾಗಿ ವಿಧಾನ ಪರಿಷತ್‌ಗೆ ಆದ ದೊಡ್ಡ ಅಪಮಾನ ಎಂದು ಡಿ.ಕೆ. ಶಿವಕುಮಾರ್ ವಿಷಾದಿಸಿದ್ದಾರೆ. id='are-slot-2' class='oiad oi-axt oiadv'>
ಕಲಾಪ ನಡೆಸಲು ಬಿಡಲಿಲ್ಲ
ಕಲಾಪ ನಡೆಸದೇ ಸರ್ಕಾರದ ಪತ್ರವನ್ನು ಸಭಾಪತಿ ಕೆ. ಪ್ರತಾಪ್ ಚಂದ್ರ ಶೆಟ್ಟಿ ಅವರು ತಿರಸ್ಕರಿಸಬಹುದಿತ್ತು. ಆದರೆ ಸರ್ಕಾರದ ನಡೆಗೆ ಗೌರವ ನೀಡಬೇಕು ಎಂದು ಕಲಾಪ ಆರಂಭಿಸಲು ಮುಂದಾದರು. ಅವರು ಕೂಡ ಕಲಾಪವನ್ನು ಸರಿಯಾಗಿ ನಡೆಯಲು ಅವಕಾಶ ಕೊಡಬೇಕಿತ್ತು. ಆದರೆ ಹಾಗಾಲಿಲ್ಲ ಎಂದು ಡಿಕೆಶಿ ಆಕ್ರೋಶ ವ್ಯಲ್ತಪಡಿಸಿದ್ದಾರೆ.

ಆ ಗೂಂಡಾಗಳು ಯಾರು?
ವಿಧಾನ ಪರಿಷತ್ ಸಭಾಪತಿ ಕೆ. ಪ್ರತಾಪ್ ಚಂದ್ರ ಶೆಟ್ಟಿ ಅವರು ಕಲಾಪ ನಡೆಸಲು ಮುಂದಾದಾಗ ಅವರು ಸದನಕ್ಕೆ ಬರದಂತೆ ತಡೆದ ಗೂಂಡಾಗಳು ಯಾರು? ಕಾನೂನು ಬಾಹಿರವಾಗಿ ಬಾಗಿಲು ಮುಚ್ಚಿದವರು ಯಾರು? ಸಭಾಪತಿಗಳು ಇದ್ದಾಗ ಅವರ ಪ್ರವೇಶಕ್ಕೆ ನಿರ್ಬಂಧ ಹಾಕಿದ್ದು ಯಾಕೆ? ಅವರಿಗೆ ಆ ಅಧಿಕಾರ ಕೊಟ್ಟಿದ್ದು ಯಾರು? ಎಂದು ಡಿಕೆಶಿ ಪ್ರಶ್ನೆ ಮಾಡಿದ್ದಾರೆ.

ಪದಚ್ಯುತಿಗೆ ತೀರ್ಮಾನ
ಬಿಜೆಪಿ-ಜೆಡಿಎಸ್ ನಾಯಕರು ಮೇಲ್ಮನೆ ಸಭಾಪತಿಗಳ ಪದಚ್ಯುತಿಗೆ ತೀರ್ಮಾನಿಸಿದ್ದಾರೆ. ಅದು ಅವರ ನಿರ್ಧಾರ. ಅದು ಕಾನೂನಿನ ಚೌಕಟ್ಟಿನಲ್ಲಿ ನಡೆಯಬೇಕೆ ಹೊರತು ನಿಯಮ ಉಲ್ಲಂಘನೆ ಮಾಡುವುದು ಸರಿಯಲ್ಲ. ಅವಿಶ್ವಾಸ ಗುತ್ತುವಳಿಯನ್ನು ಕ್ರಮಬದ್ಧವಾಗಿ ಕೊಡಬೇಕು. ನಂತರ 14 ದಿನಗಳ ಬಳಿಕ ಪರಿಷತ್ ನಡಾವಳಿತಂತೆ ಮಂಡನೆ ಮಾಡಬೇಕು. ಗೊತ್ತುವಳಿಯೆ ಕ್ರಮಬದ್ಧವಾಗಿಲ್ಲ ಎಂದ ಮೇಲೆ ಹೇಗಾಗುತ್ತದೆ ಎಂದಿದ್ದಾರೆ.
Recommended Video

ಹರಕೆ ತೀರಿಸಲು ಹೋಗಿದ್ದೆ
ಬಹಳ ದಿನಗಳಿಂದ ಹರಕೆ ತೀರಿಸುವುದು ಬಾಕಿ ಇತ್ತು. ಕಳೆದ ಒಂದೂವರೆ ವರ್ಷದಿಂದ ಆ ದೇವಾಲಯಕ್ಕೆ ಹೋಗಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಅಸ್ಸಾಂನಲ್ಲಿರುವ ದೇವಾಲಯಕ್ಕೆ ತೆರಳಿ ಹರಕೆ ತೀರಿಸಿದ್ದೇನೆ. ಅಲ್ಲಿಂದ ದೆಹಲಿಗೆ ಆಗಮಿಸಿದ್ದೇನೆ. ಇಲ್ಲಿಗೆ ಬಂದಾಗ ನಮ್ಮ ನಾಯಕರನ್ನು ಭೇಟಿ ಮಾಡುವುದು ನಮ್ಮ ಕರ್ತವ್ಯ. ಅದನ್ನು ಮಾಡಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಹೇಳಿಕೆ ನೀಡಿದ್ದಾರೆ.
ಆದರೆ ಯಾವ ದೇವಸ್ಥಾನಕ್ಕೆ ಹೋಗಿದ್ದರು ಎಂಬುದನ್ನು ಅವರು ಹೇಳಲಿಲ್ಲ. ಅದು ನಿಗೂಢವಾಗಿದೆ.












Click it and Unblock the Notifications