ಕೃಷ್ಣ ಬಿಜೆಪಿ ಸೇರ್ಪಡೆ ಬಗ್ಗೆ ಯಡಿಯೂರಪ್ಪ ತಪ್ಪುಕಲ್ಪನೆ: ಡಿಕೆಶಿ

Posted By:
Subscribe to Oneindia Kannada

ಬೆಂಗಳೂರು, ಫೆಬ್ರವರಿ 4: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಬಿಜೆಪಿ ಸೇರ್ಪಡೆಗೊಳ್ಳುವುದು ಖಾತ್ರಿ ಎಂದು ಹೇಳಿರುವ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ತಪ್ಪುಕಲ್ಪನೆಯಲ್ಲಿದ್ದಾರೆಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರು, ''ಕೃಷ್ಣ ಅವರು ಬಿಜೆಪಿ ಸೇರುತ್ತಿರುವ ಬಗ್ಗೆ ನೀಡುತ್ತಿರುವ ಹೇಳಿಕೆ ತಪ್ಪಿನಿಂದ ಕೂಡಿದೆ. ಕೃಷ್ಣ ಅವರ ಬಗ್ಗೆ ನಮಗೆಲ್ಲರಿಗೂ ಗೌರವವಿದೆ. ಕಾಂಗ್ರೆಸ್ಸಿನಲ್ಲಿ ಅವರಿಗೆ ನೋವಾಗಿರಬಹುದು. ನಿಜ. ಆದರೆ, ಅದನ್ನೇ ಕಾರಣವಾಗಿಟ್ಟುಕೊಂಡು ಅವರು ಬಿಜೆಪಿ ಸೇರುವುದಿಲ್ಲವೆಂಬ ಭರವಸೆಯಿದೆ'' ಎಂದು ಅವರು ವಿವರಿಸಿದರು.

DK Shivakumar rejects Yadiyurappa's statement about SM Krishna's inclusion in BJP

ಮಾತಿನ ಕೊನೆಯಲ್ಲಿ ಕೃಷ್ಣ ಅವರ ಬಿಜೆಪಿ ಸೇರ್ಪಡೆ ವಿಚಾರವಾಗಿ ಯಡಿಯೂರಪ್ಪ ಅವರು ಹೇಳಿರುವ ಹೇಳಿಕೆಗಳೆಲ್ಲವೂ ಸತ್ಯಕ್ಕೆ ದೂರವಾದವು ಎಂದು ಪುನರುಚ್ಛರಿಸಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Karnataka Power Minister DK Shivakumar rejects the statements of former CM Yadiyurappa about the inclusion fo former CM SM Krishna to BJP.
Please Wait while comments are loading...