ಕಾಂಗ್ರೆಸ್ ನ 60 ಜನ ಶಾಸಕರು ಬಿಜೆಪಿಗೆ ಬರುತ್ತಾರೆ ಎಂದ ಯತ್ನಾಳ್: ಡಿ ಕೆ ಶಿವಕುಮಾರ್‌ ಏನಂದ್ರು?

ಬೆಳಗಾವಿ, ಜನವರಿ 20: 60 ಮಂದಿ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರುತ್ತಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರು ಅಚ್ಚರಿ ಹೇಳಿಕೆ ನೀಡಿದ್ದು, ಈ ಬಗ್ಗೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್‌ ಅವರು ಗರಂ ಆಗಿದ್ದಾರೆ.

ಈ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿ ಕೆ ಶಿವಕುಮಾರ್‌, ನೀಚ ರಾಜಕಾರಣದ ಬಗ್ಗೆ ನೀವು ಪ್ರಶ್ನೆ ಮಾಡಿದರೆ ಹೇಗೆ? ಇಂತಹ ಪ್ರಶ್ನೆಗಳಿಗೆ ನಾನು ಉತ್ತರಿಸುವುದಿಲ್ಲ. ಬೆಳಗಾವಿಯಲ್ಲಿ ನಡೆಯುತ್ತಿರುವ ರಾಷ್ಟ್ರ ಮಟ್ಟದ ಕಾರ್ಯಕ್ರಮದ ಬಗ್ಗೆ ಗಮನಹರಿಸಿ. ನಿಮಗೆ ಯಾರು ಏನೇ ಹೇಳಿದ್ದರೂ ಅದೆಲ್ಲಾ ಸುಳ್ಳಿನ ಕಂತೆ. ಕಾಂಗ್ರೆಸ್ ಗೆ ಶಕ್ತಿ ತುಂಬಲು ಅನೇಕ ಹೋರಾಟ, ತ್ಯಾಗ ಮಾಡಲಾಗಿದೆ. ಈ ಬೆಳಗಾವಿ ಭೂಮಿಯಿಂದಲೇ ಗಾಂಧಿ ಬಾವಿಯಿಂದ ನೀರು ತೆಗೆದು ಸ್ವಚ್ಚಗೊಳಿಸಿ ಪಕ್ಷವನ್ನು ಅಧಿಕಾರಕ್ಕೆ ತರಲಾಗಿದೆ ಎಂದರು.

DK Shivakumar responds to Yatnal statement that 60 Congress MLAs will join BJP

2023 ರ ಚುನಾವಣೆಯಲ್ಲಿ ಫಿರೋಜ್ ಸೇಠ್ ಅವರಿಗೆ ಟಿಕೆಟ್ ಸಿಗದಿದ್ದಕ್ಕೆ ಸತೀಶ್ ಜಾರಕಿಹೊಳಿ ಅವರು ಕಾರಣ ಎನ್ನುವ ಮಾತಿನ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ಈ ವಿಚಾರದ ಬಗ್ಗೆ ಗೊತ್ತಿಲ್ಲ. ನನಗೆ ಎಲ್ಲರೂ ಒಂದೇ. ಕಾರ್ಯಕರ್ತರು, ಶಾಸಕರು, ಸಚಿವರು ಎಲ್ಲರೂ ಒಂದೇ. ನಮ್ಮ ಪಕ್ಷದ ಶಿಸ್ತಿನ ಚೌಕಟ್ಟಿನಲ್ಲಿ ಕೆಲಸ ಮಾಡುವವರ ಎದುರು ತಲೆಬಾಗಿ ಅವರ ಸೇವೆ ಮಾಡುತ್ತೇನೆ. ನನಗೆ ಪಕ್ಷವೇ ಮುಖ್ಯ. ನನಗೆ ಕೊಟ್ಟಿರುವ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ಕಾಲ, ಕಾಲದಿಂದಲೂ ನಿರ್ವಹಿಸಿಕೊಂಡು ಬಂದಿದ್ದೇನೆ ಎಂದು ಹೇಳಿದರು.

ಪಕ್ಷಕ್ಕಾಗಿ ತ್ಯಾಗ ಮಾಡಿಕೊಂಡು ಬಂದಿದ್ದೇನೆ

ಪಕ್ಷಕ್ಕಾಗಿ ಮೊದಲಿನಿಂದಲೂ ಹಲವಾರು ತ್ಯಾಗಗಳನ್ನು ಮಾಡಿದ್ದೇನೆ. ಧರಂಸಿಂಗ್ ಅವರ ನೇತೃತ್ವದ ಸಮ್ಮಿಶ್ರ ಸರ್ಕಾರ ಹಾಗೂ ಸಿದ್ದರಾಮಯ್ಯ ಅವರ ಹಿಂದಿನ ಸರ್ಕಾರದಲ್ಲಿಯೂ ಉಸಿರು ಬಿಗಿ ಹಿಡಿದುಕೊಂಡು ತ್ಯಾಗ ಮಾಡಿದ್ದೇನೆ. ನನಗೆ ಪಕ್ಷವೇ ಮುಖ್ಯ. ನಾನು ಪಕ್ಷದಿಂದ ಬೆಳೆದವನು. ವಿದ್ಯಾರ್ಥಿ ನಾಯಕನಾಗಿದ್ದ ನನ್ನನ್ನು ಗುರುತಿಸಿ ಪಕ್ಷ ಟಿಕೆಟ್ ನೀಡಿತ್ತು. ಮಾಧ್ಯಮದವರು ಯಾರ ಮಾತನ್ನೋ ಕೇಳಬೇಡಿ ಎಂದು ಡಿ ಕೆ ಶಿವಕುಮಾರ್‌ ಹೇಳಿದರು.

ಎಷ್ಟು ದಿನ ಶಿವಕುಮಾರ್ ತ್ಯಾಗ ಮಾಡುತ್ತಾರೆ, ತ್ಯಾಗಕ್ಕೆ ಫಲ ಯಾವಾಗ ಸಿಗುತ್ತದೆ ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ತ್ಯಾಗ ಮಾಡಿಕೊಂಡೆ ಬರುತ್ತೇನೆ. ನನಗೆ ಫಲದ ಅವಶ್ಯಕತೆಯೇ ಇಲ್ಲ. ಜನಕ್ಕೆ ಒಳೆಯದಾಗುತ್ತಿದೆಯಲ್ಲ, ಅಷ್ಟು ಸಾಕು ನನಗೆ ಎಂದು ಡಿ ಕೆ ಶಿವಕುಮಾರ್‌ ತಿಳಿಸಿದರು.

ಮಹಾತ್ಮ ಗಾಂಧಿ ಅವರ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸ್ಮರಣೆ, ಸಂವಿಧಾನ ರಕ್ಷಣೆಯೇ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದ ಉದ್ಧೇಶ. ಸಾಮಾಜಿಕ ನ್ಯಾಯವನ್ನು ಉಳಿಸುವುದೇ ನಮ್ಮ ಮೂಲ ಮಂತ್ರ. ಕಳೆದ ಬಾರಿ ರೂಪಿಸಿದ ಕಾರ್ಯಕ್ರಮಗಳನ್ನು ಈ ಬಾರಿಯೂ ಮುಂದಿವರೆಸಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+