DK Shivakumar: ರಾಹುಲ್ ಗಾಂಧಿ ಜೊತೆ ಸಿಎಂ ಸ್ಥಾನದ ಬಗ್ಗೆ ಚರ್ಚೆ: ಡಿ ಕೆ ಶಿವಕುಮಾರ್ ಹೇಳಿದ್ದೇನು?
ದೆಹಲಿ: ಮುಖ್ಯಮಂತ್ರಿ ಸ್ಥಾನದ ವಿಚಾರ ನನ್ನ, ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ನಡುವಣ ವಿಚಾರ. ಇದು ಸಾರ್ವಜನಿಕವಾಗಿ ಚರ್ಚೆ ಮಾಡುವ ವಿಷಯವಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು.
ಇಂದು ಅಸ್ಸಾಂ ಚುನಾವಣೆ ಸಂಬಂಧ ಹೈಕಮಾಂಡ್ ನಾಯಕರ ಜತೆ ಸಭೆ ಇದೆ, ಈ ಸಭೆಯ ಯೋಜನೆಗಳೇನು ಎಂದು ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ನಮ್ಮ ಪಕ್ಷದ ಯೋಜನೆಗಳನ್ನು ಬಹಿರಂಗಪಡಿಸಲು ಹೇಗೆ ಸಾಧ್ಯ? ಇದನ್ನು ಪಕ್ಷದ ಮಟ್ಟದಲ್ಲಿ ಮಾತ್ರ ಚರ್ಚೆ ಮಾಡಲಾಗುವುದು. ಸಾರ್ವಜನಿಕವಾಗಿ ಅಲ್ಲ. ಏನಾದರೂ ಮಾಹಿತಿ ನೀಡುವುದಿದ್ದರೆ, ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಇದ್ದಾರೆ, ಅವರು ನೀಡುತ್ತಾರೆ ಎಂದರು.

ಈ ಪ್ರವಾಸದಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತೀರಾ ಎಂಬ ಪ್ರಶ್ನೆಗೆ ಡಿಕೆ ಶಿವಕುಮಾರ್ ಅವರು ಉತ್ತರಿಸಿ, ನಾನು ಪಕ್ಷದ ನಾಯಕರನ್ನು ಭೇಟಿ ಮಾಡುವ ಉದ್ದೇಶದಿಂದಲೇ ದೆಹಲಿಗೆ ಬಂದಿದ್ದೇನೆ, ನೋಡೋಣ ಎಂದರು. ಕೇಂದ್ರ ಸಚಿವರನ್ನು ಜೊತೆಗೆ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಕೆಲವು ಪ್ರಮುಖ ಕಾನೂನಾತ್ಮಕ ವಿಚಾರಗಳನ್ನು ಚರ್ಚೆ ಮಾಡಬೇಕಾಗಿದ್ದು, ಹೀಗಾಗಿ ಕಾನೂನು ತಜ್ಞರು ಹಾಗೂ ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದೇನೆ ಎಂದು ತಿಳಿಸಿದರು.












Click it and Unblock the Notifications