ಬಿಹಾರ ಚುನಾವಣೆಗಾಗಿ ಅಧಿಕಾರಿಗಳಿಂದ ಹಣ ವಸೂಲಿ: ಡಿ ಕೆ ಶಿವಕುಮಾರ್‌ ಫಸ್ಟ್‌ ರಿಯಾಕ್ಷನ್

ಬೆಂಗಳೂರು, ಅಕ್ಟೋಬರ್‌ 20: ಬಿಹಾರ ಚುನಾವಣೆಗೆ, ಆಡಳಿತಾರೂಢ ಕಾಂಗ್ರೆಸ್ ಪಕ್ಷವು ನಿಧಿಸಂಗ್ರಹಣೆಯಲ್ಲಿ ಭಾಗಿಯಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದರಾದ ಜಗದೀಶ್ ಶೆಟ್ಟರ್ ಮತ್ತು ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಆರೋಪಿಸಿದ್ದಾರೆ. ಇನ್ನೂ ಈ ಆರೋಪಕ್ಕೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಜೊತೆಗೆ ಡಿ ಕೆ ಶಿವಕುಮಾರ್‌ ಮಾತನಾಡಿ, ಸಂಸದ ರಾಘವೇಂದ್ರ ಅವರು ಹಿಟ್ ಅಂಡ್ ರನ್ ನಾಯಕರ ಪಟ್ಟಿಗೆ ಸೇರುವುದು ಬೇಡ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಲಹೆ ನೀಡಿದರು. ಸಂಸದ ಬಿ.ವೈ.ರಾಘವೇಂದ್ರ ಅವರ ಬಳಿ ದಾಖಲೆಗಳಿದ್ದರೆ ಅದನ್ನು ಬಿಡುಗಡೆ ಮಾಡಿ ಆರೋಪ ಮಾಡಲಿ. ಹಿಟ್ ಅಂಡ್ ರನ್ ಮಾಡುವ ಒಂದಷ್ಟು ನಾಯಕರಿದ್ದಾರಲ್ಲಾ ಅವರಂತೆ ರಾಘವೇಂದ್ರ ಅವರು ಆಗುವುದು ಬೇಡ. ರಾಘವೇಂದ್ರ ಅವರ ಹೆಸರು ಸುಳ್ಳಿಗೆ ಮತ್ತೊಂದು‌ ಉದಾಹರಣೆಯಂತಾಗುವುದು ಬೇಡ" ಎಂದು ತಿರುಗೇಟು ನೀಡಿದರು.

DK Shivakumar Response On Extortion From Officials For Bihar Elections

ಜಾಗರೂಕತೆಯಿಂದ ಪಟಾಕಿ ಸಿಡಿಸಿ

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು. ಆದಷ್ಟು ಜಾಗರೂಕತೆಯಿಂದ ಪಟಾಕಿ ಸಿಡಿಸಬೇಕು. ಹಸಿರ ಪಟಾಕಿಯನ್ನು ಮಾತ್ರ ಬಳಸಬೇಕು. ಈಗಾಗಲೇ ಸಣ್ಣಪುಟ್ಟ ಅವಘಡಗಳ ಸುದ್ದಿ ಕೇಳಿಬರುತ್ತಿದೆ. ಯಾವುದೇ‌ ಸಿಡಿಮದ್ದುಗಳನ್ನು ಸಿಡಿಸುವ ಸಂದರ್ಭದಲ್ಲಿಯೂ ಎಚ್ಚರವಿರಲಿ. ಈ ವರ್ಷ ರಾಜ್ಯದಲ್ಲಿ ಉತ್ತಮವಾಗಿ ಮಳೆ ಬಂದಿದೆ. ಸಮೃದ್ಧಿಯಾಗಿ ಬೆಳೆ ಬಂದಿದೆ. ಪ್ರತಿವರ್ಷವೂ ಸಮೃದ್ಧಿಯಾಗಿರಲಿ ಎಂದು ಪ್ರಾರ್ಥಿಸಿದರು.

ನಿಮ್ಮ ಆಸ್ತಿ ದಾಖಲೆ ಸರಿ ಮಾಡಿಸಿಕೊಳ್ಳಲು ಸರ್ಕಾರ ಉತ್ತಮ ಅವಕಾಶ ಕಲ್ಪಿಸಿದ್ದು, ಎಲ್ಲರೂ ಇ ಖಾತಾ ಮಾಡಿಸಿಕೊಳ್ಳಿ. ಸರ್ಕಾರ ಬಿ ಖಾತೆಯಿಂದ ಎ ಖಾತಾಗೆ ಪರಿವರ್ತನೆ ಮಾಡಲು ಅವಕಾಶ ಕಲ್ಪಿಸಿದ್ದು ಈ ಅವಕಾಶವನ್ನು ಯಾರೂ ಕಳೆದುಕೊಳ್ಳಬೇಡಿ ಎಂದರು. ಸಿಎ ನಿವೇಶನದ ಬಗ್ಗೆ ಸಾರ್ವಜನಿಕರು ಪ್ರಸ್ತಾಪ ಮಾಡಿದ್ದು, ಸರ್ಕಾರ ಈ ವಿಚಾರದಲ್ಲಿ ಪ್ರತ್ಯೇಕ ನೀತಿ ರೂಪಿಸುತ್ತಿದೆ. ಈ ಹಿಂದೆ ಬಿಡಿಎ ನಿಭಾಯಿಸುತ್ತಿದ್ದ ಯೋಜನಾ ಪ್ರಾಧಿಕಾರದ ಜವಾಬ್ದಾರಿಯನ್ನು ಜಿಬಿಎಗೆ ವರ್ಗಾವಣೆ ಮಾಡಿದ್ದೇನೆ. ಬೆಂಗಳೂರಿನಲ್ಲಿ ದೊಡ್ಡ ಯೋಜನೆಗಳನ್ನು ಜಿಬಿಎ ನಿಭಾಯಿಸಲಿದ್ದು, ಉಳಿದ ಸಣ್ಣ ಯೋಜನೆಗಳನ್ನು ಪಾಲಿಕೆಗಳು ಮಾಡಲಿವೆ" ಎಂದರು.

ಜನರ ಹೊಟ್ಟೆ ತುಂಬಿಸಬೇಕು. ಬೆಲೆ ಏರಿಕೆ ಸಮಸ್ಯೆಯಿಂದ ಜನರನ್ನು ರಕ್ಷಿಸಬೇಕು ಎಂದು ಐದು ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದೇವೆ. ಪ್ರತಿ ವರ್ಷ ಇದಕ್ಕೆ 52 ಸಾವಿರ ಕೋಟಿ ವೆಚ್ಚ ಮಾಡುತ್ತಿದ್ದೇವೆ. ಇದರ ಜೊತೆಗೆ ರೈತರಿಗೆ ಉಚಿತ ವಿದ್ಯುತ್ ನೀಡಲು ನಾವು ಪ್ರತಿ ವರ್ಷ 20 ಸಾವಿರ ಕೋಟಿ ನೀಡುತ್ತಿದ್ದೇವೆ. ಹೀಗೆ ಜನರ ಕಲ್ಯಾಣ ಕಾರ್ಯಕ್ರಮಗಳಿಗೆ 1 ಲಕ್ಷ ಕೋಟಿಯಷ್ಟು ಮೀಸಲಿಡುತ್ತಿದ್ದೇವೆ ಎಂದರು. ರಾಜ್ಯ ಸರ್ಕಾರ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿದ್ದು, ನೀವೆಲ್ಲರೂ ಅದರಲ್ಲಿ ಭಾಗವಹಿಸಬೇಕು. ಇದು ಎಲ್ಲ ಸಮಾಜದ ಭವಿಷ್ಯಕ್ಕಾಗಿ ಮಾಡುತ್ತಿದ್ದೇವೆ. ನೀವು ಅಗತ್ಯವಾದ ಮಾಹಿತಿ ನೀಡಿ, ಅನಗತ್ಯ ಎನಿಸಿದ ಪ್ರಶ್ನೆಗಳನ್ನು ನಿರ್ಲಕ್ಷಿಸಿ ಎಂದು ಹೇಳಿದರು.

ರಾಮಲಿಂಗಾ ರೆಡ್ಡಿ ಅವರ ಬಗ್ಗೆ ನೀವು ಅಪಾರ ವಿಶ್ವಾಸ ವ್ಯಕ್ತಪಡಿಸಿದ್ದೀರಿ. ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಅವರು ಹೆಚ್ಚು ಬದ್ಧತೆಯಿಂದ ಕೆಲಸ ಮಾಡುತ್ತಿದ್ದಾರೆ. ಇಂತಹ ಹಿರಿಯ ನಾಯಕರನ್ನು ಹೊಂದಿರುವುದು ನಿಮ್ಮ ಭಾಗ್ಯ. ನೀವು 8 ಬಾರಿ ಅವರನ್ನು ಆಯ್ಕೆ ಮಾಡಿದ್ದು, ಬೆಂಗಳೂರನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ನಮಗೆ ಮಾರ್ಗದರ್ಶನ ನೀಡುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+