Greater Bangaluru: ನೂತನ 5 ಪಾಲಿಕೆಗಳಿಗೆ ಉಸ್ತುವಾರಿ ಸಚಿವರ ನೇಮಕ: ಡಿ ಕೆ ಶಿವಕುಮಾರ್‌ ಹೇಳಿದ್ದೇನು?

ಬೆಂಗಳೂರು, ಸೆಪ್ಟೆಂಬರ್‌ 10: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ಪಕ್ಷ ಸಂಘಟನೆ ಉದ್ದೇಶದಿಂದ ಬೆಂಗಳೂರು ನಗರ ವ್ಯಾಪ್ತಿಯ ಸಚಿವರನ್ನು ಉಸ್ತುವಾರಿಗಳನ್ನಾಗಿ ನೇಮಿಸಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆದೇಶಿಸಿದ್ದಾರೆ. ಆದೇಶದ ಪ್ರಕಾರ, ಬೆಂಗಳೂರು ಪೂರ್ವ ನಗರ ಪಾಲಿಕೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡರನ್ನು ಉಸ್ತುವಾರಿಯನ್ನಾಗಿ ಮಾಡಲಾಗಿದೆ. ಬೆಂಗಳೂರು ಪಶ್ಚಿಮ ನಗರ ಪಾಲಿಕೆಗಳಿಗೆ ಸಚಿವ ಬೈರತಿ ಸುರೇಶ್‌, ಬೆಂಗಳೂರು ಉತ್ತರ ನಗರ ಪಾಲಿಕೆಗೆ ಸಚಿವ ಕೆ.ಜೆ. ಜಾರ್ಜ್, ಬೆಂಗಳೂರು ದಕ್ಷಿಣ ನಗರ ಪಾಲಿಕೆಗೆ ಸಚಿವ ರಾಮಲಿಂಗಾ ರೆಡ್ಡಿ ಮತ್ತು ಬೆಂಗಳೂರು ಕೇಂದ್ರ ನಗರ ಪಾಲಿಕೆಗೆ ಸಚಿವ ದಿನೇಶ್ ಗುಂಡೂರಾವ್ ಮತ್ತು ಜಮೀರ್ ಅಹಮದ್ ಖಾನ್ ನೇಮಿಸಲಾಗಿದೆ.

ಜಿಬಿಎ ಅಡಿಯಲ್ಲಿ ರಚನೆಯಾಗಿರುವ ನೂತನ ಪಾಲಿಕೆಗಳಿಗೆ ಉಸ್ತುವಾರಿ ಸಚಿವರ ನೇಮಕದ ಕುರಿತು ಮಾಧ್ಯಮಗಳ ಜೊತೆಗೆ ಡಿ ಕೆ ಶಿವಕುಮಾರ್‌ ಅವರು ಮಾತನಾಡಿ, ಮಂತ್ರಿಗಳು ಎಂದ ಮೇಲೆ ಕೇವಲ ತಮ್ಮ ಕ್ಷೇತ್ರಗಳ ಕೆಲಸ ಮಾತ್ರ ನೋಡುವುದಷ್ಟೇ ಅಲ್ಲ. ಇಡೀ ಜಿಲ್ಲೆ ಕಡೆ ಗಮನಹರಿಸಬೇಕು. ಕೆಲವು ಕಡೆ ನಾವು ಸೋತಿರುವ ಕ್ಷೇತ್ರಗಳಿವೆ. ಆ ಕ್ಷೇತ್ರಗಳಲ್ಲಿ ಸಮನ್ವಯತೆ ಸಾಧಿಸಬೇಕು. ಹೀಗಾಗಿ ಸಚಿವರಿಗೆ ಜವಾಬ್ದಾರಿ ವಹಿಸಲಾಗಿದೆ. ಇದರ ಜೊತೆಗೆ ಪಕ್ಷದ ವತಿಯಿಂದಲೂ ಸಂಘಟನೆ ವಿಚಾರವಾಗಿ ಜವಾಬ್ದಾರಿ ನೀಡಲಾಗುವುದು ಎಂದು ತಿಳಿಸಿದರು.

DK Shivakumar Response On The Appointment Of In-Charge Ministers For 5 Corporations

ಮದ್ದೂರು ಗಣೇಶ ವಿಸರ್ಜನೆ ವೇಳೆ ನಡೆದಿರುವ ಕಲ್ಲು ತೂರಾಟ ಹಾಗೂ ಅದರ ಬೆನ್ನಲ್ಲೇ ಬಿಜೆಪಿ ನಾಯಕರು ಮದ್ದೂರಿಗೆ ತೆರಳಿರುವ ಬಗ್ಗೆ ಮಾತನಾಡಿ, ಕೋಮು ಭಾವನೆ ಕೆರಳಿಸಿ, cಜನರನ್ನು ವಿಭಜಿಸಿ, ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕೆಲಸ. ಅವರಿಗೆ ಅಭಿವೃದ್ಧಿ ಬಗ್ಗೆ ಚಿಂತೆ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಪ್ರಕರಣದ ಬಗ್ಗೆ ಈಗಾಗಲೇ ಸಿಎಂ, ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿಕ್ರಿಯೆ ನಡಿದ್ದಾರೆ. ಹೊರ ರಾಜ್ಯಕ್ಕೆ ಹೋಗಿದ್ದ ಹಿನ್ನೆಲೆಯಲ್ಲಿ ನನಗೆ ಈ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ನನಗೆ ಸಂಪೂರ್ಣ ಮಾಹಿತಿ ಸಿಗದೇ ಈ ವಿಚಾರದಲ್ಲಿ ಪ್ರತಿಕ್ರಿಯೆ ನೀಡುವುದಿಲ್ಲ" ಎಂದು ತಿಳಿಸಿದರು.

ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರ ಬಂಧನದ ವಿಚಾರವಾಗಿ ಮಾಧ್ಯಮಗಳ ಜೊತೆಗೆ ಮಾತನಾಡಿ, ಸತೀಶ್ ಸೈಲ್ ಅವರ ಬಂಧನದ ಅವಶ್ಯಕತೆ ಇರಲಿಲ್ಲ. ಈ ಪ್ರಕರಣದ ವಿಚಾರಣೆ 2010ರಿಂದಲೇ ನಡೆಯುತ್ತಿದೆ. ಕಾಂಗ್ರೆಸ್ ಶಾಸಕರ ಮೇಲೆ ಮಾತ್ರ ಗುರಿಯಾಗಿಸಿ ಇಂತಹ ದಾಳಿಗಳು ನಡೆಯುತ್ತಿವೆ. ಆಮೂಲಕ ಕಾಂಗ್ರೆಸ್ ನಾಯಕರಿಗೆ ತೊಂದರೆ ನೀಡುವ ಕೆಲಸ ನಡೆಯುತ್ತಿದೆ ಎಂದು ತಿಳಿಸಿದರು.

ಬಿಜೆಪಿಯವರಿಗೆ ರಾಜಕಾರಣ ಮಾಡುವುದು ಬಿಟ್ಟು ಬೇರೆ ಕೆಲಸ ಏನಿದೆ? ಅವರು ದೆಹಲಿಗೆ ಹೋಗಿ ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲು, ನರೇಗಾ ಅನುದಾನ, ಮೇಕೆದಾಟು, ಮಹದಾಯಿ ನೀರಾವರಿ ಯೋಜನೆಗಳಿಗೆ ಅನುಮತಿ ತೆಗೆದುಕೊಂಡು ಬರಲಿ ಎಂದು ಸವಾಲೆಸೆದರು. ಬೆಂಗಳೂರು ನಗರ ಶಾಸಕರ ಜೊತೆಗೆ ಸಿಎಂ ಸಭೆ ಮಂಗಳವಾರ ನಿಗದಿಯಾಗಿತ್ತು. ನಾನು ಕೊಯಮತ್ತೂರಿಗೆ ಹೋಗಬೇಕಿದ್ದ ಹಿನ್ನೆಲೆಯಲ್ಲಿ ಮುಂದೂಡುವಂತೆ ತಿಳಿಸಿದ್ದೆ. ಬುಧವಾರ ಸಂಜೆ ಈ ಸಭೆ ನಡೆದಿದೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+