ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಿಚ್ಚ ಸುದೀಪ್ ಭೇಟಿಯ ಹಿಂದಿನ ಕಾರಣ ಬಹಿರಂಗಪಡಿಸಿದ ಡಿಕೆಶಿ: ಏನದು ಕುತೂಹಲಕರ ಸಂಗತಿ?

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬೆಂಗಳೂರಿನ ಜೆಪಿ ನಗರದಲ್ಲಿರುವ ಕಿಚ್ಚ ಸುದೀಪ್‌ ಅವರ ಮನೆಗೆ ತೆರಳಿ ಮಾತುಕತೆ ನಡೆಸಿದ್ದಾರೆ. ಅವರೊಂದಿಗೆ ಊಟವನ್ನೂ ಸವೆದಿದ್ದಾರೆ. ಈ ಭೇಟಿಯ ಹಿಂದಿನ ಕಾರಣ, ಉದ್ದೇಶವನ್ನು ಡಿಕೆಶಿ ಬಹಿರಂಗಪಡಿಸಿದ್ದಾರೆ. ಅವರು ಹೇಳಿದ ಕುತೂ

|
Google Oneindia Kannada News

ಬೆಂಗಳೂರು, ಫೆಬ್ರವರಿ 03: ಕರ್ನಾಟಕದ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲ ತಿಂಗಳು ಬಾಕಿ ಉಳಿದಿವೆ. ಸಮಯದಲ್ಲಿ ರಾಜಕೀಯ ವಲಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಪ್ರತಿನಿತ್ಯ ಹಲವಾರು ಊಹಾಪೋಹಗಳು, ಕುತೂಹಲಕರ ಸಂಗತಿಗಳು ಹರಿದಾಡುತ್ತಿವೆ. ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದೆ. ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ನಡುವೆ ಪೈಪೋಟಿ ಇದೆ. ಇನ್ನು ಮಧ್ಯ ಕರ್ನಾಟಕ, ಕರಾವಳಿ ಕರ್ನಾಟಕ, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ನೇರ ಹಣಾಹಣಿ ಇದೆ. ಈ ಬಾರಿಯ ಚುನಾವಣೆಯನ್ನು ಶತಾಯುಗತಾಯ ಗೆಲ್ಲಲೇಬೇಕೆಂದು ಕಾಂಗ್ರೆಸ್‌ ಸೆಣಸಾಡುತ್ತಿದೆ. ಬಿಜೆಪಿಗೆ ಆಡಳಿತ ವಿರೋಧಿ ಅಲೆ ಎದುರಾಗಿದೆ. ಇಷ್ಟಾದರೂ, ಪ್ರಧಾನಿ ಮೋದಿಯವರ ವರ್ಚಸ್ಸನ್ನು ಉಪಯೋಗಿಸಿ ಮತ್ತೆ ಗೆಲುವು ಸಾಧಿಸಲು ಬಿಜೆಪಿ ಯತ್ನ ನಡೆಸಿದೆ. ಇನ್ನು ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌ ಮತ್ತೆ ಕಿಂಗ್‌ ಮೇಕರ್‌ ಆಗಲು ಸೆಣಾಸಾಡುತ್ತಿದೆ.

ಜನಾರ್ದನ ರೆಡ್ಡಿ ಪಕ್ಷ ಸೇರಲು ಜೆಡಿಎಸ್‌ ತೊರೆದ ನಾಯಕ! ಜನಾರ್ದನ ರೆಡ್ಡಿ ಪಕ್ಷ ಸೇರಲು ಜೆಡಿಎಸ್‌ ತೊರೆದ ನಾಯಕ!

 ಕಳೆದ ಚುನಾವಣೆಯಲ್ಲಿ ದರ್ಶನ್‌, ಯಶ್‌ ಪ್ರಚಾರ

ಕಳೆದ ಚುನಾವಣೆಯಲ್ಲಿ ದರ್ಶನ್‌, ಯಶ್‌ ಪ್ರಚಾರ

ಇಂತಹ ಸಮಯದಲ್ಲಿ ರಾಜಕಾರಣಿಗಳು ಸಿನೆಮಾ ನಟರ ಮನೆಗಳಿಗೆ ತೆರಳವುದು, ಪ್ರಚಾರ ಮಾಡಲು ಆಹ್ವಾನಿಸುವುದು ಸರ್ವೇಸಾಮಾನ್ಯ ಸಂಗತಿ. ಈ ಹಿಂದಿನ ಚುನಾವಣೆಗಳಲ್ಲಿ, ಕನ್ನಡದ ಸೂಪರ್‌ಸ್ಟಾರ್‌ ನಟರಾದ ರಾಕಿಂಗ್‌ ಸ್ಟಾರ್‌ ಯಶ್‌ ಹಾಗೂ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರು ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿದ್ದ ಅಂಬರೀಶ್‌ ಪತ್ನಿ ಪರ ಈ ನಟರು ಪ್ರಚಾರ ಮಾಡಿದ್ದರು. ವಿಧಾನಸಭೆ ಉಪಚುನಾವಣೆಯಲ್ಲಿ ನಿರ್ಮಾಪಕ ಹಾಗೂ ಸಚಿವ ಮುನಿರತ್ನ ಪರ ದರ್ಶನ್ ಪ್ರಚಾರ ಮಾಡಿದ್ದರು. ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭೆಗೆ ಸ್ಪರ್ಧಿಸಿದ್ದ ಮುನಿರತ್ನ ಅಭೂತಪೂರ್ವ ಗೆಲುವು ಸಾಧಿಸಿದ್ದರು.

 ಹರಿದಾಡಿದ ಸುದೀಪ್‌ ಕಾಂಗ್ರೆಸ್‌ ಸೇರ್ಪಡೆ ಸುದ್ದಿ

ಹರಿದಾಡಿದ ಸುದೀಪ್‌ ಕಾಂಗ್ರೆಸ್‌ ಸೇರ್ಪಡೆ ಸುದ್ದಿ

ಕನ್ನಡ ಚಿತ್ರರಂಗದ ಖ್ಯಾತ ನಟ ಕಿಚ್ಚ ಸುದೀಪ್‌ ಅವರು ರಾಜ್ಯದಾದ್ಯಂತ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಅವರು ಕಾಂಗ್ರೆಸ್‌ ಸೇರಲಿದ್ದಾರೆ ಅಥವಾ ಕಾಂಗ್ರೆಸ್‌ ಪರ ಪ್ರಚಾರ ಮಾಡಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿವೆ. ನಟಿ ರಮ್ಯಾ ಅವರ ಮೂಲಕ ಕಿಚ್ಚ ಸುದೀಪ್‌ ಅವರನ್ನು ಕಾಂಗ್ರೆಸ್‌ಗೆ ಕರೆತರುವ ಪ್ರಯತ್ನ ಮಾಡಲಾಗುತ್ತಿದೆ ಎಂಬ ಸುದ್ದಿಗಳು ಬಿತ್ತರವಾಗಿದ್ದವು. ಆದರೆ, ಈ ಸುದ್ದಿಗಳಿಗೆ ನಟಿ ರಮ್ಯ ಆಗಲಿ, ನಟ ಸುದೀಪ್‌ ಆಗಲಿ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.

ಇಂದು ಡಿಕೆಶಿ- ಸುದೀಪ್‌ ಭೇಟಿ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬೆಂಗಳೂರಿನ ಜೆಪಿ ನಗರದಲ್ಲಿರುವ ಕಿಚ್ಚ ಸುದೀಪ್‌ ಅವರ ಮನೆಗೆ ತೆರಳಿ ಮಾತುಕತೆ ನಡೆಸಿದ್ದಾರೆ. ಅವರೊಂದಿಗೆ ಊಟವನ್ನೂ ಸವೆದಿದ್ದಾರೆ. ಈ ಸುದ್ದಿಯೂ ಹರಿದಾಡುತ್ತಿದ್ದಂತೆ ರಾಜಕೀಯ ವಲಯದಲ್ಲಿ ಹಲವಾರು ಮಾತುಗಳು ಹರಿದಾಡುತ್ತಿವೆ. ಈ ಭೇಟಿಯ ಕಾರಣವನ್ನು ಈಗ ಡಿಕೆ ಶಿವಕುಮಾರ್ ಅವರೇ ಬಹಿರಂಗಪಡಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, 'ನಾನಾ ಚಿತ್ರರಂಗಗಳಲ್ಲಿ ಛಾಪು ಮೂಡಿಸಿ ಕರ್ನಾಟಕದ ಕೀರ್ತಿ ಹೆಚ್ಚಿಸಿದ ನಟ ಶ್ರೀ ಕಿಚ್ಚ ಸುದೀಪ್‌ ಅವರನ್ನು ಭೇಟಿ ಮಾಡಿದೆ. ಈ ವೇಳೆ ಕನ್ನಡ ಚಿತ್ರರಂಗ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿದೆವು. ಕನ್ನಡ ಚಿತ್ರರಂಗದ ಸಮಸ್ಯೆಗಳನ್ನು ಬಗೆಹರಿಸಲು ಕಾಂಗ್ರೆಸ್‌ ರೂಪಿಸುತ್ತಿರುವ ವಿಶೇಷ ಪ್ರಣಾಳಿಕೆಗೆ ಅವರ ಸಲಹೆಗಳನ್ನು ಪಡೆದೆ' ಎಂದು ಹೇಳಿದ್ದಾರೆ.

ಈ ಕುರಿತು ಕಿಚ್ಚ ಸುದೀಪ್‌ ಅವರು ಯಾವುದೇ ಪ್ರತಿಕ್ರಿಯೆ ನೀಡಲ್ಲ. ಟ್ವಿಟರ್‌ನಲ್ಲಿಯೂ ಈ ಬಗ್ಗೆ ಬರೆದುಕೊಂಡಿಲ್ಲ. ಡಿಕೆಶಿ- ಕಿಚ್ಚ ಸುದೀಪ್‌ ಭೇಟಿ ವೇಳೆ, ಕೆಪಿಸಿಸಿ ಯುವ ಮುಖಂಡ ಮೊಹಮ್ಮದ್‌ ನಲಪಾಡ್‌ ಸಹ ಹಾಜರಿದ್ದರು. ಇದಕ್ಕೆ ಸಂಬಂಧಿಸಿದ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿವೆ.

English summary
KPCC president DK Shivakumar went to Kiccha Sudeep's house in JP Nagar, Bengaluru and held talks. He also ate lunch with them. As this news is spreading, many words are spreading in the political circle,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X