ಸಚಿವರಾಗಿ ಡಿಕೆಶಿ, ರೋಷನ್ ಬೇಗ್ ಪ್ರಮಾಣ ವಚನ
ಬೆಂಗಳೂರು, ಜ. 1 : ಸಿಎಂ ಸಿದ್ದರಾಮಯ್ಯ ಅವರ ಸಂಪುಟಕ್ಕೆ ಡಿ.ಕೆ.ಶಿವಕುಮಾರ್ ಮತ್ತು ರೋಷನ್ ಬೇಗ್ ಸೇರ್ಪಡೆಗೊಂಡಿದ್ದಾರೆ. ಬುಧವಾರ ಸಂಜೆ 5.15ಕ್ಕೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಇಬ್ಬರು ಶಾಸಕರಿಗೆ ಪ್ರಮಾಣ ವಚನ ಬೋಧಿಸಿದರು. ಸಿಎಂ ಸಿದ್ದರಾಮಯ್ಯ ಸೇರಿದಂತೆ ಕೆಲವು ಸಚಿವರು ಈ ಸಂದರ್ಭದಲ್ಲಿ ಹಾಜರಿದ್ದರು.
ಸಂಜೆ 5.10ಕ್ಕೆ ರಾಜ್ಯಪಾಲರು ಮತ್ತು ಸಿಎಂ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುವ ಬ್ಯಾಕ್ಟೆಟ್ ಹಾಲ್ ಗೆ ಆಗಮಿಸಿದರು. ಮೊದಲು ಕನಕಪುರ ಕ್ಷೇತ್ರದ ಶಾಸಕ ಡಿಕೆ ಶಿವಕುಮಾರ್ ಅವರಿಗೆ ರಾಜ್ಯಪಾಲರು ಪ್ರಮಾಣ ವಚನ ಬೋಧಿಸಿದರು. ದೇವರ ಹೆಸರಿನಲ್ಲಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದರು. [ಯಾವ ಸಚಿವರಿಗೆ ಯಾವ ಖಾತೆ]

ಡಿಕೆ ಶಿವಕುಮಾರ್ ಅವರ ನಂತರ ಶಿವಾಜಿ ನಗರ ಕ್ಷೇತ್ರದ ಶಾಸಕ ಆರ್.ರೋಷನ್ ಬೇಗ್ ಅವರಿಗೆ ರಾಜ್ಯಪಾಲರು ಪ್ರಮಾಣ ವಚನ ಬೋಧಿಸಿದರು. ರೋಷನ್ ಬೇಗ್ ಸಹ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇಬ್ಬರು ಶಾಸಕರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. [ಇಬ್ಬರು ಸಚಿವರ ಮೇಲಿರುವ ಆರೋಪಗಳು]
ಡಿಕೆ ಶಿವಕುಮಾರ್ ತಮ್ಮ ಕುಟುಂಬದ ಸದಸ್ಯರೊಂದಿಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸಿದ್ದರು. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಸಚಿವರಾದ ಮಹದೇವ ಪ್ರಸಾದ್, ಖಮರುಲ್ ಇಸ್ಲಾಂ, ವಿಧಾನ ಪರಿಷತ್ ಸದಸ್ಯೆ ಮೋಟಮ್ಮ ಮುಂತಾದವರು ಪ್ರಮಾಣ ವಚನ ಸಮಾರಂಭದಲ್ಲಿ ಉಪಸ್ಥಿತರಿದ್ದರು. [ಡಿಕೆ ಶಿವಕುಮಾರ್ ಸಂಕ್ಷಿಪ್ತ ಪರಿಚಯ], [ರೋಷನ್ ಬೇಗ್ ಸಂಕ್ಷಿಪ್ತ ಪರಿಚಯ]
ನನಗೆ ಯಾವುದೇ ಅಸಮಾಧಾನ ವಿಲ್ಲ : ನನ್ನ ಸ್ವ ಇಚ್ಛೆಯಿಂದ ನಾನು ಸಂಪುಟ ವಿಸ್ತರಣೆ ಮಾಡಿದ್ದೇನೆ. ಡಿಕೆ ಶಿವಕುಮಾರ್ ಮೇಲೆ ಒಂದು ಆರೋಪವಿದೆ ಆದರೆ, ಅದರ ತನಿಖೆಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ರೋಷನ್ ಬೇಗ್ ಅವರ ವಿರುದ್ಧದ ಆರೋಪ ಕೇವಲ ಖಾಸಗಿ ದೂರು ಮಾತ್ರ ಆದ್ದರಿಂದ ನಾನು ಸಂಪುಟ ವಿಸ್ತರಣೆ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಉಳಿದವರಿಗೆ ನ್ಯಾಯ ದೊರಕಿಸಲು ಪ್ರಯತ್ನ ನಡೆಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಂತರ ಪ್ರತಿಕ್ರಿಯೆ ನೀಡಿದ್ದಾರೆ.












Click it and Unblock the Notifications