Lakshmi Hebbalkar: "ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನೋಡಲು ಡಿ.ಕೆ ಶಿವಕುಮಾರ್ ಓಡೋಡಿ ಬರ್ತಿದ್ದಾರೆ"
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕಾರು ಅಪಘಾತದಲ್ಲಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದಲ್ಲಿ ಸಣ್ಣ ಚೇತರಿಕೆ ಸಹ ಕಂಡು ಬಂದಿದೆ. ಆದರೆ, ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ನೋಡುವುದಕ್ಕೆ ಸಚಿವರಾದ ಜಮೀರ್ ಅಹಮದ್‌ಖಾನ್ ಹಾಗೂ ಉಪ ಮುಖ್ಯಮಂತ್ರಿ ಹಾಗೂ ಸಚಿವ ಡಿ.ಕೆ ಶಿವಕುಮಾರ್ ಅವರು ಸೇರಿದಂತೆ ಹಲವರು ಓಡೋಡಿ ಬರ್ತಿದ್ದಾರೆ ಅಂತ ಟ್ವೀಟ್‌ವೊಂದನ್ನು ಜೆಡಿಎಸ್ ಮಾಡಿದೆ. ಅಲ್ಲದೆ ಪ್ರಮುಖ ಪ್ರಶ್ನೆಯೊಂದನ್ನು ಸಹ ಕೇಳಿದೆ. ಇದೀಗ ಈ ಟ್ವೀಟ್ ಭಾರೀ ಚರ್ಚೆಗೆ ಕಾರಣವಾಗಿದೆ. ಜೆಡಿಎಸ್ ಮಾಡಿದ ಟ್ವೀಟ್‌ನಲ್ಲಿ ಏನಿದು ಎನ್ನುವುದನ್ನು ನೋಡೋಣ..
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕಾರು ಅಪಘಾತದಲ್ಲಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದಾರೆ. ಈಚೆಗೆ ಸಂಭವಿಸಿದ ಕಾರು ಅಪಘಾತದಲ್ಲಿ ಅವರ ಬೆನ್ನು ಮೂಳೆಗೆ ಪೆಟ್ಟಾಗಿದ್ದು. ಅವರಿಗೆ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು. ಅವರು ಬೆಡ್ ರೆಸ್ಟ್‌ನಲ್ಲಿ ಇದ್ದಾರೆ. ಆದರೆ ಅವರನ್ನು ನೋಡಲು ಆಸ್ಪತ್ರೆಗೆ ಸಚಿವರು ಬರುತ್ತಿರುವ ಬಗ್ಗೆ ಜೆಡಿಎಸ್ ಪಕ್ಷವು ವ್ಯಂಗ್ಯವಾಗಿ ಪ್ರಶ್ನೆಯೊಂದನ್ನು ಮಾಡಿದೆ. ರಾಜ್ಯದಲ್ಲಿ ಬಾಣಂತಿಯರು ಸಾವನ್ನಪ್ಪಿದಾಗ ಬರಲಿಲ್ಲವೇಕೆ ಅಂತ ಪ್ರಶ್ನೆ ಮಾಡಿ ಕಾಂಗ್ರೆಸ್‌ಗೆ ಬಿಸಿ ಮುಟ್ಟಿಸಿದೆ.

ಈ ಬಗ್ಗೆ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಜೆಡಿಎಸ್ ಪಕ್ಷವು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಅಪಘಾತದಲ್ಲಿ ಬೆಳಗಾವಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹಾಗೂ ಸಚಿವ ಜಮೀರ್ ಅಹಮದ್ ಖಾನ್ ಅವರು ಸೇರಿದಂತೆ ಕಾಂಗ್ರೆಸ್ ನಾಯಕರುಗಳು ಓಡೋಡಿ ಹೋಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಆರೋಗ್ಯವನ್ನು ವಿಚಾರಿಸಿ ಶೀಘ್ರ ಚೇತರಿಕೆಗೆ ಹಾರೈಸಿ ಬರುತ್ತಿದ್ದಾರೆ. ಇದು ತಪ್ಪೇನು ಅಲ್ಲ. ಆದರೆ ಬೆಳಗಾವಿ, ಬಳ್ಳಾರಿ, ರಾಯಚೂರು ಸೇರಿದಂತೆ ಕರ್ನಾಟಕದ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಹಾಗೂ ನವಜಾತ ಶಿಶುಗಳ ಸರಣಿ ಸಾವುಗಳು ಸಂಭವಿಸಿದಾಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬರಲಿಲ್ಲ.
ಇಲ್ಲವೇ ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಆಗಲಿ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆಗಲಿ ಯಾರೊಬ್ಬರೂ ಒಮ್ಮೆಯೂ ಆಸ್ಪತ್ರೆಗೆ ಭೇಟಿ ನೀಡಿಲ್ಲ. ಮೃತರ ಕುಟುಂಬದವರಿಗೆ ಸಾಂತ್ವನವನ್ನು ಹೇಳಲೇ ಇಲ್ಲ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಜನಸಾಮಾನ್ಯರ ಜೀವಕ್ಕೆ ಬೆಲೆಯೇ ಇಲ್ಲ. ಸರ್ಕಾರದ ಬೇಜವಾಬ್ದಾರಿ, ನಿರ್ಲಕ್ಷ್ಯಕ್ಕೆ ಬಡವರು ಬಲಿಯಾದರೇ ಡೋಂಟ್ ಕೇರ್ ಎನ್ನುವ ಧೋರಣೆಯನ್ನು ಈ ಸರ್ಕಾರ ಅನುಸರಿಸುತ್ತಿದೆ. ಕಾಂಗ್ರೆಸ್ ನಾಯಕರಿಗೆ ಆದರೇ ವಿಶೇಷ ಕಾಳಜಿ. ಕಾಂಗ್ರೆಸ್ ಸರ್ಕಾರದ ಈ ಇಬ್ಭಗೆ ನೀತಿಗೆ ಧಿಕ್ಕಾರವಿರಲಿ ಅಂತ ಟ್ವೀಟ್ ಮಾಡಲಾಗಿದೆ.

ಇನ್ನು ಈಚೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಭೇಟಿ ಮಾಡಿದ್ದ ಸಚಿವ ಜಮೀರ್ ಅಹಮದ್ ಖಾನ್ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವರ ಆರೋಗ್ಯವನ್ನು ವಿಚಾರಿಸಿದ್ದರು. ಈ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿತ್ತು. ಇದರ ಬೆನ್ನಲ್ಲೇ ಜೆಡಿಎಸ್ ಈ ರೀತಿ ಟ್ವೀಟ್ ಮಾಡಿ ಕಾಂಗ್ರೆಸ್ ನಾಯಕರನ್ನು ಪ್ರಶ್ನೆ ಮಾಡಿದೆ.












Click it and Unblock the Notifications