Get Updates
Get notified of breaking news, exclusive insights, and must-see stories!

ಇಂದು (ಫೆ.14) ಡಿ.ಕೆ. ಶಿವಕುಮಾರ್ ಪುತ್ರಿ ಐಶ್ಚರ್ಯ ವಿವಾಹ

ಬೆಂಗಳೂರು, ಫೆ. 13: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಹಿರಿಯ ಪುತ್ರಿ ಐಶ್ವರ್ಯ ಅವರ ವಿವಾಹ ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರ ಅಳಿಯ, ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ದಾರ್ಥ ಹೆಗ್ಡೆ ಅವರ ಹಿರಿಯ ಪುತ್ರ ಅಮರ್ತ್ಯ ಹೆಗ್ಡೆ ಅವರೊಂದಿಗೆ ನಾಳೆ (ಫೆಬ್ರುವರಿ 14) ಬೆಂಗಳೂರಿನಲ್ಲಿ ನಡೆಯಲಿದೆ.

ಎರಡೂ ಕುಟುಂಬಗಳು ಮದುವೆ ಸಿದ್ಧತೆಯನ್ನು ಭರ್ಜರಿಯಾಗಿ ಆರಂಭಿಸಿದ್ದು, ವೆಲೆಂಟೈನ್ಸ್‌ ಡೇ ಅಂದೇ ಐಶ್ವರ್ಯ ಹಾಗೂ ಅಮರ್ತ್ಯ ಹೆಗ್ಡೆ ಅವರು ವಿವಾಹ ಬಂಧನಕ್ಕೆ ಒಳಗಾಗಲಿದ್ದಾರೆ. ಎಸ್‌.ಎಂ. ಕೃಷ್ಣ ಹಾಗೂ ಡಿ.ಕೆ. ಶಿವಕುಮಾರ್ ಅವರು ಕುಟುಂಬಗಳು ರಾಜ್ಯ ರಾಜಕೀಯದಲ್ಲಿ ಅತ್ಯಂತ ಪ್ರಭಾವಿಯಾಗಿವೆ. ಜೊತೆಗೆ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಗಣ್ಯರು ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು, ಮದುವೆ ತಯಾರಿ ಜೋರಾಗಿದೆ.

ಬೀಗರಾದ ಎಸ್‌.ಎಂ. ಕೃಷ್ಣ ಹಾಗೂ ಡಿ.ಕೆ. ಶಿವಕುಮಾರ್ ಅವರು ಖುದ್ದಾಗಿ ವಿವಾಹದ ಪ್ರತಿಯೊಂದು ಸಿದ್ಧತೆಗಳನ್ನು ನಡೆಸಿದ್ದಾರೆ. ಐಶ್ವರ್ಯ ಹಾಗೂ ಅಮರ್ತ್ಯ ಹೆಗ್ಡೆ ಅವರ ಮದುವೆ ಸಿದ್ಧತೆ ಪೂರ್ಣಗೊಂಡಿದ್ದು ನಾಳೆ ವಧು-ವರರು ವಿವಾಹ ಬಂಧನಕ್ಕೆ ಒಳಗಾಗಲಿದ್ದಾರೆ.

ನಾಳೆ (ಫೆ.14) ಅಮರ್ತ್ಯ-ಐಶ್ವರ್ಯ ವಿವಾಹ

ನಾಳೆ (ಫೆ.14) ಅಮರ್ತ್ಯ-ಐಶ್ವರ್ಯ ವಿವಾಹ

ಅಮರ್ತ್ಯ ಹೆಗ್ಡೆ ಹಾಗೂ ಐಶ್ವರ್ಯಾ ಅವರ ವಿವಾಹ ವ್ಯಾಲೆಂಟೇನ್ ಡೇಯಂದು ನಡೆಯಲಿದೆ. ಬೆಂಗಳೂರಿನ ಶೇರಟಾನ್ ಹೊಟೇಲ್‌ನಲ್ಲಿ ನಾಳೆ (ಫೆಬ್ರವರಿ 14) ವಿವಾಹ ನಡೆಯಲಿದೆ. ಈಗಾಗಲೇ ವಧು-ವರರಿಗೆ ಎಣ್ಣೆ ಶಾಸ್ತ್ರ, ಅರಿಶಿಣ ಶಾಸ್ತ್ರ ಸೇರಿದಂತೆ ಸಾಂಪ್ರದಾಯಿಕ ಕಾರ್ಯಕ್ರಮಗಳು ನಡೆದಿವೆ. ಇವತ್ತು (ಫೆಬ್ರುವರಿ 13) ಸದಾಶಿವನಗರದ ಡಿಕೆಶಿ ಅವರ ನಿವಾಸದಲ್ಲಿ ಮೆಹಂದಿ ಕಾರ್ಯಕ್ರಮ ನಡೆದಿದೆ. ನಾಳೆ ವಿವಾಹದ ಬಳಿಕ ಫೆಬ್ರುವರಿ 17 ರಂದು ಪ್ರೆಸ್ಟೀಜ್ ಗಾಲ್ಫ್‌ಶೈರ್ ರೇಸಾರ್ಟ್‌ನಲ್ಲಿ ಮದುವೆ ಆರತಕ್ಷತೆ ನಡೆಯಲಿದ್ದು, ಫೆ. 28 ರಂದು ಅರಮನೆ ಮೈದಾನದಲ್ಲಿ ಬೀಗರ ಊಟ ಏರ್ಪಡಿಸಲಾಗಿದೆ.

ಸಂಗೀತ ರಸಸಂಜೆ ಕಾರ್ಯಕ್ರಮ

ಸಂಗೀತ ರಸಸಂಜೆ ಕಾರ್ಯಕ್ರಮ

ಅಮರ್ತ್ಯ ಹೆಗ್ಡೆ ಹಾಗೂ ಐಶ್ವರ್ಯಾ ಅವರ ವಿವಾಹ ಹಿನ್ನೆಲೆಯಲ್ಲಿ ಫೆಬ್ರವರಿ 5ರಂದು ಭರ್ಜರಿ ಸಂಗೀತ ರಸ ಸಂಜೆ ಕಾರ್ಯಕ್ರಮ ನಡೆದಿದೆ. ಎರಡು ಕುಟುಂಬಗಳ ಸದಸ್ಯರು ಮಾತ್ರ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶವಿತ್ತು. ಜೊತೆಗೆ ಮದುವೆ ಗಂಡು ಅಮರ್ತ್ಯ ಹೆಗ್ಡೆ ಅವರು ತಮ್ಮ ಸಹೋದರನೊಂದಿಗೆ ಕಾದಲನ್ ಸಿನಿಮಾದ ಹಾಡಿಗೆ ಭರ್ಜರಿ ಸ್ಟೆಪ್ಸ್ ಹಾಕಿರುವುದು ವಿಶೇಷ. ಆ ಸಂದರ್ಭದಲ್ಲಿ ಮಾಜಿ ಸಿಎಂ ಎಸ್‌.ಎಂ. ಕೃಷ್ಣ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೂ ಉಪಸ್ಥಿತರಿದ್ದರು.

ಇಂದು ನಡೆದ ಮೆಹಂದಿ ಕಾರ್ಯಕ್ರಮ

ಇಂದು ನಡೆದ ಮೆಹಂದಿ ಕಾರ್ಯಕ್ರಮ

ಫೆಬ್ರುವರಿ 10ರಂದು ಅರಿಶಿಣ ಕಾರ್ಯಕ್ರಮ ಮುಗಿದಿದೆ. ಇಂದು ಬೆಂಗಳೂರಿನ ಸದಾಶಿವನಗರದ ಡಿ.ಕೆ. ಶಿವಕುಮಾರ್ ಅವರ ನಿವಾಸದಲ್ಲಿ ಮೆಹಂದಿ ಕಾರ್ಯಕ್ರಮ ನಡೆದಿದ್ದು, ಆಯ್ದ ಸಂಬಂಧಿಕರಿಗೆ ಮಾತ್ರ ಆಹ್ವಾನ ನೀಡಲಾಗಿದೆ ಎನ್ನಲಾಗಿತ್ತು. ಮೆಹಂದಿ ಕಾರ್ಯಕ್ರಮವನ್ನು ಸಾಂಪ್ರದಾಯಿಕವಾಗಿ ವಿಶೇಷವಾಗಿ ಎರಡೂ ಕುಟುಂಬಗಳು ಮಾಡಿ ಮುಗಿಸಿವೆ.

ಹೈ ಪ್ರೋಫೈಲ್ ವಿವಾಹ

ಹೈ ಪ್ರೋಫೈಲ್ ವಿವಾಹ

ಐಶ್ವರ್ಯಾ ಹಾಗೂ ಅಮರ್ತ್ಯ ಹೆಗ್ಡೆ ಅವರ ಮದುವೆ ಹೆಣ್ಣು ನೋಡುವ ಶಾಸ್ತ್ರದಿಂದ ಆರಂಭಿಸಿ ಪ್ರತಿಯೊಂದನ್ನು ಅತ್ಯಂತ ಸಾಂಪ್ರದಾಯಿಕವಾಗಿ ನಡೆಯುತ್ತಿದೆ. ವಿವಾಹದಲ್ಲಿನ ಪ್ರತಿಯೊಂದನ್ನು ಆಚರಣೆಯನ್ನು ತಮ್ಮ ಆಪ್ತ ಜ್ಯೋತಿಷಿ ಡಾ. ಬಿ.ಪಿ. ಆರಾಧ್ಯ ಅವರ ಸಲಹೆಯಂತೆಯೆ ಡಿ.ಕೆ. ಶಿವಕುಮಾರ್ ಅವರು ನೆರವೇರಿಸುತ್ತಿದ್ದಾರೆ.


ಕಳೆದ ಜೂನ್ 12, 2020ರಂದು ಡಿ.ಕೆ. ಶಿವಕುಮಾರ್ ಕುಟುಂಬದವರು ಸದಾಶಿವನಗರದ ಎಸ್.ಎಂ. ಕೃಷ್ಣ ನಿವಾಸಕ್ಕೆ ತೆರಳಿ ಮದುವೆ ಮಾತುಕತೆ ನಡೆಸಿದ್ದರು. ನಂತರ ನವೆಂಬರ್ 18, 2020ರಂದು ಐಶ್ವರ್ಯಾ ಹಾಗೂ ಅಮರ್ತ್ಯ ಹೆಗ್ಡೆ ಅವರ ಮದುವೆ ನಿಶ್ಚಿತಾರ್ಥ ಬೆಂಗಳೂರಿನ ಹೊರವಲಯದ ಹೋಟೆಲ್‌ನಲ್ಲಿ ನಡೆದಿತ್ತು. ಎಸ್‌ಎಂಕೆ ಅವರು ಬಿಜೆಪಿ ನಾಯಕರಿಗೆ ಆಹ್ವಾನ ನೀಡಿದ್ದರು.


ಇದೀಗ ವಿವಾಹಕ್ಕೆ ರಾಜ್ಯ ಹಾಗೂ ರಾಷ್ಟ್ರಮಟ್ಟದ ಗಣ್ಯರಿಗೆ ಎಸ್‌ಎಂಕೆ ಹಾಗೂ ಡಿಕೆಶಿ ಆಹ್ವಾನ ಕೊಟ್ಟಿದ್ದಾರೆ. ಹೀಗಾಗಿ ಫೆಬ್ರುವರಿ 14 ರಂದು ರಾಜ್ಯ ಹಾಗೂ ರಾಷ್ಟ್ರದ ರಾಜಕೀಯ ನಾಯಕರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+