ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರಕ್ಕೆ ಕುತ್ತು ತರಲಿದೆಯಾ 'ಕೈ' ನಾಯಕರ 'ಆ ಆಹ್ವಾನ'?
ಬೆಂಗಳೂರು,
ಜು. 03: ಕಾಂಗ್ರೆಸ್ ಪಕ್ಷದ ನಾಯಕರ ಆಹ್ವಾನ ರಾಜ್ಯ ಬಿಜೆಪಿ ಸರ್ಕಾರಕ್ಕೆ ಮತ್ತೊಂದು ಆತಂಕ ಸೃಷ್ಟಿಸಿದೆ. ಬಿಜೆಪಿ ಹೈಕಮಾಂಡ್ ಸದ್ಯಕ್ಕೆ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದೆ. ಆದರೂ ನಾಯಕತ್ವದ ಬದಲಾವಣೆ ಕುರಿತು ರಾಜ್ಯ ಬಿಜೆಪಿಯಲ್ಲಿ ಇನ್ನೂ ಚರ್ಚೆ ನಿಂತಿಲ್ಲ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರ ಮೇಲೆಯೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹರಿಹಾಯ್ದಿದ್ದಾರೆ. ಇದೇ ಸಂದರ್ಭದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಅದು ರಾಜ್ಯ ಬಿಜೆಪಿ ಸರ್ಕಾರದ ಭವಿಷ್ಯವನ್ನೇ ಪ್ರಶ್ನಿಸುವಂತೆ ಮಾಡಿದೆ. id="toptextpromo"> id='are-slot-1' class='oiad oi-axt oiadv'>ಕಾಂಗ್ರೆಸ್
ಪಕ್ಷದಂತೆ ಬಿಜೆಪಿಯಲ್ಲಿಯೂ ದಿನದಿಂದ ದಿನಕ್ಕೆ ಮೂಲ-ವಲಸೆ ಚರ್ಚೆ ಹೆಚ್ಚಾಗುತ್ತಲೇ ಇದೆ. ಸದ್ಯದ ಸ್ಥಿತಿಯಲ್ಲಿ ಸಿಎಂ ಯಡಿಯೂರಪ್ಪ ಅವರ ಸಂಪುಟದಲ್ಲಿ ಅರ್ಧಕ್ಕಿಂತ ಹೆಚ್ಚು ಸಚಿವರು ವಲಸೆ ಬಂದವರಾಗಿದ್ದಾರೆ. ಬಿಜೆಪಿ ಸಿದ್ದಾಂತವನ್ನು ಒಪ್ಪಿಕೊಂಡು ಪಕ್ಷದ ಶಿಸ್ತಿಗೆ ಒಳಪಟ್ಟು ನಡೆಯುತ್ತಿರುವುದಾಗಿ ಆಗಾಗ ವಲಸೆ ನಾಯಕರು ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಆದರೆ ರಾಜಕಾರಣದಲ್ಲಿ ಮುಂದೆನಾಗುತ್ತದೆ? ಎಂದು ಈಗಲೇ ಹೇಳುವುದು ಕಷ್ಟ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು. ಇದೇ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೊಟ್ಟಿರುವ ಹೇಳಿಕೆ ಬಿಜೆಪಿಯಲ್ಲಿ ಸಂಚಲನವನ್ನುಂಟುಮಾಡಿದೆ. id='are-slot-2' class='oiad oi-axt oiadv'>
ಬಿಜೆಪಿ ಸರ್ಕಾರಕ್ಕೆ ಶುರುವಾಯ್ತು ಆತಂಕ?
"ಕಾಂಗ್ರೆಸ್ ಪಕ್ಷದ ಸಿದ್ಧಾಂತ, ನಾಯಕತ್ವ ಒಪ್ಪಿ, ಕೆಲಸ ಮಾಡಲು ಇಚ್ಛಿಸುವ ಯಾರೇ ಆದರೂ ಪಕ್ಷ ಸೇರಲು ಅರ್ಜಿ ಹಾಕಬಹುದು. ನಾನು ಕೇವಲ 17 ಜನರನ್ನು ಉದ್ದೇಶಿಸಿ ಈ ಮಾತು ಹೇಳುತ್ತಿಲ್ಲ. ಯಾರೇ ಅರ್ಜಿ ಹಾಕಿದರೂ ಪಕ್ಷ ಅದನ್ನು ಪರಿಶೀಲಿಸಿ ತೀರ್ಮಾನ ತೆಗೆದುಕೊಳ್ಳಲಿದೆ" ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗ ಕಾಂಗ್ರೆಸ್ ತೊರೆದಿದ್ದ ನಾಯಕರೂ ಸೇರಿದಂತೆ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಕಾರಣವಾಗಿರುವ ಶಾಸಕರು, ಸಚಿವರ ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಮುಂದೆನೂ?
"ಯಾರು ಕಾಂಗ್ರೆಸ್ ಸಿದ್ಧಾಂತ, ನಾಯಕತ್ವ ನಂಬಿ ಪಕ್ಷ ಸೇರಲು ಬಯಸುತ್ತಾರೋ ಅವರು ಅರ್ಜಿ ಹಾಕಲಿ. ಅಲ್ಲಂ ವೀರಭದ್ರಪ್ಪ ಅವರ ನೇತೃತ್ವದ ಸಮಿತಿಗೆ ಅರ್ಜಿ ಹಾಕಿದ ಬಳಿಕ ಪರಿಶೀಲಿಸಿ, ಯಾರನ್ನು ತೆಗೆದುಕೊಳ್ಳಬೇಕು, ಯಾರನ್ನು ತೆಗೆದುಕೊಳ್ಳಬಾರದು ಅಂತಾ ಅವರು ನಿರ್ಧರಿಸುತ್ತಾರೆ. ಮುಂದೆ ಯಾವುದೇ ಗೊಂದಲ ಉದ್ಭವಿಸಬಾರದು. ಹೀಗಾಗಿ ಬ್ಲಾಕ್ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಸ್ಥಳೀಯ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ, ಆನಂತರ ರಾಜ್ಯಮಟ್ಟದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ಯಾರಿಗೆ ಇಚ್ಛೇ ಇದೆಯೋ ಅವರು ಅರ್ಜಿ ಹಾಕಲಿ, ಆಮೇಲೆ ಆ ಬಗ್ಗೆ ತೀರ್ಮಾನ ಮಾಡೋಣ." ಎಂದು ನೇರವಾಗಿ ಆಹ್ವಾನ ನೀಡಿದ್ದಾರೆ. ಇದು ಬಿಜೆಪಿ ನಾಯಕರಲ್ಲಿ ಆತಂಕ ಸೃಷ್ಟಿಯಾಗಲು ಕಾರಣವಾಗಿದೆ.
"ನಮ್ಮಲ್ಲಿ ಒಬ್ಬೊಬ್ಬರದ್ದೂ ಒಂದೊಂದು ಅಭಿಪ್ರಾಯ ಇರುತ್ತದೆ. ಇಲ್ಲಿ ವೈಯಕ್ತಿಕ ಅಭಿಪ್ರಾಯ ಮುಖ್ಯ ಅಲ್ಲ. ಪಕ್ಷದ ಒಟ್ಟಾರೆ ಅಭಿಪ್ರಾಯ ಮುಖ್ಯ. ಪಕ್ಷ ತೊರೆದು ಮಂತ್ರಿಯಾಗಿರುವ 17 ಜನರಲ್ಲಿ ಯಾರೂ ಪಕ್ಷ ಸೇರುವ ಬಗ್ಗೆ ಸಂಪರ್ಕ ಮಾಡಿಲ್ಲ. ನಾನು ಕೇವಲ ಈ 17 ಜನರನ್ನು ಉದ್ದೇಶಿಸಿ ಮಾತ್ರ ಈ ಮಾತು ಹೇಳುತ್ತಿಲ್ಲ. ಯಾರು ಬೇಕಾದರೂ ಅರ್ಜಿ ಹಾಕಬಹುದು." ಎಂದು ತಮ್ಮ ಹೇಳಿಕೆಯಲ್ಲಿ ಡಿಕೆಶಿ ತಿಳಿಸಿದ್ದಾರೆ. ಇದೇ ಮಾತನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೂ ಹೇಳಿರುವುದು ಕುತೂಹಲ ಮೂಡಿಸಿದೆ.

ಚಿಂತೆಗೆ ಹಚ್ಚಿದ ಸಿದ್ದರಾಮಯ್ಯ ಮಾತು!
"ಪ್ರಳಯವಾದರೂ ಪಕ್ಷ ತೊರೆದು ಹೋದವರನ್ನು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ನಾನು ವಿಧಾನಸಭೆಯಲ್ಲಿ ಹೇಳಿದ್ದು ನಿಜ" ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಹೇಳಿದ್ದಾರೆ. ಆದರೆ ಪಕ್ಷ ಬಿಟ್ಟು ಹೋದವರು ಮಾತ್ರವಲ್ಲ ಯಾರು ಬೇಕಾದರೂ ಕಾಂಗ್ರೆಸ್ ಸೇರಲು ಅರ್ಜಿ ಹಾಕಿಕೊಳ್ಳಬಹುದು ಎಂದು ಕೆಪಿಸಿಸಿ ಅಧ್ಯಕ್ಷರು ಹೇಳಿದ್ದಾರೆ. ಪಕ್ಷ ತೊರೆದವರನ್ನೇ ಸೇರಿಸಿಕೊಳ್ಳುವುದಾಗಿ ಯಾರೂ ಹೇಳಿಲ್ಲ. ಈ ಕುರಿತು ನಾನು ಡಿಕೆ ಶಿವಕುಮಾರ್ ಅವರ ಜೊತೆ ಮಾತನಾಡುತ್ತೇನೆ" ಎಂದು ಹೇಳಿಕೆಯಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ.
Recommended Video

ಸಿದ್ದರಾಮಯ್ಯ ಆಪ್ತರೆ ಹೆಚ್ಚಿದ್ದಾರೆ!
ಮೈತ್ರಿ ಸರ್ಕಾರಕ್ಕೆ ಕಾರಣವಾಗುವಂತೆ ಶಾಸಕಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದ 17 ಶಾಸಕರಲ್ಲಿ ಹೆಚ್ಚಿನವರು ಸಿದ್ದರಾಮಯ್ಯ ಅವರ ಆಪ್ತರು ಎಂಬ ಆರೋಪ ಈ ಮೊದಲೇ ಕೇಳಿ ಬಂದಿತ್ತು. ಸಿದ್ದರಾಮಯ್ಯ ಅವರಿಗೆ ಅನಾರೋಗ್ಯವಾದಾಗ "ಸಿದ್ದರಾಮಯ್ಯ ಯಾವಾಗಲೂ ನಮ್ಮ ನಾಯಕರು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆರೋಗ್ಯ ವಿಚಾರಿಸಿದ್ದರು. ಜೊತೆಗೆ ಪಕ್ಷ ತೊರೆದಿದ್ದ ಹಲವರು ಸಿದ್ದರಾಮಯ್ಯ ಅವರನ್ನು ಸೌಜನ್ಯದ ಭೇಟಿ ಮಾಡಿದ್ದರು. ಆದರೆ ಆ ಸೌಜನ್ಯದೊಂದಿಗೆ ಇನ್ನೂ ಆತ್ಮೀಯತೆ ಉಳಿದುಕೊಂಡಿದೆ ಎಂಬುದಂತೂ ಸತ್ಯ. ಹೀಗಾಗಿ 17 ಜನರನ್ನು ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ ಮಾಡಿರುವುದು ನಮ್ಮ ನಾಯಕರಿಗೆ ಆತಂಕ ತಂದಿರುವುದರಲ್ಲಿ ಆಶ್ಚರ್ಯವಿಲ್ಲ" ಎನ್ನುತ್ತಾರೆ ಹೆಸರು ಹೇಳಲಿಚ್ಚಿಸದ ರಾಜ್ಯ ಬಿಜೆಪಿಯ ಹಿರಿಯ ನಾಯಕರೊಬ್ಬರು.












Click it and Unblock the Notifications