ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾಜಿ ಸಿಎಂ ಸಿದ್ದರಾಮಯ್ಯ ಬೆಂಬಲಿಗ ಶಾಸಕರಿಗೆ ಎಚ್ಚರಿಕೆ ಕೊಟ್ಟ ಡಿ.ಕೆ. ಶಿವಕುಮಾರ್!

|
Google Oneindia Kannada News

ಬೆಂಗಳೂರು, ಜೂ. 23: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರವಾಗಿದ್ದರೆ, ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಮುಖ್ಯಮಂತ್ರಿ ಯಾರು? ಎಂಬುದರ ಬಗ್ಗೆ ಭರ್ಜರಿ ಚರ್ಚೆ ನಡೆದಿದೆ. ವಿಧಾನಸಭೆ ಚುನಾವಣೆಗೆ ಇನ್ನೂ ಎರಡು ವರ್ಷಗಳ ಅವಧಿಯಿದೆ. ಆದರೆ ಎರಡೂ ರಾಷ್ಟ್ರೀಯ ಪಕ್ಷಗಳಲ್ಲಿ 'ಮುಖ್ಯಮಂತ್ರಿ' ಹುದ್ದೆಯ ಬಗ್ಗೆ ಹೇಳಿಕೆ-ಪ್ರತಿ ಹೇಳಿಕೆಗಳು ಜೋರಾಗಿಯೆ ನಡೆದಿವೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬದಲಾಗಬೇಕು ಎಂದು ಬಿಜೆಪಿ ಶಾಸಕರೇ ಬಹಿರಂಗ ಹೇಳಿಕೆ ಕೊಟ್ಟಿದ್ದರಿಂದ ಸಂಚಲನ ಉಂಟಾಗಿತ್ತು. ಅದಕ್ಕೆ ಹೈಕಮಾಂಡ್ ಬಯಸಿದರೆ ಹುದ್ದೆ ತೊರೆಯುತ್ತೇನೆ, ಒಂದು ಕ್ಷಣವೂ ನಾನು ಸಿಎಂ ಸ್ಥಾನದಲ್ಲಿ ಮುಂದುವರೆಯಲಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೂ ಹೇಳಿಕೆ ಕೊಟ್ಟಿದ್ದರು. ಕೊನೆಗೆ ಬಿಜೆಪಿ ಹೈಕಮಾಂಡ್ ಮಧ್ಯಪ್ರವೇಶದೊಂದಿಗೆ 'ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ' ಚರ್ಚೆ ತಾತ್ಕಾಲಿಕವಾಗಿ ತಣ್ಣಗಾಗಿದೆ.

ಇದೇ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಮುಖ್ಯಮಂತ್ರಿ ಕುರಿತು ಭರ್ಜರಿ ಚರ್ಚೆ ಶುರುವಾಗಿದೆ. ಸಿದ್ದರಾಮಯ್ಯ ಅವರು ಮುಂದಿನ ಮುಖ್ಯಮಂತ್ರಿ ಎಂದು ಕಾಂಗ್ರೆಸ್ ಪಕ್ಷದ 10ಕ್ಕೂ ಹೆಚ್ಚು ಶಾಸಕರು ಬಹಿರಂಗ ಹೇಳಿಕೆ ಕೊಟ್ಟಿದ್ದಾರೆ. ಕಾಂಗ್ರೆಸ್ ಶಾಸಕರ ಹೇಳಿಕೆಗಳು ರಾಜ್ಯ ಕಾಂಗ್ರೆಸ್ ನಾಯಕರಿಗೆ ತಲೆನೋವಾಗಿವೆ. ಮುಂದಿನ ಸಿಎಂ ಚರ್ಚೆ ಪಕ್ಷದಲ್ಲಿ ಹೆಚ್ಚಾಗುತ್ತಿದ್ದಂತೆಯೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಸದ್ಯ ಯಾವುದೇ ಖುರ್ಚಿ ಖಾಲಿಯಿಲ್ಲ!

ಸದ್ಯ ಯಾವುದೇ ಖುರ್ಚಿ ಖಾಲಿಯಿಲ್ಲ!

"ಸಿಎಂ ಆಗುವ ಆತುರದಲ್ಲಿ ನಾನಿಲ್ಲ. ನನ್ನ ಗುರಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದಷ್ಟೇ. ವಿಧಾನಸೌಧದಲ್ಲಿ ಅಧಿಕಾರ ಹಿಡಿಯಲು ನನ್ನನ್ನು ಚಪ್ಪಡಿ ಕಲ್ಲಿನ ಮೆಟ್ಟಿಲು ಮಾಡಿಕೊಳ್ಳಿ ಅಂತಾ ನಾನೇ ಹೇಳಿದ್ದೇನೆ" ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಬೆಂಬಲಿಗ ಶಾಸಕರಿಗೆ ತಿರುಗೇಟು ಕೊಟ್ಟಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೊಟ್ಟಿರುವ ಅವರು, "ಬಿಜೆಪಿ ಸಮಸ್ಯೆಗೂ, ಕಾಂಗ್ರೆಸ್ ವಿಚಾರಕ್ಕೂ ಬಹಳಷ್ಟು ವ್ಯತ್ಯಾಸವಿದೆ. ಈಗ ನಮ್ಮಲ್ಲಿ ಯಾವ ಕುರ್ಚಿಯೂ ಖಾಲಿ ಇಲ್ಲ. ಈಗ ನಮ್ಮ ರೇಸ್ ಏನಿದ್ದರೂ ಬಿಜೆಪಿಯನ್ನು ಅಧಿಕಾರದಿಂದ ಇಳಿಸಿ, ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದಾಗಿದೆ. ಅದಕ್ಕೆ ನಾವು ಸಮಯ ನೀಡಬೇಕು. ಅದನ್ನು ಬಿಟ್ಟು ಬೇರೆ ವಿಚಾರಕ್ಕೆ ಸಮಯ ನೀಡಿದರೆ ಅದು ವ್ಯರ್ಥವಾಗುತ್ತದೆ" ಎಂದರು.

ಸಿಎಂ ಆಗುವ ಆತುರವಿಲ್ಲ!

ಸಿಎಂ ಆಗುವ ಆತುರವಿಲ್ಲ!

"ಮಾಜಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಚುನಾವಣೆಗೆ ಹೋದರೆ ಮಾತ್ರ ಗೆಲುವು ಸಾಧ್ಯ. ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಿದರೆ ಮಾತ್ರ ಕಾಂಗ್ರೆಸ್ ಪಕ್ಷಕ್ಕೆ" ಎಂದು ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ಹೇಳಿದ್ದರು. "ಜೊತೆಗೆ ಡಿ.ಕೆ. ಶಿವಕುಮಾರ್ ಅವರಿಗೆ ವಯಸ್ಸಿದೆ, ಸಿದ್ದರಾಮಯ್ಯ ಅವರು 2023ಕ್ಕೆ ಮುಖ್ಯಮಂತ್ರಿ ಆಗಲಿ, ನಂತರ ಡಿ.ಕೆ. ಶಿವಕುಮಾರ್ ಆಗಲಿ" ಎಂದು ಮತ್ತೊಬ್ಬ ಕಾಂಗ್ರೆಸ್ ಶಾಸಕ ರಾಮಪ್ಪ ಅವರು ಹೇಳಿಕೆ ಕೊಟ್ಟಿದ್ದರು.

ಆ ಬಗ್ಗೆ ಪ್ರತಿಕ್ರಿಯೆ ಕೊಟ್ಟಿರುವ ಡಿಕೆಶಿ ಅವರು, "ಸಿಎಂ ಆಗಬೇಕೆಂಬ ಆತುರವಿದೆ ಎಂದು ನಾನು ಯಾವತ್ತಾದರೂ ಹೇಳಿದ್ದೀನಾ? ನನ್ನ ಗುರಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು. ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು, ವಿಧಾನಸೌಧದ ಮೂರನೇ ಮಹಡಿ ಏರಲು ನನ್ನನ್ನು ಮೆಟ್ಟಿಲಾಗಿ ಬಳಸಿಕೊಳ್ಳಿ ಅಂತಾ ನಾನು ಹೇಳಿದ್ದೇನೆ. ಯಾರ್ಯಾರು ಏನೇನು ಸಲಹೆ ಕೊಡುತ್ತಾರೋ, ಕೊಡಲಿ ಅದನ್ನು ಸ್ವೀಕರಿಸೋಣ" ಎಂದು ಪರೋಕ್ಷ ತಿರುಗೇಟು ಕೊಟ್ಟಿದ್ದಾರೆ.

ಸಿದ್ದರಾಮಯ್ಯ ಬೆಂಬಲಿಗೆ ಶಾಸಕರಿಗೆ ಎಚ್ಚರಿಕೆ!

ಸಿದ್ದರಾಮಯ್ಯ ಬೆಂಬಲಿಗೆ ಶಾಸಕರಿಗೆ ಎಚ್ಚರಿಕೆ!

ಶಾಸಕರ ಇಂತಹ ಹೇಳಿಕೆಗಳಿಂದ ಗೊಂದಲ ಸೃಷ್ಟಿಯಾಗುವ ಕುರಿತು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರು ಸ್ಪಷ್ಟನೆ ಕೊಟ್ಟಿದ್ದಾರೆ. "ಈ ವಿಚಾರವಾಗಿ ನಮ್ಮ ಪಕ್ಷದ ಹೈಕಮಾಂಡ್ ಏನು ಹೇಳಬೇಕೋ ಅದನ್ನು ಹೇಳಿದೆ. ಶಾಸಕರು ಹೇಳಿಕೆ ನೀಡುತ್ತಿದ್ದಾರೆ ಅಂತಾ ನೀವು ಹೇಳಿದ್ದೀರಿ, ನಾನೂ ಕೆಲವು ನೋಡಿದ್ದೇನೆ. ಶಾಸಕರ ಹೇಳಿಕೆಗಳನ್ನು ಶಾಸಕಾಂಗ ಪಕ್ಷದ ನಾಯಕರು ನೋಡಿಕೊಳ್ಳುತ್ತಾರೆ. ಅವರು ನೋಡಿಕೊಳ್ಳದಿದ್ದರೆ, ಆ ಬಗ್ಗೆ ಗಮನ ಹರಿಸಲು ಕಾಂಗ್ರೆಸ್ ಪಕ್ಷ ಬದುಕಿದೆ" ಎಂದು ಸಿದ್ದರಾಮಯ್ಯ ಅವರ ಬೆಂಬಲಿಗೆ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ.

ಶಾಸಕರ ಹೇಳಿಕೆಗಳಿಗೆ ವಿಪಕ್ಷ ನಾಯಕರೂ ಆಗಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಕಡಿವಾಣ ಹಾಕಬೇಕು. ಅವರು ಹಾಕದಿದ್ದರೆ ಪಕ್ಷದಿಂದ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂಬರ್ಥದಲ್ಲಿ ಡಿ.ಕೆ. ಶಿವಕುಮಾರ್ ಅವರು ಹೇಳಿಕೆ ಕೊಟ್ಟಿದ್ದಾರೆ.

Recommended Video

Strawberry Moon ಅಂದ್ರೆ ಏನು? ಚಂದ್ರನನ್ನು‌ ಹೀಗೆ ಕರೆಯೋದಕ್ಕೆ ಏನು ಕಾರಣ ಗೊತ್ತಾ? | Oneindia Kannada
ಶಾಸಕರಿಗೆ ಎಚ್ಚರಿಕೆ ಕೊಟ್ಟ ಹೈಕಮಾಂಡ್!

ಶಾಸಕರಿಗೆ ಎಚ್ಚರಿಕೆ ಕೊಟ್ಟ ಹೈಕಮಾಂಡ್!

ವಿಧಾನಸಭಾ ಚುನಾವಣೆಗೆ ಇನ್ನೂ ಎರಡು ವರ್ಷಗಳ ಅವಧಿಯಿದೆ. ಆದರೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ ಎಂದು ಅವರ ಬೆಂಬಲಿಗ ಕಾಂಗ್ರೆಸ್ ಶಾಸಕರು ಈಗಿನಿಂದಲೇ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಈಗಾಗಲೇ 10ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಹೀಗೆ ಹೇಳಿಕೆಗಳ ಮೂಲಕ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿದ್ದಾರೆ. ಇದು ಸಹಜವಾಗಿಯೇ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರಿಗೆ ಮುಜುಗರವನ್ನುಂಟು ಮಾಡುತ್ತಿದೆ. ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ಕೂಡ ಹೇಳಿಕೆಗಳನ್ನು ಕೊಡದಂತೆ ಸೂಚಿಸಿದೆ.

English summary
More than 10 MLAs in the Congress party have made a public statement that Siddaramaiah will be the next CM. KPCC President D.K. Shivakumar issued a warning. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X