ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಭಾರತ್‌ ಬಂದ್‌'ಗೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲ!

|
Google Oneindia Kannada News

ಬೆಂಗಳೂರು, ಸೆ. 26: ರೈತ ಸಂಘಟನೆಗಳು ಕರೆ ಕೊಟ್ಟಿರುವ 'ಭಾರತ್ ಬಂದ್‌'ಗೆ ನಾನ್ಯಾಕೆ ಪ್ರತಿಕ್ರಿಯೆ ಕೊಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ಕೊಟ್ಟಿದ್ದರು. ಇದೀಗ ಕಾಂಗ್ರೆಸ್ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದೆ.

ತಮ್ಮ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರೈತರು ಕರೆ ಕೊಟ್ಟಿರುವ 'ಭಾರತ್ ಬಂದ್'ಗೆ ರಾಜ್ಯ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದೆ. ಸೋಮವಾರ (ಸೆ.27) ನಡೆಯುವ "ರೈತರ ಹಕ್ಕೊತ್ತಾಯದ ಶಾಂತಿಯುತ ಬಂದ್ ಕರೆಗೆ ಪಕ್ಷದ ಬೆಂಬಲವಿದೆ" ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ರೈತ ವಿರೋಧಿ ಧೋರಣೆಯಿಂದಾಗಿ ದೇಶದ ಬಹುಸಂಖ್ಯಾತ ಅನ್ನದಾತ ಸಮುದಾಯ ತೀವ್ರ ವಿಷಮ ಪರಿಸ್ಥಿತಿ ಎದುರಿಸುತ್ತಿದೆ. ಕೆಲವೇ ಮಂದಿ ಉದ್ಯಮಿಗಳ ಬೆಂಬಲಕ್ಕೆ ನಿಂತಿರುವ ಬಿಜೆಪಿ ಇಡೀ ಶ್ರಮಿಕ ಜನಸಮುದಾಯವನ್ನು ವಂಚಿಸುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಆರೋಪಿಸಿದೆ.

ರೈತರು ಕರೆ ಕೊಟ್ಟಿರುವ ಭಾರತ್‌ ಬಂದ್‌ಗೆ ರಾಜಕೀಯ ಬಣ್ಣ ಕೊಡುವ ಪ್ರಯತ್ನಗಳು ನಡೆದಿವೆ. ಇದೇ ವೇಳೆ ಬೆಳಗಾವಿಯಲ್ಲಿ ಮಾತನಾಡಿರುವ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, "ರೈತರ ಹೆಸರಿನಲ್ಲಿ ರಾಜಕಾರಣ ನಡೆಯುತ್ತಿದೆ" ಎಂದಿದ್ದಾರೆ. ಜೊತೆಗೆ ಕಳೆದೆರಡು ವರ್ಷಗಳಿಂದ ಕೇಂದ್ರ ಸರ್ಕಾರದ ವಿರುದ್ಧ ಬಂದ್, ಪ್ರತಿಭಟನೆ ಸೇರಿದಂತೆ ಹಲವು ಆರೋಪಗಳನ್ನು ಮಾಡುತ್ತಿದ್ದಾರೆ. ಆದರೆ ರೈತರು ಮತ್ತು ಜನರು ಸರ್ಕಾರದ ಪರವಾಗಿದ್ದಾರೆ ಎಂದಿದ್ದಾರೆ. ಆದರೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಾವು ರೈತರಿಗೆ ನೈತಿಕ ಬೆಂಬಲ ಕೊಡುವುದಾಗಿ ತಿಳಿಸಿದ್ದಾರೆ.

ಬಿಜೆಪಿಯ ಅಮಾನವೀಯ ಮನಃಸ್ಥಿತಿ

ಬಿಜೆಪಿಯ ಅಮಾನವೀಯ ಮನಃಸ್ಥಿತಿ

ಪ್ರಧಾನಿ ಮೋದಿ ಸರ್ಕಾರದ ಕರಾಳ ಶಾಸನ, ನೀತಿ ಹಾಗೂ ಧೋರಣೆ ವಿರುದ್ಧ ರೈತರು ದಿಲ್ಲಿಯ ರಸ್ತೆಗಳಲ್ಲಿ ವರ್ಷಗಳಿಂದ ಹೋರಾಟ ನಡೆಸಿದ್ದಾರೆ. ರೈತರ ಹೋರಾಟವನ್ನು ಹತ್ತಿಕ್ಕುವ ನಿರಂತರ ಪ್ರಯತ್ನ ನಡೆಸಿದ ಬಿಜೆಪಿ ಸರ್ಕಾರಕ್ಕೆ, ಅವರ ನ್ಯಾಯಯುತ ಬೇಡಿಕೆಗಳನ್ನು ಕೇಳುವ ಕನಿಷ್ಟ ಸೌಜನ್ಯ ತೋರಿಲ್ಲ. ಇದು ಬಿಜೆಪಿಯ ಅಮಾನವೀಯ ಮನಃಸ್ಥಿತಿಗೆ ನಿದರ್ಶನ ಎಂದು ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ರೈತನ ಮಗನಾಗಿ ಬಂದ್‌ಗೆ ಬೆಂಬಲ ಎಂದ ಡಿಕೆಶಿ!

ರೈತನ ಮಗನಾಗಿ ಬಂದ್‌ಗೆ ಬೆಂಬಲ ಎಂದ ಡಿಕೆಶಿ!

ರೈತರ ಹಿತರಕ್ಷಣೆಗಾಗಿ ದಶಕದ ಹಿಂದೆಯೇ ಭೂಸ್ವಾಧೀನ ಕಾಯ್ದೆಯನ್ನು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಜಾರಿ ಮಾಡಿತ್ತು. ಆದರೆ, ಅದಕ್ಕೆ ವಿರುದ್ದವಾದ ದಿಕ್ಕಿನಲ್ಲಿ ಸಾಗಿದ ಮೋದಿ ಸರ್ಕಾರವು, ಕಳೆದ 7 ವರ್ಷಗಳಲ್ಲಿ ದೇಶದ ರೈತರ ಬದುಕನ್ನು ಅಸಹನೀಯಗೊಳಿಸಿದೆ. ಇದರ ವಿರುದ್ದ ರೈತರು ನಡೆಸುತ್ತಿರುವ ಹೋರಾಟವನ್ನು ಒಬ್ಬ ರೈತನ ಮಗನಾಗಿ ಬೆಂಬಲಿಸುತ್ತೇನೆ. ನಮ್ಮ ಕಾಂಗ್ರೆಸ್ ಪಕ್ಷದ ನೈತಿಕ ಬೆಂಬಲವೂ ಇದೆ. ಹೋರಾಟ ಶಾಂತಿಯುತವಾಗಿರಲಿ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಸಂಸತ್‌ನಲ್ಲಿ ರೈತರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುತ್ತಿಲ್ಲ

ಸಂಸತ್‌ನಲ್ಲಿ ರೈತರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುತ್ತಿಲ್ಲ

ದೇಶಾದ್ಯಂತ ರೈತರು ಪ್ರತಿಭಟನೆ ನಡೆಸಿದರೂ, ಸಂಸತ್ ಹಾಗೂ ಶಾಸನ ಸಭೆಯಲ್ಲಿ ಅವರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುತ್ತಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರನ್ನು ಬದುಕಲು ಬಿಡುತ್ತಿಲ್ಲ. ರೈತ ಬೆಳೆದ ಬೆಳೆಗೆ ಮಾರುಕಟ್ಟೆ ಇಲ್ಲ. ಬೆಂಬಲ ಬೆಲೆ ಇಲ್ಲ. ಸಾಲ ಮಾಡಿ ತೀರಿಸಲಾಗದೇ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾನೆ. ಇಂತಹ ಪರಿಸ್ಥಿತಿಯಲ್ಲಿ ಬಂಡವಾಳ ಶಾಯಿಗಳಿಗೆ ಕೃಷಿ ಭೂಮಿ ಹಾಗೂ ರೈತರ ಬದುಕನ್ನೇ ಧಾರೆಯೆರೆಯುವ ಮೂಲಕ ರೈತರನ್ನು ಮತ್ತಷ್ಟು ಘಾಸಿಗೊಳಿಸುತ್ತಿದ್ದಾರೆ. ಕೃಷಿ ಕಾಯ್ದೆ ಬಗ್ಗೆ ದೇಶಾದ್ಯಂತ ವಿರೋಧವಿದ್ದರೂ, ಸರ್ಕಾರ ಹಠಮಾರಿತನ ಧೋರಣೆ ಅನುಸರಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.

Recommended Video

RCB ಉಳಿದರುವ ಪಂದ್ಯಗಳನ್ನು ಈ ರೀತಿ ಸೋಲುವ ಹಾಗಿಲ್ಲ | Oneindia Kannada
ಕೃಷಿ ಕಾನೂನು ವಿರೋಧಿಸಿ ರೈತ ಸಂಘಟನೆಗಳಿಂದ ಬಂದ್!

ಕೃಷಿ ಕಾನೂನು ವಿರೋಧಿಸಿ ರೈತ ಸಂಘಟನೆಗಳಿಂದ ಬಂದ್!

ಕೇಂದ್ರದ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಭಾರತ ಬಂದ್‌ಗೆ ಕರೆ ನೀಡಿದೆ. ರಾಜ್ಯ ಕಬ್ಬು ಬೆಳೆಗಾರರ ಸಂಘ, ಅಮ್ ಆದ್ಮಿ ಪಾರ್ಟಿ, ನೇರವಾಗಿ ಬೆಂಬಲ ವ್ಯಕ್ತಪಡಿಸಿವೆ. ಜೊತೆಗೆ ರಾಜ್ಯ ರೈತ ಸಂಘ, ರಾಜ್ಯ ಹಸಿರು ಸೇನೆ, ರಾಜ್ಯ ಪ್ರಾಂತ ರೈತ ಸಂಘ, ರೈತ ಕಾರ್ಮಿಕರ ಸಂಘ, ಅಖಿಲ ಭಾರತ್​ ಕಿಸಾನ್​ ಸಭಾ, ಆಟೋ ಮಾಲೀಕರು, ಕ್ಯಾಬ್ ಚಾಲಕರ ಸಂಘ, ಬ್ಯಾಂಕ್ ಒಕ್ಕೂಟ, ಕರ್ನಾಟಕ ರಕ್ಷಣಾ ವೇದಿಕೆ, ಶಿಕ್ಷಕರ ಸಂಘಟನೆಗಳು ನೈತಿಕ ಬೆಂಬಲ ವ್ಯಕ್ತಪಡಿಸಿವೆ.

ಈಗ ಕಾಂಗ್ರೆಸ್ ಪಕ್ಷ ನೈತಿಕ ಬೆಂಬಲವನ್ನು ಕೊಡುವ ಮೂಲಕ ರೈತರ ಹೋರಾಟಕ್ಕೆ ದೊಡ್ಡ ಬೆಂಬಲ ಸಿಕ್ಕಂತಾಗಿದೆ.

English summary
KPCC president D.K. Shivakumar said Congress Party given moral support to Bharat Bandh on September 27. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X