ಕುಮಾರಸ್ವಾಮಿಗಿಂತ ಹೆಚ್ಚಿನ ಅನುಭವವಿದೆ, ಅವರಿಂದ ಕಲಿಯುವ ಅಗತ್ಯ ನನಗಿಲ್ಲ: ಡಿ ಕೆ ಶಿವಕುಮಾರ್ ತಿರುಗೇಟು
ಬೆಂಗಳೂರು: ರಾಜಕೀಯದಲ್ಲಿ ಕುಮಾರಸ್ವಾಮಿ ಅವರಿಗಿಂತ ಹೆಚ್ಚಿನ ಅನುಭವವಿದೆ. ನಾನು ಸಿಎಂ ಆಗದೇ ಇರಬಹುದು, ಆದರೆ ಆಡಳಿತ ವಿಚಾರದಲ್ಲಿ ಅವರಿಗಿಂತ ಅನುಭವ ಹೊಂದಿದ್ದೇನೆ. ಅವರಿಂದ ಕಲಿಯುವ ಅಗತ್ಯ ನನಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು.
ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಜೊತೆ ನಡೆಸಿದ ಸಭೆಗೆ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಉತ್ತರಿಸಿದ್ದು, ನಾನು ಬಹಳ ಕಾಲ ಸಚಿವನಾಗಿ ಕೆಲಸ ಮಾಡಿದ್ದೇನೆ. ಆಡಳಿತ ಹೇಗೆ ಮಾಡಬೇಕು, ಯಾರ ಜೊತೆ ಸಭೆ ಮಾಡಬೇಕು, ಮಾಡಬಾರದು ಎಂಬುದು ನನಗೆ ಚೆನ್ನಾಗಿ ಗೊತ್ತಿದೆ ಎಂದು ತಿರುಗೇಟು ನೀಡಿದರು.

ಎಲ್ಲಾ ಪಕ್ಷಗಳೂ ರಾಜಕಾರಣವನ್ನು ಪಕ್ಕಕ್ಕಿಟ್ಟು, ನಮ್ಮ ರಾಜ್ಯದ ಜನರು ಹಾಗೂ ರೈತರ ಹಿತ ಕಾಪಾಡಲು ಒಗ್ಗಟ್ಟಾಗಿ ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕೋಣ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕರೆ ನೀಡಿದರು. ಇತ್ತೀಚೆಗೆ ನಾನು ದೆಹಲಿಗೆ ಹೋಗಿ ಬೇಡ್ತಿ ಹಾಗೂ ವರದಾ ನದಿ ಜೋಡಣೆ ವಿಚಾರದಲ್ಲಿ ಒಪ್ಪಂದಕ್ಕೆ ಸಹಿ ಹಾಕಿ ಬಂದಿದ್ದೇನೆ. ಬೊಮ್ಮಾಯಿ ಅವರ ಮುಂದಾಳತ್ವದಲ್ಲಿ ಪ್ರಧಾನಮಂತ್ರಿಗಳ ಭೇಟಿಗೆ ಸಮಯ ನಿಗದಿ ಮಾಡಿ. ನಾವೂ ಬರುತ್ತೇವೆ.
ಕೃಷ್ಣಾ ಮೇಲ್ದಂಡೆ ಯೋಜನೆ ಅಧಿಸೂಚನೆ ಹೊರಡಿಸುವ ಬಗ್ಗೆ ಮನವಿ ಮಾಡೋಣ. ಅಗತ್ಯವಿದ್ದರೆ ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ಹಿಂಪಡೆಯೋಣ. ಇನ್ನು ಮಹದಾಯಿ ವಿಚಾರದಲ್ಲಿ ನ್ಯಾಯಾಧಿಕರಣ ತೀರ್ಪಿನ ಅನ್ವಯ ನೀರಿನ ಬಳಕೆಗೆ ಕೇಂದ್ರ ಸರ್ಕಾರದ ಅರಣ್ಯ ಇಲಾಖೆಯಿಂದ ಒಪ್ಪಿಗೆ ಸಿಕ್ಕರೆ ನೀವು ಮಾಡಿಕೊಂಡು ಬಂದಿರುವ ಹೋರಾಟಕ್ಕೆ ಮುಕ್ತಿ ಸಿಗುತ್ತದೆ. ಈ ಯೋಜನೆ ಸಂಬಂಧ ನಾವು ಈಗಾಗಲೇ ಟೆಂಡರ್ ಕರೆದಿದ್ದೇವೆ. ಗೋವಾ ರಾಜ್ಯದ ರಾಜಕಾರಣ ಬದಿಗಿಟ್ಟು ನಮ್ಮ ರಾಜ್ಯದ ಶಕ್ತಿಯನ್ನು ಪ್ರದರ್ಶಿಸಿ, ರೈತರು ಹಾಗೂ ಜನರ ಬದುಕಿನ ಬಗ್ಗೆ ಆಲೋಚಿಸೋಣ. ನಾವು ರಾಜಕೀಯವನ್ನು ಮುಂದಿನ ಎರಡೂವರೆ ವರ್ಷಗಳ ಬಳಿಕ ಮಾಡೋಣ. ಈಗ ರಾಜ್ಯದ ಜನರಿಗಾಗಿ ಕೃಷ್ಣ, ಮಹದಾಯಿ, ಕಾವೇರಿ ವಿಚಾರವಾಗಿ ಒಂದಾಗಿ ಕೆಲಸ ಮಾಡೋಣ ಎಂದರು.
ನಮಗೆ ಕೇಂದ್ರ ಸರ್ಕಾರದಿಂದ ಅಗತ್ಯ ಸಹಕಾರ ಸಿಗುತ್ತಿಲ್ಲ. ಪಾಪ, ಬೊಮ್ಮಾಯಿ ಅವರ ಸಮಯದಲ್ಲಿ ಕೇಂದ್ರ ಸರ್ಕಾರ ತನ್ನ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಘೋಷಣೆ ಮಾಡಿತು. ಆದರೆ ಇವತ್ತಿನವರೆಗೂ ಆ ಹಣ ಬಿಡುಗಡೆಯಾಗಿಲ್ಲ. ಬೊಮ್ಮಾಯಿ ಅವರೇ, ನಿರ್ಮಲಾ ಸೀತಾರಾಮನ್ ಹಾಗೂ ಮೋದಿ ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು. ನಾನು ಈ ಹಿಂದೆ 'ವರ್ಡ್ ಪವರ್ ಈಸ್ ವರ್ಲ್ಡ್ ಪವರ್' ಎಂದು ಹೇಳಿದ್ದೆ. ಕೊಟ್ಟ ಮಾತು ಉಳಿಸಿಕೊಳ್ಳಬೇಕು. ನುಡಿದಂತೆ ನಡೆಯಬೇಕು. ಆಗ ನಾವು ನಾಯಕರು ಎಂದು ಕರೆಸಿಕೊಳ್ಳಲು ಸಾಧ್ಯ. ರಾಜಕಾರಣದಲ್ಲಿ ನಾವು ಎಷ್ಟು ದಿನ ಇರುತ್ತೇವೆ ಎಂಬುದು ಮುಖ್ಯವಲ್ಲ, ಇದ್ದಷ್ಟು ದಿನ ನಾವು ಹೇಗೆ ನಡೆದುಕೊಳ್ಳುತ್ತೇವೆ, ಏನು ಮಾಡುತ್ತೇವೆ ಎಂಬುದು ಮುಖ್ಯ ಎಂದು ತಿಳಿಸಿದರು.












Click it and Unblock the Notifications