ರಾಜೀನಾಮೆ ಬಗ್ಗೆ ಮಾತನಾಡಿದ ಡಿ.ಕೆ ಶಿವಕುಮಾರ್: ಕಾರಣವೇನು?
ಬೆಂಗಳೂರು, ಡಿಸೆಂಬರ್ 05: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ ನೀಡುವೆ, ಇಲ್ಲವಾದರೆ ನಾರಾಯಣಸ್ವಾಮಿ ರಾಜೀನಾಮೆ ನೀಡುತ್ತಾರಾ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸವಾಲು ಹಾಕಿದ್ದಾರೆ.
ವಾಚ್ ಕದ್ದದ್ದೋ, ಕೊಂಡದ್ದೋ ಎಂಬ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಹೇಳಿಕೆ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಉತ್ತರಿಸಿದ್ದು, ನಾರಾಯಣಸ್ವಾಮಿ ಅವರಿಗೆ ಇನ್ನೂ ಅನುಭವವಿಲ್ಲ. ಯಾವುದಾದರೂ ವಿಚಾರದ ಬಗ್ಗೆ ಮಾತನಾಡಬೇಕಾದರೆ ಕನಿಷ್ಟ ಪರಿಜ್ಞಾನ ಇರಬೇಕು. ಬರೀ ಪ್ರಚಾರಕ್ಕೆ ಮಾತನಾಡುವುದಲ್ಲ. ಅವರಿಗಿಂತ ಹೆಚ್ಚು ಜವಾಬ್ದಾರಿಯಿಂದ ನಾನು ವರ್ತಿಸುತ್ತೇನೆ. ಅವರೂ ಜವಾಬ್ದಾರಿಯಿಂದ ಕೆಲಸ ಮಾಡುವುದನ್ನು ಕಲಿಯಬೇಕು. ನಾನು ಪ್ರದರ್ಶಿಸಿರುವ ದಾಖಲೆ ವಿಚಾರ ಒತ್ತಟ್ಟಿಗೆ ಇರಲಿ, ಅವರೇ ಹೋಗಿ ಲೋಕಾಯುಕ್ತದಲ್ಲಿ ಪರಿಶೀಲನೆ ಮಾಡಲಿ. ಅಲ್ಲಿ ಸಲ್ಲಿಸಿರುವ ಆದಾಯ ಅಫಿಡವಿಟ್ ಸಾರ್ವಜನಿಕ ದಾಖಲೆಯಾಗಿದ್ದು, ಅದನ್ನು ಅವರೂ ಪಡೆಯಬಹುದು.

ದುಬಾರಿ ವಾಚ್ ವಿಚಾರವನ್ನು ಸದನದಲ್ಲಿ ಪ್ರಸ್ತಾಪಿಸುತ್ತಾರಂತೆ ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ್ದು, ಸದನದಲ್ಲೂ ಪ್ರಸ್ತಾಪಿಸಲಿ, ಬೇರೆ ಎಲ್ಲಾದರೂ ಪ್ರಸ್ತಾಪಿಸಲಿ. ಯಾರು ಬೇಡ ಎನ್ನುತ್ತಾರೆ. ದೇಶದೆಲ್ಲೆಡೆ ಚರ್ಚೆ ಮಾಡಲಿ. ನನ್ನ ದಾಖಲೆ ಅವರಿಗೆ ತೋರಿಸುವ ಅಗತ್ಯವಿಲ್ಲವಾದರೂ ನಾನು ಆ ವಾಚ್ ಕದ್ದಿದ್ದೇನೆ ಎಂದು ಹೇಳಿದ್ದಾರಲ್ಲ ಅದಕ್ಕೆ ತೋರಿಸಿರುವೆ ಎಂದು ತಿರುಗೇಟು ನೀಡಿದರು.
ಇದಕ್ಕೂ ಮುನ್ನ ಗುರುವಾರ ಬೆಳಗ್ಗೆ ಟ್ವೀಟ್ ಮೂಲಕ ನಾರಾಯಣಸ್ವಾಮಿ ಅವರಿಗೆ ತಿರಗೇಟು ನೀಡಿದ ಶಿವಕುಮಾರ್ ಅವರು, ಮಿಸ್ಟರ್ ನಾರಾಯಣಸ್ವಾಮಿ, ಇಲ್ಲಿದೆ ನೋಡಿ ಲೋಕಾಯುಕ್ತಕ್ಕೆ ನಾನು ಸಲ್ಲಿಸಿರೋ ಅಫಿಡವಿಟ್! ಜವಾಬ್ದಾರಿಯುತ ಸ್ಥಾನದಲ್ಲಿರೋ ನೀವು ನಿಮ್ಮ ಬಾಯಿ ತೆವಲಿಗಾಗಿ ಮನಸ್ಸಿಗೆ ಬಂದಂತೆ ಸುಳ್ಳು ಹೇಳಬಾರದು. ಇದು ನಿಮಗೆ ಘನತೆ ತರುವುದಿಲ್ಲ. ನಾನು ಪಾರದರ್ಶಕ ವ್ಯಕ್ತಿ. ಏನನ್ನೂ ಮುಚ್ಚಿಟ್ಟುಕೊಳ್ಳಬಾರದು ಅಂತಲೇ ನಿಜ ಹೇಳಿದ್ದೇನೆ.
ನನಗೆ ಮತ್ತು ಸಿಎಂ ಸಿದ್ದರಾಮಯ್ಯ ಅವರಿಗೆ ನಮಗೆ ಇಷ್ಟವಾದ ವಾಚ್ ಕಟ್ಟಿಕೊಳ್ಳುವ ಯೋಗ್ಯತೆ ಇಲ್ಲವೇ? ಹಕ್ಕು ಇಲ್ಲವೇ..? "ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ" ಆಡಬೇಡಿ. ನಿಮಗಿರೋ ಸಾಂವಿಧಾನಿಕ ಅಧಿಕಾರ, ಜವಾಬ್ದಾರಿಯನ್ನು ವಿವೇಕದಿಂದ ನಿರ್ವಹಿಸಿ. ಅವಿವೇಕಿಯಂತೆ ಆಡಬೇಡಿ..! ಬೇಕಿದ್ದರೆ ಲೋಕಾಯುಕ್ತ ಕಚೇರಿಗೆ ಹೋಗಿ ನನ್ನ ಅಫಿಡವಿಟ್ ಚೆಕ್ ಮಾಡಿಕೊಳ್ಳಿ ಎಂದು ಹರಿಹಾಯ್ದರು.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Government Employees: ಸರ್ಕಾರಿ ನೌಕರರ ವರ್ಗಾವಣೆ ಕುರಿತು ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications