• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ರಾಜ್ಯಸಭೆಗೆ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಮಾಡಲು ಒತ್ತಡವಿತ್ತು: ಡಿ.ಕೆ. ಶಿವಕುಮಾರ್

|
Google Oneindia Kannada News

ಬೆಂಗಳೂರು, ಜೂ. 09: ರಾಜ್ಯಸಭೆ ಚುನಾವಣೆಯಲ್ಲಿ ಎಲ್ಲ ನಾಲ್ಕೂ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗುವುದು ಖಚಿತವಾಗಿದೆ. ನಾಲ್ಕು ಸ್ಥಾನಗಳ ಆಯ್ಕೆಗೆ ನಡೆಯಲಿರುವ ಚುನಾವಣೆಗೆ ಮಾಜಿ ಪ್ರಧಾನಿ ದೇವೇಗೌಡರು ಸೇರಿದಂತೆ ನಾಲ್ಕು ಜನರು ಮಾತ್ರ ಸ್ಪರ್ಧೆ ಮಾಡುತ್ತಿದ್ದಾರೆ. ಹೀಗಾಗಿ ರಾಜ್ಯಸಭೆ ಸದಸ್ಯರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗುತ್ತಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಅವರು ನಾಮಪತ್ರವನ್ನೂ ಸಲ್ಲಿಸಿದ್ದಾರೆ.

ಮಲ್ಲಿಕಾರ್ಜುನ್ ಖರ್ಗೆ ನಾಮಪತ್ರ ಸಲ್ಲಿಸುವಾಗ ಕಾಂಗ್ರೆಸ್ ನಾಯಕರು ಇನ್ನಿಲ್ಲದ ಒಗ್ಗಟ್ಟನ್ನು ಪ್ರದರ್ಶನ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ಸಿದ್ದರಾಮಯ್ಯ, ಮಾಜಿ ಸಚಿವರಾದ ಡಾ. ಜಿ. ಪರಮಶ್ವರ್, ಈಶ್ವರ್ ಖಂಡ್ರೆ, ಸಲೀಂ ಅಹಮ್ಮದ್ ಸೇರಿದಂತೆ ಬಹುತೇಕ ಎಲ್ಲ ನಾಯಕರೊಂದಿಗೆ ಜೊತೆಗೂಡಿ ಖರ್ಗೆ ನಾಮಪತ್ರ ಸಲ್ಲಿಸಿದ್ದಾರೆ. ಇದೇ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಮಾಡಲು ಒತ್ತಡವಿತ್ತು ಎಂಬ ಸ್ಪೋಟಕ ಹೇಳಿಕೆ ಕೊಟ್ಟಿದ್ದಾರೆ. ಎಲ್ಲರೂ ಅವಿರೋಧ ಆಯ್ಕೆಯಾಗುವಾಗ ರಾಜ್ಯ ಕಾಂಗ್ರೆಸ್ ಪಕ್ಷದ ಮೇಲೆ ಇದ್ದ ಒತ್ತಡವಾದರೂ ಯಾರದ್ದು? ಎಂಬ ಜಿಜ್ಞಾಸೆ ಮೂಡಿದೆ.

ರಾಜ್ಯಸಭಾ ಚುನಾವಣೆ: ದೇವೇಗೌಡರ ಹಾದಿ ಸುಗಮವಾಗಿದ್ದು ಹೀಗೆ!ರಾಜ್ಯಸಭಾ ಚುನಾವಣೆ: ದೇವೇಗೌಡರ ಹಾದಿ ಸುಗಮವಾಗಿದ್ದು ಹೀಗೆ!

ಖರ್ಗೆ ನಾಮಪತ್ರ ಸಲ್ಲಿಕೆ

ಖರ್ಗೆ ನಾಮಪತ್ರ ಸಲ್ಲಿಕೆ

ಮಾಜಿ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಇಬ್ಬರು ಅಭ್ಯರ್ಥಿಗಳನ್ನು ಕಳಣಕ್ಕಿಳಿಸುತ್ತಾರೆ ಎನ್ನಲಾಗಿತ್ತು. ಆದರೆ ನಿರ್ಧಾರ ಬದಲಿಸಿದ ಕಾಂಗ್ರೆಸ್ ಹೈಕಮಾಂಡ್ ರಾಜ್ಯಸಭಾ ಚುನಾವಣೆಗೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮಾತ್ರ ಅಭ್ಯರ್ಥಿಯಾಗಿ ಘೋಷಣೆ ಮಾಡಿತು.


ಜೊತೆಗೆ ಕ್ರಾಸ್ ವೋಟಿಂಗ್ ಆತಂಕದಿಂದ ಎರಡನೇ ಅಭ್ಯರ್ಥಿ ಹಾಕದಿರಲು ಕಾಂಗ್ರೆಸ್ ಪಕ್ಷ ತೀರ್ಮಾನ ಮಾಡಿತ್ತು. ಯಾವುದೇ ಕಾರಣಕ್ಕೂ ಖರ್ಗೆ ಅವರ ರಾಜ್ಯಸಭೆ ಪ್ರವೇಶಕ್ಕೆ ಸಣ್ಣ ತೊಂದರೆಯೂ ಬರದಂತೆ ಸೂಚನೆ ಕೊಡಲಾಗಿತ್ತು.

ಒತ್ತಡದ ಹಿನ್ನೆಲೆಯಲ್ಲಿ ಸಭೆ

ಒತ್ತಡದ ಹಿನ್ನೆಲೆಯಲ್ಲಿ ಸಭೆ

ಮಲ್ಲಿಕಾರ್ಜುನ ಖರ್ಗೆ ಅವರ ಆಯ್ಕೆಗೆ ಒತ್ತಡ ಇತ್ತು. ಈ ಹಿನ್ನೆಲೆಯಲ್ಲಿ ಪಕ್ಷದ ನಾಯಕರೆಲ್ಲರೂ ಕೂತು ಚರ್ಚೆ ನಡೆಸಿ ಒಮ್ಮತದ ನಿರ್ಧಾರಕ್ಕೆ ಬಂದೆವು. ನಮ್ಮ ಒಮ್ಮತದ ನಿರ್ಧಾರಕ್ಕೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರೂ ಖುಷಿಪಟ್ಟು ಎರಡನೇ ಮಾತಿಗೆ ಅವಕಾಶ ನೀಡದೇ ಖರ್ಗೆ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿತು. ಇದರಿಂದ ದೇಶದ ಎಲ್ಲ ಕಾರ್ಯಕರ್ತರಿಗೆ ಸಂತೋಷ ತಂದಿದೆ ಎಂದು ಡಿಕೆಶಿ ಹೇಳಿದ್ದಾರೆ.

ರಾಜ್ಯಸಭೆಗೆ ಮಲ್ಲಿಕಾರ್ಜುನ್ ಖರ್ಗೆ; ಕಾಂಗ್ರೆಸ್ ಹೈಕಮಾಂಡ್ ಲೆಕ್ಕಾಚಾರ ಹೀಗಿದೆ!ರಾಜ್ಯಸಭೆಗೆ ಮಲ್ಲಿಕಾರ್ಜುನ್ ಖರ್ಗೆ; ಕಾಂಗ್ರೆಸ್ ಹೈಕಮಾಂಡ್ ಲೆಕ್ಕಾಚಾರ ಹೀಗಿದೆ!

ಕಾಶ್ಮೀರದಿಂದ ಒತ್ತಡ

ಕಾಶ್ಮೀರದಿಂದ ಒತ್ತಡ

ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜ್ಯಸಭೆಗೆ ಆರಿಸಿ ಕಳುಹಿಸಬೇಕು ಎಂದು ಕಾಶ್ಮೀರದಿಂದ ಹಿಡಿದು ಕನ್ಯಾಕುಮಾರಿವರೆಗೂ ಒತ್ತಡವಿತ್ತು. ಕಾಂಗ್ರೆಸ್ ನಾಯಕರು ಮಾತ್ರವಲ್ಲ ಬೇರೆ ಪಕ್ಷದ ನಾಯಕರೂ ನಮಗೆ ಒತ್ತಡ ಹೇರಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರು ಕೇವಲ ರಾಜ್ಯಕ್ಕೆ ಸೀಮಿತವಾದ ನಾಯಕರಲ್ಲ. ರಾಷ್ಟ್ರಕ್ಕೆ ಸೀಮಿತವಾದ ನಾಯಕ. ಅರಲ್ಲಿ ರಾಷ್ಟ್ರ ನಾಯಕನ ಗುಣಗಳಿವೆ. ಹೀಗಾಗಿ ಅವರು ರಾಷ್ಟ್ರದ ಆಸ್ತಿ. ಕಳೆದ ಐದು ವರ್ಷಗಳ ಕಾಲ ಅವರು ವಿರೋಧ ಪಕ್ಷದಲ್ಲಿದ್ದು ಮಾಡಿದ ಕಾರ್ಯ ಹಾಗೂ ಅವರ ಅನುಭವ ಅತ್ಯುತ್ತಮವಾದುದು. ಅದಕ್ಕೆ ಪರ್ಯಾಯವಿಲ್ಲ. ಅವರ ಕಾರ್ಯ ನೋಡಿ ದೇಶದ ಮೂಲೆ ಮೂಲೆಯಿಂದ ಬೇರೆ ಪಕ್ಷಗಳ ನಾಯಕರೂ ಕೂಡ ಖರ್ಗೆ ಅವರನ್ನು ರಾಜ್ಯಸಭೆಯಿಂದ ಆರಿಸಿ ಸಂಸತ್ತಿಗೆ ಕಳುಹಿಸಬೇಕು ಎಂದು ಒತ್ತಡ ಹಾಕಿದ್ದರು ಎಂದಿದ್ದಾರೆ.

ಧನ್ಯವಾದ ಸಲ್ಲಿಸಿದ ಖರ್ಗೆ

ಧನ್ಯವಾದ ಸಲ್ಲಿಸಿದ ಖರ್ಗೆ

ರಾಜ್ಯಸಭೆಗೆ ಆಯ್ಕೆ ಮಾಡಲು ನಿರ್ಧರಿಸಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ತುಂಬು ಹೃದಯದ ಧನ್ಯವಾದಗಳು ಹಾಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಮಾಜಿ ಸಂಸದೀಯ ನಾಯಕ, ಕಾಂಗ್ರೆಸ್ ಅಭ್ಯರ್ಥಿ ಹೇಳಿಕೆ ಕೊಟ್ಟಿದ್ದಾರೆ.


ಚುನಾವಣೆ ನಡೆದರೆ ಕರ್ನಾಟಕ ವಿಧಾನಸಭೆ ಎಲ್ಲ ಶಾಸಕರು ನನಗೆ ಮತ ಹಾಕಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ. ನಮ್ಮ ನಾಯಕರು ನನ್ನ ಮೇಲೆ ಇಟ್ಟಿರುವ ನಂಬಿಕೆ ಹಾಗೂ ಅಪೇಕ್ಷೆ ಉಳಿಸಿಕೊಳ್ಳುವಂತೆ ಮುಂದಿನ ದಿನಗಳಲ್ಲಿ ನಡೆದುಕೊಳ್ಳುತ್ತೇನೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

English summary
KPCC president DK Shivakumar said there was pressure on Mallikarjun Kharge to contest the Rajya Sabha elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X