ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರು ವಿವಿ ಪ್ರೊಫೆಸರ್ ಅಶೋಕ್ ಕುಮಾರ್ ಆತ್ಮಹತ್ಯೆ ಪ್ರಕರಣಕ್ಕೆ ಸ್ಪೋಟಕ ತಿರುವು!

|
Google Oneindia Kannada News

ಬೆಂಗಳೂರು, ನ. 09: ಬೆಂಗಳೂರು ವಿವಿಯ ನಿವೃತ್ತ ಪ್ರೊ. ಅಶೋಕ್ ಕುಮಾರ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸ್ಪೋಟಕ ತಿರುವು ಸಿಕ್ಕಿದೆ. ನಿನ್ನೆ ಬೆಳಗ್ಗೆ ಪ್ರೊ. ಅಶೋಕ್ ಕುಮಾರ್ ಅವರು ಬೆಂಗಳೂರಿನ ತಮ್ಮ ಮೈಕೋ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿಲ್ಕ್‌ಬೋರ್ಡ್ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರ್ ಆಗಿ ಸೇವೆ ಸಲ್ಲಿಸಿ ನಿವೃತ್ತಿಹೊಂದಿದ್ದ ಆಶೋಕ್ ಕುಮಾರ್ ಅವರ ಆತ್ಮಹತ್ಯೆ ಹಲವು ಅನುಮಾನಗಳಿಗೆ ಕಾರಣವಾಗಿದೆ.

ಇದೀಗ, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸ್ಪೋಟಕ ಹೇಳಿಕೆಯನ್ನು ನೀಡಿದ್ದಾರೆ. ಕ್ವೀನ್ಸ್‌ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಗಂಭೀರ ಆರೋಪವನ್ನು ಮಾಡಿದ್ದಾರೆ. ಜೊತೆಗೆ ಪ್ರೊ. ಅಶೋಕ್ ಕುಮಾರ್ ಅವರ ಆತ್ಮಹತ್ಯೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರಿಂದ ತನಿಖೆ ಮಾಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರು ವಿ.ವಿ ನಿವೃತ್ತ ಅಧ್ಯಾಪಕ ಅಶೋಕ್ ಕುಮಾರ್ ಆತ್ಮಹತ್ಯೆಗೆ ಶರಣುಬೆಂಗಳೂರು ವಿ.ವಿ ನಿವೃತ್ತ ಅಧ್ಯಾಪಕ ಅಶೋಕ್ ಕುಮಾರ್ ಆತ್ಮಹತ್ಯೆಗೆ ಶರಣು

ಅಶೋಕ್ ಕುಮಾರ್ ಅವರ ಸಾವಿಗೆ ಕಾರಣವಾದರೂ ಏನು? ಅಷ್ಟೊಂದು ಜವಾಬ್ದಾರಿ ಇರುವ ವ್ಯಕ್ತಿ ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದನ್ನು ಡಿಕೆಶಿ ವಿವರಿಸಿದ್ದಾರೆ. ಇಲ್ಲಿದೆ ಸಂಪೂರ್ಣ ಮಾಹಿತಿ!

ಉಪಕುಲಪತಿ ಹುದ್ದೆ ಮಾರಾಟಕ್ಕಿದೆ!

ಉಪಕುಲಪತಿ ಹುದ್ದೆ ಮಾರಾಟಕ್ಕಿದೆ!

ರಾಜ್ಯದಲ್ಲಿ ಉಪಕುಲಪತಿ ಹುದ್ದೆಯನ್ನು ಮಾರಾಟಕ್ಕೆ ಇಡಲಾಗಿದೆ. ಇಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಈ ಭ್ರಷ್ಟಾಚಾರವೇ ನಿವೃತ್ತ ಪ್ರೊ. ಅಶೋಕ್ ಕುಮಾರ್ ಅವರ ಆತ್ಮಹತ್ಯೆಗೆ ಕಾರಣ ಎಂದು ವ್ಯಾಪಕ ಚರ್ಚೆಯಾಗುತ್ತಿದೆ. ಹೀಗಾಗಿ ಈ ವಿಚಾರದಲ್ಲಿ ನ್ಯಾಯಾಂಗ ತನಿಖೆ ನಡೆಯಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಈ ಆತ್ಮಹತ್ಯೆಗೆ ಕಾರಣ ಏನು ಎಂಬುದರ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ನಮಗೆ ತಿಳಿದಿರುವ ಪ್ರಕಾರ ನಾಲ್ಕು ಮಂದಿಯ ಹೆಸರು ಉಪಕುಲಪತಿ ಹುದ್ದೆಗೆ ಕೇಳಿಬಂದಿದ್ದು, ನೇಮಕ ವಿಚಾರದಲ್ಲಿ ಸಾಕಷ್ಟು ಪೈಪೋಟಿ, ವ್ಯಾಪಾರ ನಡೆದಿದೆ. ಪಾಪ ಆ ಪ್ರೊಫೆಸರ್ ಬಡ್ಡಿಗೆ ಹಣ ತಂದು ಕೊಟ್ಟರೂ ಅವರನ್ನು ನೇಮಕ ಮಾಡಲಿಲ್ಲ. ತಮಗೆ ಹುದ್ದೆಯೂ ಸಿಗಲಿಲ್ಲ, ಕೊಟ್ಟ ಹಣವೂ ವಾಪಸ್ ಬರದ ಕಾರಣ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ ಎಂದು ಆರೋಪಿಸಿದ್ದಾರೆ.

ನೇಮಕದಲ್ಲಿ ಹಣದ ವಹಿವಾಟು

ನೇಮಕದಲ್ಲಿ ಹಣದ ವಹಿವಾಟು

ಪ್ರೊ. ಅಶೋಕ್ ಕುಮಾರ್ ಅವರ ಆತ್ಮಹತ್ಯೆಯ ಹಿಂದೆ 2.5 ಕೋಟಿ ರೂಪಾಯಿ ರಹಸ್ಯ ಅಡಗಿದೆ. ಯಾವ ಸಚಿವರು? ಯಾರು? ಅವರಿಂದ ಹಣ ಪಡೆದರೊ ಗೊತ್ತಿಲ್ಲ. ಕುಲಪತಿಯಾಗಲು 2.5 ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ. ಸರ್ಕಾರದಲ್ಲಿ ಇರುವವರೇ ಇದರಲ್ಲಿ ಭಾಗಿಯಾಗಿದ್ದಾರೆ. ಈ ಬಗ್ಗೆ ಸಾಕಷ್ಟು ಆರೋಪಗಳು ಕೇಳಿ ಬರುತ್ತಿವೆ. ಕುಲಪತಿ ಮಾಡುವುದಾಗಿ ಅವರಿಂದ ಪಡೆದಿದ್ದ ಹಣವನ್ನೂ ಪ್ರೊ. ಅಶೋಕ್ ಕುಮಾರ್ ಅವರಿಗೆ ಹಿಂದಿರುಗಿಸಿಲ್ಲ. ಹೀಗಾಗಿ ಈ ದುರಂತ ನಡೆದಿದೆ ಎಂದು ಡಿಕೆಶಿ ಆರೋಪಿಸಿದ್ದಾರೆ.

ಯಾವ ಮಂತ್ರಿ ಹಣ ಪಡೆದಿದ್ದಾರೆ?

ಯಾವ ಮಂತ್ರಿ ಹಣ ಪಡೆದಿದ್ದಾರೆ?

ಇದು ಬಹಳ ನೋವಿನ ಸಂಗತಿ. ಇದರಲ್ಲಿ ದೊಡ್ಡ ವ್ಯಕ್ತಿಗಳ ಕೈವಾಡವಿದೆ. ಈ ಹಣವನ್ನು ಯಾವ ಅಧಿಕಾರಿ, ಮಂತ್ರಿ, ಮಧ್ಯವರ್ತಿ ತೆಗೆದುಕೊಂಡರೋ, ಈ ಎಲ್ಲದರ ಬಗ್ಗೆ ದೊಡ್ಡ ಮಟ್ಟದ ತನಿಖೆ ಅಗತ್ಯ ಕಾಣಿಸುತ್ತಿದೆ.

ಆತ್ಮಹತ್ಯೆ ಪತ್ರದಲ್ಲಿ ಸಾವಿಗೆ ತಾವೇ ಕಾರಣ ಎಂದು ಬರೆದಿದ್ದರೂ, ಸರ್ಕಾರದಲ್ಲಿ ಇರುವವರು ಇದರಲ್ಲಿ ಭಾಗಿಯಾಗಿದ್ದಾರೆ ಎಂಬ ಮಾಹಿತಿ ಇದೆ. ಈ ಪ್ರಕರಣದಲ್ಲಿ ಭ್ರಷ್ಟಾಚಾರ ದೊಡ್ಡ ಮಟ್ಟದಲ್ಲಿ ನಡೆದಿರುವುದು ಎದ್ದು ಕಾಣುತ್ತಿದೆ ಎಂದು ಸಾರ್ವಜನಿಕ ವಲಯದಲ್ಲಿ ಹಾಗೂ ವಿಧಾನಸೌಧದಲ್ಲಿ ಈ ಕುರಿತ ಚರ್ಚೆಗಳು ಕೇಳಿಬರುತ್ತಿದೆ.

ವಿವಿಯಲ್ಲಿಯೂ ಈ ಬಗ್ಗೆ ಚರ್ಚೆ!

ವಿವಿಯಲ್ಲಿಯೂ ಈ ಬಗ್ಗೆ ಚರ್ಚೆ!

ವಿಶ್ವವಿದ್ಯಾಲಯಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಯಿಂದ ವಿದ್ಯಾರ್ಥಿವರೆಗೂ ಉಪಕುಲಪತಿ ಹುದ್ದೆ ವ್ಯಾಪಾರಕ್ಕೆ ಇದೆ ಎಂದು ಚರ್ಚೆಯಾಗುತ್ತಿದೆ. ಹೀಗಾಗಿ ಈ ಪ್ರಕರಣದಲ್ಲಿ ಗೌರವಾನ್ವಿತ ಮುಖ್ಯಮಂತ್ರಿಗಳ ಹೆಸರಿಗೆ ಮಸಿ ಬಳೆಯುವ ಕೆಲಸವಾಗುತ್ತಿದೆ. ಹೀಗಾಗಿ ಈ ಪ್ರಕರಣವನ್ನು ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿಗಳಿಗೆ ಹಾಗೂ ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ.

ಅಶೋಕ್ ಕುಮಾರ್ ಅವರು ಎಂತಹ ಗಟ್ಟಿಯಾದ ವ್ಯಕ್ತಿ ಅಂತಾ ಅವರ ಪಾಠ ಕೇಳಿದ ಮಾಧ್ಯಮದವರಿಗೆ ಗೊತ್ತಿದೆ. ನಮಗೆ ಬಂದಿರುವ ಖಚಿತ ಮಾಹಿತಿ ಆಧಾರದ ಮೇಲೆ ನಾವು ಈ ವಿಚಾರ ಪ್ರಸ್ತಾಪಿಸುತ್ತಿದ್ದೇನೆ. ಈ ವಿಚಾರದಲ್ಲಿ ತನಿಖೆ ಆದರೆ ಸತ್ಯಾಂಶ ಹೊರಬೀಳಲಿದೆ ಎಂದು ಡಿಕೆಶಿ ಹೇಳಿದ್ದಾರೆ.

Recommended Video

BJP ಸಿಬಿಐ ನಾ miss use ಮಾಡ್ತಿದಾರೆ!! | Oneindia Kannada
ಉನ್ನತ ಶಿಕ್ಷಣ ಇಲಾಖೆ

ಉನ್ನತ ಶಿಕ್ಷಣ ಇಲಾಖೆ

ರಾಜ್ಯದಲ್ಲಿನ ನಾಲ್ಕು ಕ್ಲಸ್ಟರ್ ವಿವಿಗಳಿಗೆ ಮೊನ್ನೆ ಅಂದರೆ ನವೆಂಬರ್ 7ರಂದು ಕುಲಪತಿಗಳ ನೇಮಕವಾಗಿತ್ತು. ನಾಲ್ಕು ಕುಲಪತಿಗಳನ್ನು ನೇಮಕ ಮಾಡಿ ಉನ್ನತ ಶಿಕ್ಷಣ ಇಲಾಖೆ ಆದೇಶ ಮಾಡಿತ್ತು. ಉಪ ಮುಖ್ಯಮಂತ್ರಿಗಳೂ ಆಗಿರುವ ಉನ್ನತ ಶಿಕ್ಷಣ ಇಲಾಖೆ ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಅವರ ವಾಟ್ಸಪ್‌ ಗ್ರೂಪ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದರು.

ಕುಲಪತಿಗಳ ನೇಮಕ ಆದೇಶದ ಮರುದಿನ ಬೆಳಗ್ಗೆ ಅಂದರೆ ನ. 8ರಂದು ಪ್ರೊ. ಅಶೋಕ್ ಕುಮಾರ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಪ್ರೊಫೆಸರ್‌ ಅವರ ಆತ್ಮಹತ್ಯೆ ಪ್ರಕರಣಕ್ಕೆ ಇದೇ ಕಾರಣ ಎಂದು ಡಿಕೆಶಿ ಆರೋಪಿಸಿದ್ದಾರೆ. ತನಿಖೆಯ ಬಳಿಕವಷ್ಟೇ ಈ ಬಗ್ಗೆ ಸಂಪೂರ್ಣ ಮಾಹಿತಿ ಹೊರಗೆ ಬರಲಿದೆ.

English summary
KPCC president DK Shivakumar has shared vital information regarding Bangalore VV Retired Prof. Ashok Kumar's suicide case. DK Shivakumar alleges that he committed suicide because cheating money, Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X