• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಉಪ ಚುನಾವಣೆ ಮೂಲಕ ಆ ಸಂದೇಶವನ್ನು ಮೋದಿಗೆ ರವಾನಿಸುತ್ತೇವೆ: ಡಿಕೆಶಿ

|

ಬೆಂಗಳೂರು, ಅ. 14: ರಾಜ್ಯದಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ರಂಗೇರುತ್ತಿದೆ. ಆರೋಪ-ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಹತ್ವ ಹೇಳಿಕೆ ನೀಡಿದ್ದಾರೆ. ಈ ಬಾರಿಯ ಚುನಾವಣೆ ಯಾವ ವಿಷಯದ ಮೇಲೆ ನಡೆಯಲದೆ ಎಂಬುದನ್ನೂ ವಿವರಿಸಿದ್ದಾರೆ.

ಈ ಬಾರಿಯ ಉಪಚುನಾವಣೆಯನ್ನು ಬಿ.ಎಸ್. ಯಡಿಯೂರಪ್ಪ ಅವರ ರಾಜ್ಯ ಸರ್ಕಾರವನ್ನು ಅಥವಾ ಮೋದಿ ಅವರ ಕೇಂದ್ರ ಸರ್ಕಾರ ಬೀಳಿಸಲು ಎದುರಿಸುತ್ತಿಲ್ಲ. ಬದಲಿಗೆ ಎರಡೂ ಸರ್ಕಾರಗಳಿಗೆ ಆ ಒಂದು ಸಂದೇಶವನ್ನು ರವಾನಿಸಲು ಎದುರಿಸುತ್ತೇದ್ದೇವೆ ಎಂದಿದ್ದಾರೆ.

ಕೆಲವರು ನನಗೆ ಸ್ಲೋ ಪಾಯ್ಸನ್ ಕೊಡ್ತಿದ್ದಾರೆ: ಡಿಕೆಶಿಗೆ ಟಾಂಗ್ ಕೊಟ್ಟ ಎಚ್ಡಿಕೆ

ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಚ್ ಅವರು ನಾಮಪತ್ರ ಸಲ್ಲಿಸಿದ ನಂತರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.

ಆರ್‌ಆರ್ ನಗರದಲ್ಲಿ ಬುದ್ಧಿವಂತರಿದ್ದಾರೆ

ಆರ್‌ಆರ್ ನಗರದಲ್ಲಿ ಬುದ್ಧಿವಂತರಿದ್ದಾರೆ

ಈ ಕ್ಷೇತ್ರದ ಮತದಾರರು ಬಹಳ ವಿದ್ಯಾವಂತ, ಪ್ರಜ್ಞಾವಂತ ಹಾಗೂ ಬುದ್ಧಿವಂತರಿದ್ದಾರೆ. ಇಲ್ಲಿನ ಮತದಾರರು ಎರಡು ಬಾರಿ ಸತತವಾಗಿ ಕಾಂಗ್ರೆಸ್ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದಾರೆ. ಈ ಬಾರಿಯೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ.

ಹೋದವರ ಬಗ್ಗೆ ಮಾತನಾಡಲ್ಲ

ಹೋದವರ ಬಗ್ಗೆ ಮಾತನಾಡಲ್ಲ

ಈ ಹಿಂದೆ ಇದ್ದ ಅಭ್ಯರ್ಥಿ ಯಾಕೆ ಹೋದರು ಎಂಬ ಬಗ್ಗೆ ಈಗ ಚರ್ಚೆ ಮಾಡುವುದಿಲ್ಲ. ಮತದಾರ ಕಳೆದ ಚುನಾವಣೆಯಲ್ಲಿ ಪಕ್ಷಕ್ಕೆ ನೀಡಿದ್ದಕ್ಕಿಂತ ಹೆಚ್ಚಿನ ಮತ ನೀಡಿ ನಮ್ಮ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತಾರೆ ಎಂಬ ವಿಶ್ವಾಸವಿದೆ. ಈ ಕ್ಷೇತ್ರದ ಜನರ ನಂಬಿಕೆ ಉಳಿಸಿಕೊಂಡು ನಾವು ಕೆಲಸ ಮಾಡುತ್ತೇವೆ.

ಜ್ಯೋತಿಷ್ಯ: ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎದುರು ಬಿಜೆಪಿ ಅಭ್ಯರ್ಥಿ ಮುನಿರತ್ನ ಸೋಲು ಖಚಿತ ಯಾಕೆ ಗೊತ್ತಾ?

ಸರ್ಕಾರದ ಬೆದರಿಕೆಗೆ ಹೆದರಲ್ಲ

ಸರ್ಕಾರದ ಬೆದರಿಕೆಗೆ ಹೆದರಲ್ಲ

ಕೆ.ಜೆ ಹಳ್ಳಿ ಗಲಾಟೆಯಲ್ಲಿ ಕಾಂಗ್ರೆಸ್ ಪಕ್ಷದವರು ಯಾರೂ ಇಲ್ಲಾ. ಕಾಂಗ್ರೆಸ್ ಪಕ್ಷೇತರರು ಮಾಡಿರಯವ ಗಲಾಟೆ. ಬಿಜೆಪಿ ಸರ್ಕಾರ ಹೆದರಿಸಿ ಬೆದರಿಸಿ ರಾತ್ರೋ ರಾತ್ರಿ ಕಾಂಗ್ರೆಸ್ ಪಕ್ಷದವರ ಹೆಸರು ಸೇರಿಸಿದ್ದಾರೆ.

ಕಾಂಗ್ರೆಸ್ ನಾಯಕರ ವಿಚಾರಣೆ

ಕಾಂಗ್ರೆಸ್ ನಾಯಕರ ವಿಚಾರಣೆ

ನಮ್ಮನ್ನ ಬೆದರಿಸುವ ತ‌ಂತ್ರ ಮಾಡುತ್ತಿದ್ದಾರೆ. ಪರಮೇಶ್ವರ ಅವರನ್ನ ಕರೆದು ಸಿಬಿಐ ತನಿಖೆ ಮಾಡಿದೆ‌. ನಮ್ಮಿಬ್ಬರು ಶಾಸಕರನ್ನು ನಿನ್ನೆ ತನಿಖೆ ಮಾಡಿದ್ದಾರೆ. ಈ ಬೆದರಿಕೆಗೆಲ್ಲಾ ನಾವು ಬಗ್ಗಲ್ಲ ಎಂದು ಡಿಕೆಶಿ ಹೇಳಿದರುಅ.

English summary
KPCC President DK Shivakumar has spoken to the media after Congress candidate H Kusuma filing her nomination papers for the Rajarajeshwari Nagar by-election
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X