ಡಿಕೆಶಿಗೆ ಜ್ವರ, ಅಧಿಕ ರಕ್ತದೊತ್ತಡ; ಆಸ್ಪತ್ರೆಗೆ ದಾಖಲು
ಬೆಂಗಳೂರು, ಸೆಪ್ಟೆಂಬರ್ 15 : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಡಿ. ಕೆ. ಶಿವಕುಮಾರ್ ಆರೋಗ್ಯ ಏರುಪೇರಾಗಿದೆ. ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ.
ಶನಿವಾರ ಸಂಜೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಡಿ. ಕೆ. ಶಿವಕುಮಾರ್‌ರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಜ್ವರ, ಅಧಿಕ ರಕ್ತದೊತ್ತಡ, ಅತಿಸಾರದಿಂದ ಅವರು ಬಳಲುತ್ತಿದ್ದು, ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದ್ದು, ಡಿ. ಕೆ. ಶಿವಕುಮಾರ್ ಇರುವ ವಾರ್ಡ್‌ಗೆ ವೈದ್ಯರ ಪ್ರವೇಶಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಕುಟುಂಬಸ್ಥರು ಶನಿವಾರ ಸಂಜೆ ಅವರನ್ನು ಭೇಟಿಯಾಗಿದ್ದರು.

ಗುರುವಾರ ರಾತ್ರಿಯೂ ಡಿ. ಕೆ. ಶಿವಕುಮಾರ್ ಆರೋಗ್ಯದಲ್ಲಿ ಏರುಪೇರಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಶುಕ್ರವಾರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಸೆ.17ರ ತನಕ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ನೀಡಿತ್ತು.
ಶನಿವಾರ ಡಿ. ಕೆ. ಶಿವಕುಮಾರ್ ಇಡಿ ವಿಚಾರಣೆ ಎದುರಿಸಿದ್ದರು. ಆದರೆ, ಸಂಜೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಡಿ. ಕೆ. ಶಿವಕುಮಾರ್ ವೈದ್ಯರಾದ ಡಾ. ರಂಗನಾಥ್ ಅವರ ಜೊತೆಯಲ್ಲಿಯೇ ಇದ್ದು, ಆರೋಗ್ಯದ ಮೇಲೆ ನಿಗಾವಹಿಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಡಿ. ಕೆ. ಶಿವಕುಮಾರ್‌ರನ್ನು ಸೆ.3ರಂದು ಬಂಧಿಸಿತ್ತು. ಜಾಮೀನು ಪಡೆಯಲು ಅವರು ಸೋಮವಾರ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.












Click it and Unblock the Notifications