DK shivakumar: ಹೊಸಕೆರೆಹಳ್ಳಿ ಕೆರೆ ಭಾಗ ಮಾಡಿ ರಸ್ತೆ ನಿರ್ಮಾಣ ಮಾಡಿದ ಅಧಿಕಾರಿಗಳ ಅಮಾನತಿಗೆ ಡಿ ಕೆ ಶಿವಕುಮಾರ್‌ ಆದೇಶ

ಬೆಂಗಳೂರು, ಜೂನ್‌ 05: ಪ್ರಭಾವಿ ಅಪಾರ್ಟ್ಮೆಂಟ್ ಮಾಲೀಕರಿಗೆ ಅನುಕೂಲ ಮಾಡಿಕೊಡಲು ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ ಯೋಜನೆ ರೂಪಿಸಿದ, ಅನುಷ್ಠಾನಕ್ಕೆ ತಂದ ಎಲ್ಲ ಅಧಿಕಾರಿಗಳು, ಇಂಜಿನಿಯರ್ ಗಳನ್ನು ಇವತ್ತು ಸಂಜೆ ಒಳಗೆ ಸೇವೆಯಿಂದ ಅಮಾನತು ಮಾಡುವಂತೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಅವರಿಗೆ ಸೂಚನೆ ನೀಡಿದರು.

ಈ ಕೆರೆ ಮಧ್ಯೆ ರಸ್ತೆ ನಿರ್ಮಾಣ ಮಾಡುವ ಐಡಿಯಾ ಕೊಟ್ಟವರು ಯಾರು? ಯೋಜನೆ ರೂಪಿಸಿದವರು ಯಾರು? ಅನುಷ್ಠಾನಕ್ಕೆ ತಂದವರು ಯಾರು? ಯಾಕಾಗಿ ಇದನ್ನು ಮಾಡಿದಿರಿ? ಯಾರಿಗೆ ಅನುಕೂಲ ಮಾಡಿಕೊಡಲು ಮಾಡಿದಿರಿ? ಯಾರ್ಯಾರು ಇದರಲ್ಲಿ ಭಾಗಿಯಾಗಿದ್ದೀರಿ ಎಂದು ಶಿವಕುಮಾರ್ ಅವರು ಸಭೆಯಲ್ಲಿ ಪ್ರಶ್ನಿಸಿದರು.

DK Shivakumar Suspends the Officer

ಅಧಿಕಾರಿಗಳು ಇದಕ್ಕೆ ಉತ್ತರಿಸಲು ತಡಬಡಾಯಿಸಿದರು. ತಕ್ಷಣವೇ ಉಪಮುಖ್ಯಮಂತ್ರಿಗಳು ಹೊಸಕೆರೆಹಳ್ಳಿ ಕೆರೆ ಭಾಗ ಮಾಡಿ ರಸ್ತೆ ನಿರ್ಮಾಣ ಮಾಡಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಸೂಚನೆ ನೀಡಿದರು.

ಈಜಿಪುರ ಮೇಲ್ಸೇತುವೆ ಶೀಘ್ರ ಪೂರ್ಣಗೊಳಿಸಲು ಆದೇಶ

ಈಜಿಪುರ ಮೇಲ್ಸೇತುವೆ ಯೋಜನೆಯನ್ನು ತಕ್ಷಣ ಪೂರ್ಣಗೊಳಿಸಬೇಕು. ಈ ಬಗ್ಗೆ ಅಗತ್ಯವಿರುವ ಆಡಳಿತಾತ್ಮಕ ನಿರ್ಣಯಗಳನ್ನು ತಕ್ಷಣ ಕೈಗೊಳ್ಳಬೇಕು ಎಂದು ಡಿ ಕೆ ಶಿವಕುಮಾರ್ ಅವರು ತುಷಾರ್ ಗಿರಿನಾಥ್ ಅವರಿಗೆ ಸೂಚನೆ ಕೊಟ್ಟರು.

ಬೆಂಗಳೂರಿನ ಮುಂದಿನ 20 ವರ್ಷಗಳ ಅಗತ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಯೋಜನೆಗಳನ್ನು ರೂಪಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಹೇಳಿದರು. ಇನ್ನೂ ಬೆಂಗಳೂರು ಬಗ್ಗೆ ದೂರದೃಷ್ಟಿ ಯೋಜನೆಗಳನ್ನು ರೂಪಿಸದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದರು.

ಬೆಂಗಳೂರಿನ ಕೆಲವೆಡೆ ಹೋರ್ಡಿಂಗ್ಸ್ ಇವೆ. ಇದಕ್ಕೆ ಅನುಮತಿ ಕೊಟ್ಟವರು ಯಾರು? ಒಂದೊಂದು ಪ್ರದೇಶಕ್ಕೆ ಒಂದೊಂದು ನೀತಿ ಹೇಗೆ ಎಂದು ಪ್ರಶ್ನಿಸಿದ ಅವರು, ಎಲ್ಲೆಡೆ ಅನ್ವಯ ಆಗುವಂತೆ ಸಾಮಾನ್ಯ ನೀತಿ ರೂಪಿಸುವಂತೆ ಸೂಚಿಸಿದರು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+