DK Shivakumar Oath: ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕನಕಪುರದ ಬಂಡೆ ಡಿ ಕೆ ಶಿವಕುಮಾರ್‌

ಬೆಂಗಳೂರು, ಮೇ 20: ಐತಿಹಾಸಿಕ ಗೆಲುವು ಸಾಧಿಸಿಕ ಗೆಲುವು ಸಾಧಿಸಿದ ಕಾಂಗ್ರೆಸ್‌ ನಲ್ಲಿ ಏಕೈಕ ಡಿಸಿಎಂ ಆಗಿ ಡಿ ಕೆ ಶಿವಕುಮಾರ್‌ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಗಂಗಾಧರ ಅಜ್ಜನ ಹೆಸರಿನಲ್ಲಿ ನೂತನ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ರಾಷ್ಟ್ರೀಯ ಮಟ್ಟದ ನಾಯಕರು ಭಾಗಿಯಾಗಿದ್ದರು.

DK Shivakumar Takes Oath

ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಅದ್ದೂರಿ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಉಪಮಂತ್ರಿ ಮಂತ್ರಿ ಡಿ ಕೆ ಶಿವಕುಮಾರ್‌ ಅವರಿಗೆ ಅಧಿಕಾರ ಮತ್ತು ಗೌಪ್ಯತೆ ಪ್ರಮಾಣ ವಚನ ಬೋಧಿಸಿದರು. ಇನ್ನೂ ಡಿ ಕೆ ಶಿವಕುಮಾರ್‌ ಅವರು ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ನೂತನ ಉಪಮಂತ್ರಿ ಮಂತ್ರಿ ಕಡತಕ್ಕೆ ಸಹಿ ಹಾಕಿದರು. ನಂತರ ರಾಜ್ಯಪಾಲ ಗೆಹ್ಲೋಟ್, ಡಿ ಕೆ ಶಿವಕುಮಾರ್‌ ಅವರಿಗೆ ಹೂಗುಚ್ಚ ನೀಡಿ ಅಭಿನಂದಿಸಿದರು.

ಡಿ.ಕೆ ಶಿವಕುಮಾರ್ ಎಂಬ ಹೆಸರಿನವನಾದ ನಾನು, ಕಾನೂನು ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನ ವಿಷಯದಲ್ಲಿ ನಿಜವಾದ ಶ್ರದ್ಧೆ ಹಾಗೂ ನಿಷ್ಠೆ ಹೊಂದಿರುತ್ತೇನೆ. ಭಾರತದ ಸಾರ್ವಭೌಮತೆ ಹಾಗೂ ಅಖಂಡತೆಯನ್ನು ಎತ್ತಿಹಿಡಿಯುತ್ತೇನೆ.

ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿಯಾಗಿ ನನ್ನ ಕರ್ತವ್ಯವನ್ನು ಶ್ರದ್ಧಾಪೂರ್ವಕವಾಗಿ ಮತ್ತು ಅಂತಃಕರಣದಿಂದ ನಿರ್ವಹಿಸುತ್ತೇನೆ. ಭಯ ಅಥವಾ ಪಕ್ಷಪಾತವಿಲ್ಲದೇ, ರಾಗ ಅಥವಾ ದ್ವೇಷವಿಲ್ಲದೇ, ಎಲ್ಲ ಬಗೆಯ ಜನರಿಗೆ ಸಂವಿಧಾನ ಹಾಗೂ ಕಾನೂನಿಗೆ ಅನುಸಾರವಾಗಿ ನ್ಯಾಯುತವಾಗಿ ಕೆಲಸ ಮಾಡುತ್ತೇನೆ ಎಂದು ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ. ಶ್ರದ್ಧಾಪೂರ್ವಕವಾಗಿ ಧೃಡೀಕರಣ ಮಾಡುತ್ತೇನೆ ಎಂದರು.

ಡಿ.ಕೆ ಶಿವಕುಮಾರ್ ಎಂಬ ಹೆಸರಿನವನಾದ ನಾನು, ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿಯಾಗಿ ನನ್ನ ಪರ್ಯಾಲೋಚನೆಗೆ ತರಲಾಗುವು ಅಥವಾ ತಿಳಿದುಬರುವ ಯಾವುದೇ ವಿಷಯವನ್ನು ರಾಜ್ಯದ ಉಪಮುಖ್ಯಮಂತ್ರಿಯಾಗಿ ನನ್ನ ಕರ್ತವ್ಯಗಳ ಯುಕ್ತ ನಿರ್ವಹಣೆಗೆ ಅಗತ್ಯವಾಗಬಹುದಾದ ಸಂದರ್ಭದಲ್ಲಲ್ಲದೇ ಯಾವುದೇ ವ್ಯಕ್ತಿಗೆ ಅಥವಾ ವ್ಯಕ್ತಿಗಳಿಗೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ತಿಳಿಸುವುದಿಲ್ಲ ಅಥವಾ ಬಹಿರಂಗಪಡಿಸುವುದಿಲ್ಲ ಎಂದು ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ. ಶ್ರದ್ಧಾಪೂರ್ವಕವಾಗಿ ಧೃಡೀಕರಣ ಮಾಡುತ್ತೇನೆ' ಎಂದು ಪ್ರಮಾಣವಚನ ಸ್ವೀಕರಿಸಿದರು.

ಈ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಎನ್ ಸಿಪಿ ನಾಯಕ ಶರದ್ ಪರವಾರ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ತೇಜಸ್ವಿ ಯಾದವ್, ಛತ್ತೀಸಗಡ ಮುಖ್ಯಮಂತ್ರಿ ಭೂಪೇಂದ್ರ ಭಘೇಲ್, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲೀನ್, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಜಾರ್ಖಂಡ ಮುಖ್ಯಮಂತ್ರಿ ಹೇಮಂತ್ ಸೊರೇನ್, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖ್ಖು, ರಾಜ್ಯಸಭೆ ಸದಸ್ಯ ಫಾರೂಕ್ ಅಬ್ದುಲ್ಲಾ ಖ್ಯಾತ ನಟ ಕಮಲ್ ಹಾಸನ್, ನಟ ಶಿವರಾಜ ಕುಮಾರ್ ಸೇರಿದಂತೆ ಅನೇಕ ಗಣ್ಯಾತಿಗಣ್ಯರು ಉಪಸ್ಥಿತರಿದ್ದರು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+