ಸಿಬಿಐಗೆ ಪ್ರವೀಣ್ ಸೂದ್ ನೇಮಕದ ಹಿಂದೆ ಡಿಕೆಶಿ ಟಾರ್ಗೆಟ್; ಕಾಂಗ್ರೆಸ್ ಶಾಸಕನ ಗಂಭೀರ ಆರೋಪ

ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ನಿರ್ದೇಶಕರನ್ನಾಗಿ ಭಾನುವಾರ, ಮೇ 14ರಂದು ಕೇಂದ್ರ ಸರ್ಕಾರ ನೇಮಕ ಮಾಡಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಧುಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎನ್. ರಾಜಣ್ಣ, "ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಗುರಿಯಾಗಿಸಿಕೊಂಡು ಕೇಂದ್ರ ಸರ್ಕಾರವು ಪ್ರವೀಣ್ ಸೂದ್ ಅವರನ್ನು ಸಿಬಿಐಗೆ ನೇಮಕ ಮಾಡಿದೆ," ಎಂದು ಗಂಭೀರ ಆರೋಪ ಮಾಡಿದ್ದಾರೆ.

dk shivakumar and praveen soodh

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎನ್. ರಾಜಣ್ಣ, "ಹೆದರಿಸುವುದು, ಬ್ಲ್ಯಾಕ್‌ಮೇಲ್ ರಾಜಕಾರಣ ಮಾಡುವುದು ಬಿಜೆಪಿ ಪಕ್ಷದ ಕೆಲಸವಾಗಿದೆ. 40 ಪರ್ಸೆಂಟ್ ಕಮಿಷನ್, ಬೆಲೆ ಏರಿಕೆಯಿಂದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿದೆ. ರಾಜ್ಯ ಬಿಜೆಪಿ ನಾಯಕರಿಗೆ ಮತ ಸೆಳೆಯುವ ಶಕ್ತಿ ಇಲ್ಲ," ಎಂದು ಕಿಡಿಕಾರಿದರು.

ಇನ್ನು ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಮಾತನಾಡಿದ ಅವರು, "ಕಾಂಗ್ರೆಸ್ ಹೈಕಮಾಂಡ್ ಒಲವು ಮಾಜಿ ಸಿಎಂ ಸಿದ್ದರಾಮಯ್ಯ ಪರವಾಗಿದೆ. ಅವರೇ ಮತ್ತೊಮ್ಮೆ ಮುಖ್ಯಮಂತ್ರಿ ಆಗುವುದು ಖಚಿತ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಸಿದ್ದರಾಮಯ್ಯನವರಿಗೆ ಸಹಕಾರ ನೀಡುತ್ತಾರೆ ಎಂಬ ವಿಶ್ವಾಸವಿದೆ. ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗುತ್ತದೆ," ಎಂದು ಮಧುಗಿರಿ ಕಾಂಗ್ರೆಸ್ ಶಾಸಕ ಕೆ.ಎನ್. ರಾಜಣ್ಣ ತಿಳಿಸಿದರು.

dk shivakumar and praveen soodh

"ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು, ಸಹಕಾರ ಇಲಾಖೆಗೆ ಬೇಡಿಕೆ ಇಟ್ಟಿದ್ದೇನೆ. ಅದು ಬಿಟ್ಟರೆ, ಬೇರೆ ಏನೂ ಕೇಳುವುದಿಲ್ಲ. ಮುಂದಿನ ದಿನಗಳಲ್ಲಿ ಮಧುಗಿರಿಯನ್ನು ಜಿಲ್ಲೆ ಮಾಡಲು ಪ್ರಯತ್ನಿಸಲಾಗುವುದು. ನಾನು ನುಡಿದಂತೆ ನಡೆಯುತ್ತೇನೆ," ಎಂದು ಕೆ.ಎನ್. ರಾಜಣ್ಣ ಹೇಳಿದ್ದಾರೆ.

ಮುಗಿಯದ ಸಿಎಂ ಆಯ್ಕೆ ಕಗ್ಗಂಟು
2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳಲ್ಲಿ ಗೆಲ್ಲುವುದರೊಂದಿಗೆ ಭಾರೀ ಬಹುಮತ ಗಳಿಸಿರುವ ಕಾಂಗ್ರೆಸ್ ಶೀಘ್ರದಲ್ಲೇ ಸರ್ಕಾರ ರಚನೆ ಮಾಡಲಿದೆ. ಇದಕ್ಕೂ ಮುನ್ನ ಮುಖ್ಯಮಂತ್ರಿ ಆಯ್ಕೆ ವಿಚಾರ ಪಕ್ಷಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಕಳೆದ ನಾಲ್ಕು ದಿನಗಳಿಂದ ಕಾಂಗ್ರೆಸ್ ಹೈಕಮಾಂಡ್‌ಗೂ ಸಿಎಂ ಆಯ್ಕೆ ಕಗ್ಗಂಟು ಬಿಡಿಸಲು ಸಾಧ್ಯವಾಗುತ್ತಿಲ್ಲ.

ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ ಬಂದು ನಾಲ್ಕು ದಿನಗಳು ಕಳೆದರೂ ನೂತನ ಸಿಎಂ ಆಯ್ಕೆಯಾಗದಿರುವ ಬಗ್ಗೆ ರಾಜ್ಯದ ಜನರಲ್ಲಿ ಬೇಸರ ಮೂಡಿಸಿದೆ. ಮುಖ್ಯಮಂತ್ರಿ ಸ್ಥಾನಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಂಧಾನಕ್ಕೆ ಉಭಯ ನಾಯಕರು ಬಗ್ಗದೇ ಬಿಗಿಪಟ್ಟು ಮುಂದುವರೆಸಿದ್ದಾರೆ.

ಒಂದು ಕಡೆ ಮಾಜಿ ಸಿಎಂ ಸಿದ್ದರಾಮಯ್ಯ ತಮಗೇ ಸಿಎಂ ಸ್ಥಾನ ನೀಡಬೇಕು ಎಂದು ಒತ್ತಡ ಹೇರುತ್ತಿದ್ದರೆ, ಮತ್ತೊಂದೆಡೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂಡ ಈ ಬಾರಿ ಸಿಎಂ ಸ್ಥಾನವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲವೆಂದು ಹೇಳುತ್ತಿದ್ದಾರೆ. ಹೈಕಮಾಂಡ್ ಯಾರಿಗೆ ಮಣೆ ಹಾಕಲಿದೆ ಎಂಬುದನ್ನು ಕಾದು ನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+