DK Shivakumar: ಕನ್ನಡ ಹೋರಾಟಗಾರರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಡಿ ಕೆ ಶಿವಕುಮಾರ್
ಬೆಂಗಳೂರು: ಕನ್ನಡ ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವ ಕುರಿತು ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಿಳಿಸಿದ ಅವರು, ನಿಮ್ಮ ಮೇಲಿರುವ ಪ್ರಕರಣಗಳನ್ನೆಲ್ಲ ವಾಪಸ್ ಪಡೆಯಬೇಕು ಎಂದು ಈಗಾಗಲೇ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿದರು.
ಇಂದು ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿ ಕೆ ಶಿವಕುಮಾರ್ ಅವರು, ಕನ್ನಡ ಹೋರಾಟಗಾರರ ಮೇಲಿನ ಪ್ರಕರಣಕ್ಕೆ ಸಂಬಂಧ ಕಡತಗಳು ಸಿದ್ಧವಾಗುತ್ತಿವೆ. ಇಂತಹ ಪ್ರಕರಣಗಳಿಂದ ಹೋರಾಟಗಾರರಿಗೆ ಮುಕ್ತಿ ನೀಡಬೇಕು ಎಂಬ ತೀರ್ಮಾನಕ್ಕೆ ಸರ್ಕಾರ ಬಂದಿದೆ. ಇಂತಹ ಸಂದರ್ಭದಲ್ಲಿ ನೀವು ಮತ್ತೆ ಈ ರೀತಿ ಮಾಡಿದರೆ ಪೊಲೀಸರು ಪ್ರಕರಣ ವಾಪಸ್ ಪಡೆಯಲು ಆಕ್ಷೇಪ ವ್ಯಕ್ತಪಡಿಸುತ್ತಾರೆ. ಹೀಗಾಗಿ ದಯವಿಟ್ಟು ಕಾನೂನು ಕೈಗೆತ್ತಿಕೊಳ್ಳದೆ ಸರ್ಕಾರಕ್ಕೆ ಸಹಕಾರ ನೀಡಿ ಎಂದು ಮನವಿ ಮಾಡಿದರು.

ಕರ್ನಾಟಕದ ಜನರ ರಕ್ಷಣೆಗೆ ಸರ್ಕಾರ ಬದ್ಧ
ಕನ್ನಡ ಭಾಷೆ, ಕರ್ನಾಟಕದ ಜನರ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಈ ಜವಾಬ್ದಾರಿಯನ್ನು ಸರ್ಕಾರವೇ ನಿರ್ವಹಿಸಲಿದೆ. ಹೀಗಾಗಿ ಯಾರೂ ಕಾನೂನು ಉಲ್ಲಂಘಿಸುವ ಮೂಲಕ ಸಮಸ್ಯೆ ಸೃಷ್ಟಿಸಬಾರದು" ಎಂದು ಹೇಳಿದರು. ಈ ನೆಲದಲ್ಲಿ ವಾಸಿಸುವ ಪ್ರತಿಯೊಬ್ಬರೂ ಇಲ್ಲಿನ ಕಾನೂನು ಮತ್ತು ನೆಲದ ಗೌರವವನ್ನು ಕಾಪಾಡಬೇಕು. ನಮ್ಮ ಭೂಮಿಯಲ್ಲಿ ಇದ್ದ ಮೇಲೆ ನಮ್ಮ ಭೂಮಿಗೆ ಗೌರವ ಕೊಡಬೇಕು. ಕಾನೂನು ಎಲ್ಲರಿಗೂ ಒಂದೇ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.
ಕನ್ನಡಿಗರು, ಮರಾಠಿಗರು ಕಾನೂನು ಕೈಗೆತ್ತಿಕೊಳ್ಳಬಾರದು
ಬೆಳಗಾವಿಯಲ್ಲಿ ಎಂಇಎಸ್ ಸಂಘಟನೆ ಕರಾಳ ದಿನಾಚರಣೆ ಆಚರಿಸಿರುವ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕನ್ನಡಿಗರು ಹಾಗೂ ಮರಾಠಿಗರು ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಈ ನೆಲದಲ್ಲಿ ವಾಸಿಸುವ ಪ್ರತಿಯೊಬ್ಬರೂ ಇಲ್ಲಿನ ಗೌರವವನ್ನು ಕಾಪಾಡಬೇಕು ಎಂದು ಹೇಳಿದರು.
ನೈತಿಕ ಪೊಲೀಸ್ ಗಿರಿ ಮಾಡಬೇಡಿ
ಯಾವುದೇ ಕನ್ನಡಪರ ಸಂಘಟನೆಗಳು, ಐಟಿ ಸಂಸ್ಥೆಗಳ ಮೇಲೆ ದಾಳಿ ಮಾಡಲು ಹೋಗಬಾರದು. ಕಾನೂನನ್ನು ಕೈಗೆತ್ತಿಕೊಳ್ಳುವುದು ಸರಿಯಲ್ಲ. ನೈತಿಕ ಪೊಲೀಸ್ ಗಿರಿ ನಡೆಸಲು ಅವಕಾಶವಿಲ್ಲ. ಸರ್ಕಾರ ಮತ್ತು ಪೊಲೀಸ್ ಇಲಾಖೆ ಇದೆ. ಯಾವುದೇ ದೂರು ಅಥವಾ ಸಮಸ್ಯೆಗಳಿದ್ದರೆ ಸರ್ಕಾರದ ಗಮನಕ್ಕೆ ತನ್ನಿ. ಪೊಲೀಸರು ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.
ಮತದಾರರ ಹಕ್ಕುಗಳನ್ನು ರಕ್ಷಿಸಲು ಕಾಂಗ್ರೆಸ್ ಬದ್ಧ
ದೆಹಲಿಯಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ಬಗ್ಗೆ ಕೇಳಿದಾಗ, "ಮತದಾನದ ಹಕ್ಕು ಎಂದರೆ ಅದು ಬದುಕುವ ಹಕ್ಕಿದ್ದಂತೆ. ಆದರೆ, ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಲಕ್ಷಾಂತರ ಜನರ ಮತಗಳನ್ನು ವ್ಯವಸ್ಥಿತವಾಗಿ ಅಳಿಸಿಹಾಕಲಾಗಿದೆ. ದೇಶದ ಪ್ರತಿಯೊಬ್ಬ ಮತದಾರರಿಗೆ ಮತದಾನದ ಹಕ್ಕು ನೀಡುವುದು ನಮ್ಮ ಕರ್ತವ್ಯವಾಗಿದೆ.
ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ರಕ್ಷಿಸಲು ಶ್ರಮಿಸುತ್ತಿರುವ ಪಕ್ಷವು ಪ್ರತಿ ಮತದಾರರ ಹಕ್ಕುಗಳನ್ನು ರಕ್ಷಿಸಲು ಬದ್ಧವಾಗಿದೆ. ಪ್ರಸ್ತುತ ಹಮ್ಮಿಕೊಳ್ಳಲಾಗಿರುವ ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿರುವ ಪ್ರತಿಭಟನೆ ಯಶಸ್ವಿಯಾಗಲಿದೆ.ಪ್ರತಿಯೊಬ್ಬ ಮತದಾರರ ಹಕ್ಕನ್ನು ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆಎಂದರು.
ಕರ್ನಾಟಕದಲ್ಲಿ ಯಾವ ರೀತಿಯಲ್ಲಿ ಅಕ್ರಮಗಳನ್ನು ಸೃಷ್ಟಿಸಲಾಯಿತು ಎಂಬುದು ಎಲ್ಲರಿಗೂ ತಿಳಿದಿರುವ ಸಂಗತಿಯಾಗಿದೆ. ಲಕ್ಷಾಂತರ ಮತದಾರರ ಹೆಸರುಗಳನ್ನು ಉದ್ದೇಶಪೂರ್ವಕವಾಗಿ ಮತದಾರರ ಹೆಸರನ್ನು ಮತ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಈ ಅನ್ಯಾಯದ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು.
ಯುವಕರ ಪ್ರತಿಭೆಗಳಿಗೆ ಪ್ರೋತ್ಸಾಹ
ಕರ್ನಾಟಕವನ್ನು ನಶೆಮುಕ್ತ ರಾಜ್ಯವನ್ನಾಗಿ ಮಾಡಬೇಕು. ಕರ್ನಾಟಕ ಪ್ರಾದೇಶಿಕ ಯೋಜನೆ ರೂಪಿಸಿ 2047ರ ವೇಳೆಗೆ ರಾಜ್ಯಕ್ಕೆ ಹೊಸ ರೂಪ ನೀಡಲು ಹೆಜ್ಜೆ ಹಾಕುತ್ತಿದ್ದೇವೆ. ಇದರಿಂದ ಮುಂದಿನ 20 ವರ್ಷಗಳಲ್ಲಿ 5 ಲಕ್ಷ ಕೋಟಿ ಹೂಡಿಕೆಗೆ ಕಾರ್ಯಕ್ರಮ ರೂಪಿಸಲಾಗಿದೆ. ನಮ್ಮ ಸರ್ಕಾರ ಭಾರತ ಜೋಡೋ ಯುವಕರ ಸಂಘ ಸ್ಥಾಪಿಸುತ್ತಿದೆ. ಪಂಚಾಯಿತಿ ಹಾಗೂ ವಾರ್ಡ್ ಮಟ್ಟದಲ್ಲಿ ಕ್ರೀಡೆ, ಕಲೆ, ಸಂಸ್ಕೃತಿ ವಿಚಾರವಾಗಿ ಯುವಕರ ಪ್ರತಿಭೆಗೆ ಪ್ರೋತ್ಸಾಹ ನೀಡಿ ಅವರಲ್ಲಿ ನಾಯಕತ್ವದ ಗುಣ ಬೆಳೆಸಲು ಸರ್ಕಾರ ಮುಂದಾಗಿದೆ. ಇದಕ್ಕಾಗಿ ರಾಜ್ಯದಲ್ಲಿ 10 ಸಾವಿರ ಭಾರತ ಜೋಡೋ ಸಂಘಗಳನ್ನು ಸ್ಥಾಪಿಸಿ 16-35 ವರ್ಷದೊಳಗಿನ ಯುವಕರನ್ನು ಸದಸ್ಯರನ್ನಾಗಿ ಮಾಡಲಾಗುವುದು. ಈ ಸಂಘಗಳಿಗೆ ವಾರ್ಷಿಕ 10 ಲಕ್ಷ ಅನುದಾನ ನೀಡಲಾಗುವುದು ಎಂದು ವಿವರಿಸಿದರು.
ಈಗಾಗಲೇ 72 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿಗೆ ಆದೇಶ ಮಾಡಲಾಗಿದ್ದು, 66 ಸಾವಿರ ಉದ್ಯೋಗಗಳನ್ನು ಸೃಷ್ಟಿ ಮಾಡಲಾಗಿದೆ. ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ಯುವನಿಧಿ ಯೋಜನೆ ಜತೆಗೆ ಖಾಸಗಿ ಉದ್ಯೋಗ ವಿನಿಮಯಕ್ಕಾಗಿ ಉದ್ಯೋಗ ಸೇತು ವ್ಯವಸ್ಥೆ ರೂಪಿಸಿದೆ. ಇದಕ್ಕಾಗಿ 100 ಐಟಿಐ ಸಂಸ್ಥೆಗಳನ್ನು ಅತ್ಯುತಮ ಕೈಗಾರಿಕಾ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಡಲಾಗಿದೆ ಎಂದರು.


Click it and Unblock the Notifications
