ಸೌತ್ ಕೌನ್ಸಿಲ್ ಸಭೆಗಾಗಿ ತಮಿಳುನಾಡಿಗೆ ಭೇಟಿ ನೀಡಲಿರುವ ಡಿ.ಕೆ.ಶಿವಕುಮಾರ್, ಎಲ್ಲರ ಕಣ್ಣು ಕರ್ನಾಟಕದ ಸಿಎಂ ಮೇಲೆ

ಬೆಂಗಳೂರು, ಆಗಸ್ಟ್ 18: ಸದ್ಯ ಕಾವೇರಿ ನದಿ ನೀರು ಹಂಚಿಕೆ ವಿವಾದ ತೀವ್ರಗೊಂಡಿವೆ. ಈ ನಡುವೆಯೇ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮಿಳುನಾಡಿಗೆ ಪ್ರವಾಸ ಕೈಗೊಳ್ಳಲಿದ್ದಾರೆ. ಆಗಸ್ಟ್ 19 ಮತ್ತು 20ರಂದು ನಿಗದಿಯಾಗಿರುವ ದಕ್ಷಿಣ ವಲಯ ಮಂಡಳಿಯ (ಸೌತ್ ಕೌನ್ಸಿಲ್) 31ನೇ ಆವೃತ್ತಿಯ ಸಭೆಯಲ್ಲಿ ಭಾಗವಹಿಸಲು ಅವರು ತೆರಳುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಲಿದೆ. ದಕ್ಷಿಣ ಭಾರತದ ರಾಜ್ಯಗಳಾದ ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಪುದುಚೇರಿ ಹಾಗೂ ಆತಿಥೇಯ ತಮಿಳುನಾಡು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಹಿರಿಯ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಪ್ರಾದೇಶಿಕ ಅಭಿವೃದ್ಧಿ ಹಾಗೂ ಅಂತರರಾಜ್ಯ ವಿವಾದಗಳನ್ನು ಬಗೆಹರಿಸಿಕೊಳ್ಳುವುದು ಈ ಸಭೆಯ ಮುಖ್ಯ ಉದ್ದೇಶವಾಗಿದೆ. ಸಿಎಂ ಡಿ.ಕೆ.ಶಿವಕುಮಾರ್ ಅವರು ಬುಧವಾರ ದೆಹಲಿಯಲ್ಲಿ ನಡೆಯಲಿರುವ ಎಐಸಿಸಿ ಕಾರ್ಯಕಾರಿ ಸಮಿತಿ ಸಭೆಯನ್ನು ಮುಗಿಸಿದ ನಂತರ ನೇರವಾಗಿ ಚೆನ್ನೈಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.

DK Shivakumar to Attend South Council Meeting in Chennai Kaveri And Mekedatu on Agenda know detail

ಸಭೆಯಲ್ಲಿ ಏನೆಲ್ಲಾ ಚರ್ಚೆಗಳಾಗಲಿವೆ?

ದಕ್ಷಿಣ ವಲಯ ಮಂಡಳಿಯ ಈ ಸಭೆಯಲ್ಲಿ ಮೂರು ಪ್ರಮುಖ ವಿಷಯಗಳ ಕುರಿತು ಗಂಭೀರ ಚರ್ಚೆ ನಡೆಯಲಿದೆ. ನೆರೆ-ಹೋರೆ ರಾಜ್ಯಗಳ ನಡುವೆ ದೀರ್ಘಕಾಲದಿಂದ ನೆನೆಗುದಿಗೆ ಬಿದ್ದಿರುವ ನದಿ ನೀರು ಹಂಚಿಕೆ ಸಮಸ್ಯೆಗಳು, ಆತಂಕಗಳು ಹಾಗೂ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಎದುರಾಗಿರುವ ಅಡೆತಡೆಗಳ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗುತ್ತಿದೆ.

ಅಂತರರಾಜ್ಯ ಸಾರಿಗೆ, ರಸ್ತೆ/ರೈಲು ಸಂಪರ್ಕ ಜಾಲ ಹಾಗೂ ಪ್ರಾದೇಶಿಕ ಯೋಜನೆಗಳ ಪ್ರಸ್ತುತ ಸ್ಥಿತಿಗತಿ ಮತ್ತು ಪ್ರಗತಿಯ ಕುರಿತು ಕೇಂದ್ರ ಹಾಗೂ ರಾಜ್ಯ ಮಟ್ಟದಲ್ಲಿ ಚರ್ಚೆ ನಡೆಸಲಾಗುವುದು. ಪ್ರಾದೇಶಿಕ ಭದ್ರತೆ, ಗಡಿ ಭಾಗಗಳಲ್ಲಿ ನಡೆಯುವ ಅಪರಾಧಗಳ ಮೇಲ್ವಿಚಾರಣೆ ಹಾಗೂ ಸೈಬರ್ ಮಾಹಿತಿ ಹಂಚಿಕೆಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ದಕ್ಷಿಣ ರಾಜ್ಯಗಳ ಆಡಳಿತ ಮುಖ್ಯಸ್ಥರ ನಡುವೆ ಸಮಾಲೋಚನೆ ನಡೆಯಲಿದೆ.

ಮೇಕೆದಾಟು ಮತ್ತು ಕಾವೇರಿ ಬಗ್ಗೆ ಚರ್ಚೆ

ಸಭೆಯಲ್ಲಿ ಕರ್ನಾಟಕದ ಹಿತಾಸಕ್ತಿಯನ್ನು ಬಲವಾಗಿ ಪ್ರತಿಪಾದಿಸಲು ಸಿಎಂ ಡಿ.ಕೆ. ಶಿವಕುಮಾರ್ ನಿರ್ಧರಿಸಿದ್ದಾರೆ. ಪ್ರಮುಖವಾಗಿ ಮೇಕೆದಾಟು ಸಮತೋಲನ ಜಲಾಶಯ ಯೋಜನೆಯ ಅನಿವಾರ್ಯತೆ ಹಾಗೂ ಮಳೆಯಾಗದ ಸಂಕಷ್ಟದ ಸಮಯದಲ್ಲಿ ಕಾವೇರಿ ನೀರು ಹಂಚಿಕೆ ನಿರ್ವಹಣೆಯ ಕುರಿತು ಕೇಂದ್ರ ಸರ್ಕಾರ ಮತ್ತು ತಮಿಳುನಾಡಿನ ಗಮನಕ್ಕೆ ತರಲಿದ್ದಾರೆ ಎನ್ನಲಾಗಿದೆ.

ಸಿಎಂ ವಿಜಯ್ ಜೊತೆ ಡಿಕೆಶಿ ಚರ್ಚೆ ಸಾಧ್ಯತೆ

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸೂಚನೆಗಳು ಮತ್ತು ಕರ್ನಾಟಕದಲ್ಲಿ ಎದುರಾದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಈ ಹಿಂದೆ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಅವರ ಬೆಂಗಳೂರು ಭೇಟಿ ಮುಂದೂಡಲ್ಪಟ್ಟಿತ್ತು. ಇದೀಗ ಚೆನ್ನೈ ಭೇಟಿಯ ವೇಳೆ ಸಿಎಂ ವಿಜಯ್ ಅವರೊಂದಿಗೂ ಕರ್ನಾಟಕದ ಸಿಎಂ ಡಿ.ಕೆ.ಶಿವಕುಮಾರ್ ಅವರು ಪ್ರತ್ಯೇಕ ಚರ್ಚೆ ನಡೆಸುವ ಸಾಧ್ಯತೆಯಿದೆ.

ಮೇಕೆದಾಟು ಯೋಜನೆಯಿಂದ ಎರಡೂ ರಾಜ್ಯಗಳಿಗೆ ಲಾಭವಿದೆ ಹೊರತು ತಮಿಳುನಾಡಿಗೆ ಯಾವುದೇ ನಷ್ಟವಿಲ್ಲ ಎಂಬುದನ್ನು ಸೌಹಾರ್ದಯುತವಾಗಿ ಮನವರಿಕೆ ಮಾಡಿಕೊಡಲು ಕರ್ನಾಟಕ ಸರ್ಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ. ಕಾವೇರಿ ವಿಚಾರದಲ್ಲಿ ಎರಡೂ ರಾಜ್ಯಗಳು ಸಂಯಮದಿಂದ ಮುಂದುವರೆದರೆ ಮಾತ್ರ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂಬ ಸಂದೇಶವನ್ನು ಈ ಸಭೆಯಲ್ಲಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗುತ್ತಿದೆ. ಒಟ್ಟಿನಲ್ಲಿ ಇದೀಗ ಸದ್ಯ ಕಾವೇರಿ ವಿವಾದ ಬಿಸಿ ಇದ್ದು, ಇದರ ಜೊತೆಗೆ ಹಲವು ವಿಚಾರಗಳ ಬಗ್ಗೆ ಮನವರಿಕೆ ಮಾಡಿಕೊಟ್ಟು ಸಮಸ್ಯೆಗಳನ್ನ ಇತ್ಯರ್ಥಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಹೇಳಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+