Dk Shivakumar: ಡಿ.ಕೆ ಶಿವಕುಮಾರ್‌ ನಡೆಗೆ ಕಾಂಗ್ರೆಸ್‌ ಹೈಕಮಾಂಡ್ ಗರಂ!

ಕರ್ನಾಟಕದ ಪ್ರಭಾವಿ ಕಾಂಗ್ರೆಸ್‌ ನಾಯಕ ಹಾಗೂ ಉಪ ಮುಖ್ಯಮಂತ್ರಿ, ಬೆಂಗಳೂರು ನಗರಾಭಿವೃದ್ಧಿ ಸಚಿವ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅವರಿಗೆ ಕಾಂಗ್ರೆಸ್‌ ಪಕ್ಷದಿಂದಲೇ ವಿರೋಧ ವ್ಯಕ್ತವಾಗುತ್ತಿದೆ. ತಮಿಳುನಾಡಿನ ಕೊಯಮತ್ತೂರಿನ ಇಶಾ ಫೌಂಡೇಷನ್‌ನಲ್ಲಿ ಆಯೋಜಿಸಿದ್ದ ಮಹಾಶಿವರಾತ್ರಿ ಕಾರ್ಯಕ್ರಮದಲ್ಲಿ ಡಿ.ಕೆ ಶಿವಕುಮಾರ್‌ ಅವರು ಭಾಗವಹಿಸುತ್ತಿದ್ದಂತೆಯೇ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು. ಇಶಾ ಫೌಂಡೇಶನ್‌ನ ಸಂಸ್ಥಾಪಕ ಹಾಗೂ ಆಧ್ಯಾತ್ಮಿಕ ನಾಯಕ ಸದ್ಗುರು ಜಗ್ಗಿ ವಾಸುದೇವ್‌ ಅವರೊಂದಿಗೆ ವೇದಿಕೆ ಹಂಚಿಕೊಂಡಿರುವ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗುತ್ತಿದ್ದು. ಡಿ.ಕೆ ಶಿವಕುಮಾರ್‌ ಅವರಿಗೆ ಯಾವುದೇ ಸಿದ್ಧಾಂತ ಇಲ್ಲವೇ ಎಂದು ಕೆಲವರು ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪ್ರಶ್ನೆ ಮಾಡಿದ್ದಾರೆ.

ಶಿವರಾತ್ರಿ ಕಾರ್ಯಕ್ರಮದಲ್ಲಿ ಡಿ.ಕೆ ಶಿವಕುಮಾರ್‌ ಕಾಣಿಸಿಕೊಳ್ಳುತ್ತಿದ್ದಂತೆಯೇ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ಟ್ರೋಲ್ ಆಗುತ್ತಿದೆ.

DK Shivakumar to Isha Foundation Congress High Command is Angry

ಇಶಾ ಫೌಂಡೇಶನ್‌ನಿಂದ ಪ್ರತಿ ವರ್ಷವೂ ಮಹಾಶಿವರಾತ್ರಿಯ ಸಂದರ್ಭದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಅದೇ ರೀತಿ ಬಧವಾರವೂ ಸಹ ತಮಿಳುನಾಡಿನ ಕೊಯಮತ್ತೂರಿನಲ್ಲಿ ರಾತ್ರಿ ಪೂರ್ತಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಇದರಲ್ಲಿ ಆಧ್ಯಾತ್ಮಿಕ ಗುರುಗಳು ಸಂಗೀತ ಕಾರ್ಯಕ್ರಮ, ಧ್ಯಾನ ಹಾಗೂ ನೃತ್ಯ ಕಾರ್ಯಕ್ರಮಗಳು ನಡೆಯುತ್ತವೆ.

ಇನ್ನು ಇದೀಗ ಡಿ.ಕೆ ಶಿವಕುಮಾರ್‌ ಅವರು ವೇದಿಕೆ ಹಂಚಿಕೊಂಡಿರುವುದರ ಬಗ್ಗೆ ಪಕ್ಷದ ಒಳಗೆಯೇ ಅಸಮಾಧಾನ ಭುಗಿಲೆದ್ದಿದೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕಾರ್ಯದರ್ಶಿ ಪಿ.ವಿ ಮೋಹನ್ ಅವರು ಡಿ.ಕೆ ಶಿವಕುಮಾರ್‌ ಅವರ ನಡೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಈ ವಿಚಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಡಿ.ಕೆ ಶಿವಕುಮಾರ್‌ ಅವರ ನಡೆಯು ಪಕ್ಷದ ಮೂಲಕ್ಕೇ / ಪಕ್ಷದ ಸಿದ್ಧಾಂತಕ್ಕೆ ಹಾನಿಯನ್ನುಂಟು ಮಾಡಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಬುಧವಾರ ತಮಿಳುನಾಡಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿ.ಕೆ ಶಿವಕುಮಾರ್‌ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜೊತೆಯಲ್ಲಿ ಹಾಗೂ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರೊಂದಿಗೆ ವೇದಿಕೆ ಹಂಚಿಕೊಂಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಇನ್ನು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರನ್ನು ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಟ್ಯಾಗ್‌ ಮಾಡಿರುವ ಪಿ.ವಿ ಮೋಹನ್ ಅವರು, ಜಾತ್ಯತೀತ ಪಕ್ಷದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವಾಗ, ರಾಹುಲ್ ಗಾಂಧಿ ಅವರನ್ನು ಅಪಹಾಸ್ಯ ಮಾಡಿದವರಿಗೆ ನೀವು ಯಾವ ರೀತಿ ಧನ್ಯವಾದ ಹೇಳಲು ಸಾಧ್ಯ ಎಂದು ಪ್ರಶ್ನೆ ಮಾಡಿದ್ದಾರೆ.

ಮಹಾಶಿವರಾತ್ರಿ ಆಚರಣೆಯಲ್ಲಿ ಭಾಗವಹಿಸುವುದಕ್ಕೆ ಆಹ್ವಾನ ನೀಡಿದ್ದಕ್ಕೆ ಧನ್ಯವಾದಗಳು ಎಂದು ಡಿ.ಕೆ ಶಿವಕುಮಾರ್‌ ಅವರು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದರು. ಈ ಪೋಸ್ಟ್‌ಗೆ ಮೋಹನ್‌ ಅವರು ರಿಯಾಕ್ಟ್‌ ಮಾಡಿದ್ದಾರೆ. ಜಗ್ಗಿ ವಾಸುದೇವ್‌ ಅವರಿಗೆ ಡಿ.ಕೆ ಶಿವಕುಮಾರ್‌ ಅವರು ಧನ್ಯವಾದ ಹೇಳಿರುವುದಕ್ಕೆ ರಿಯಾಕ್ಟ್‌ ಮಾಡಿದ್ದಾರೆ.

ನಾನು ಶಿವಕುಮಾರ್ ಸೈದ್ಧಾಂತಿಕ ಅಭಿಪ್ರಾಯಗಳನ್ನು ಟೀಕಿಸುತ್ತಿಲ್ಲ. ಆದರೆ, ಈ ಬೆಳವಣಿಗೆಯ ಬಗ್ಗೆ ನನ್ನ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದೇನೆ. ಇಶಾ ಫೌಂಡೇಶನ್ ಹಾಗೂ ಜಗ್ಗಿ ವಾಸುದೇವ್ ಅವರ ಸಿದ್ಧಾಂತಗಳು ಬಿಜೆಪಿ ಹಾಗೂ ಆರ್‌ಎಸ್‌ಎಸ್‌ಗೆ ಪೂರಕವಾಗಿದೆ. ನಾವು ಆರ್‌ಎಸ್‌ಎಸ್ ಸಿದ್ಧಾಂತಗಳನ್ನು ಸಂಪೂರ್ಣವಾಗಿ ವಿರೋಧಿಸಿಕೊಂಡು ಬಂದಿದ್ದೇವೆ. ಕಾಂಗ್ರೆಸ್‌ ಪಕ್ಷದಲ್ಲಿ ಆರ್‌ಎಸ್‌ಎಸ್ ಸಿದ್ಧಾಂತಗಳನ್ನು ಪಾಲಿಸುವವರು ಯಾರೇ ಇದ್ದರೂ ಪಕ್ಷವನ್ನು ಬಿಟ್ಟು ಹೋಗಬಹುದು ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರು ಅತ್ಯಂತ ಸ್ಪಷ್ಟವಾಗಿ ಹೇಳಿದ್ದಾರೆ ಎಂದು ಅವರು ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ದೇವಾಲಯಗಳಿಗೆ ಭೇಟಿ ಕೊಡುವುದಕ್ಕೆ ನಮಗೆ ಯಾವುದೇ ಅಭ್ಯಂತರವಿಲ್ಲ. ಆದರೆ ಅವರು ನಡೆದುಕೊಳ್ಳುವ ರೀತಿಯು ಪಕ್ಷದ ಮೌಲ್ಯಗಳನ್ು ಪ್ರತಿಬಿಂಬಿಸುವಂತೆ ಇರಬೇಕು ಎಂದಿದ್ದಾರೆ.

ಡಿ.ಕೆ ಶಿವಕುಮಾರ್‌ ಹೇಳಿದ್ದೇನು ?

ಇನ್ನು ಈ ಕಾರ್ಯಕ್ರಮಲ್ಲಿ ಭಾಗವಹಿಸಿರುವ ಬಗ್ಗೆ ಡಿ.ಕೆ ಶಿವಕುಮಾರ್‌ ಅವರು ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಸಂತೋಷ ಹಂಚಿಕೊಂಡಿದ್ದಾರೆ. ಸದ್ಗುರು ಅವರ ಮಾತುಗಳಲ್ಲಿ ಆಳವಾದ ತತ್ವಗಳ ಜೊತೆ ಸೌಮ್ಯವಾದ ಹಾಸ್ಯದ ಸಂಯೋಜನೆ ಇರುತ್ತದೆ. ಬದುಕಿನ ಒಳಹುಗಳ‌ ಬಗ್ಗೆ ಸುದೀರ್ಘವಾಗಿ ಮಾತನಾಡಿದೆವು. ಗಂಭೀರ ವಿಚಾರಗಳ ಮಧ್ಯೆ, ಹಾಸ್ಯದ ಝಲಕ್ ಗಳು ಮನಸ್ಸಿಗೆ ಹಿತ ನೀಡಿದವು ಎಂದು ಹೇಳಿದ್ದಾರೆ.

ಜೀವನವೆಂದರೆ ಅನಂತ ಯಾತ್ರೆ. ಪ್ರತಿ ಕ್ಷಣವೂ ಒಂದು ಅಧ್ಯಾಯ, ಪ್ರತಿ ನಗುವೂ ಮತ್ತು ಆಲೋಚನೆಯೂ ನಮ್ಮ ಆಂತರಿಕ ಬೆಳಕಿಗೆ ಪೂರಕ. ನಿಜವಾದ ಸಂಪತ್ತು ಅಂದರೆ, ಆಂತರಿಕ ಶಾಂತಿ, ಆತ್ಮ-ಸಾಕ್ಷಾತ್ಕಾರ ಮತ್ತು ಆ ಭಾವನೆ, ಬದುಕಿನ ಪ್ರತಿಯೊಂದು ಕ್ಷಣದಲ್ಲಿ ಜೀವಂತವಾಗಿರುವ ಸತ್ಯ ಎಂದೂ ಅವರು ಟ್ವೀಟ್‌ ಮಾಡಿದ್ದಾರೆ. ಈ ಟ್ವೀಟ್‌ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+