"ಜನವರಿ 6ಕ್ಕೆ ಡಿ.ಕೆ.ಶಿವಕುಮಾರ್ ಸಿಎಂ ಆಗಿ ಅಧಿಕಾರ ಸ್ವೀಕಾರ"
ಬೆಳಗಾವಿ ಅಧಿವೇಶನದ ನಡುವೆ ಸಿಎಂ ಬದಲಾವಣೆ ಚರ್ಚೆ ಮುನ್ನೆಲೆಗೆ ಬಂದಿದೆ. ಇತ್ತೀಚೆಗಷ್ಟೇ ಸಿಎಂ ಬದಲಾವಣೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಕ್ಲಾರಿಟಿ ಕೊಟ್ಟಿದ್ದರು. ಇದೀಗ ಡಿ.ಕೆ.ಶಿವಕುಮಾರ್ ಬೆಂಬಲಿತ ಶಾಸಕರು ಮತ್ತೆ ದೆಹಲಿ ಕಡೆ ಮುಖ ಮಾಡಿದ್ದಾರೆ. ಅಲ್ಲದೆ ಹೊಸ ವರ್ಷಕ್ಕೆ ಹೊಸ ಸಿಎಂ ಎಂದು ಚರ್ಚೆ ಕಾಂಗ್ರೆಸ್ ಪಾಳಯದಲ್ಲಿ ಜೋರಾಗಿದೆ. ಆದರೆ ಶಾಸಕರೊಬ್ಬರು ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗುವ ದಿನಾಂಕವನ್ನೇ ಘೋಷಿಸಿದ್ದಾರೆ. ಜನವರಿ 6ರಂದೇ ಡಿಕೆ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ ಎನ್ನುವ ಮೂಲಕ ಸಂಚಲನ ಮೂಡಿಸಿದ್ದಾರೆ.
ಮಂಡ್ಯದ ಕಾಂಗ್ರೆಸ್ ನಾಯಕರು ಸಚಿವ ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ದೆಹಲಿ ವೋಟ್ ಚೋರಿ ಪ್ರತಿಭಟನೆಯಲ್ಲಿ ಭಾಗಿಯಾಗುವ ನೆಪದಲ್ಲಿ ಡಿ.ಕೆ.ಶಿವಕುಮಾರ್ ಅವರ ಬೆಂಬಲಿತ ಶಾಸಕರ ಗುಂಪು ಹೈಕಮಾಂಡ್ ಭೇಟಿಗೆ ಮುಂದಾಗಿದೆ. ಈ ಮೂಲಕ ಡಿಕೆಶಿಗೆ ಸಿಎಂ ಸ್ಥಾನ ನೀಡುವಂತೆ ಒತ್ತಡ ಹೇರಲು ತಂತ್ರ ರೂಪಿಸಿರುವ ಗುಸಗುಸು ಕೇಳಿಬರುತ್ತಿದೆ. ಆದರೆ ಜನವರಿ 6ಕ್ಕೆ ಡಿ.ಕೆ. ಶಿವಕುಮಾರ್ ಅವರಿಗೆ ಸಿಎಂ ಆಗಿ ಪಟ್ಟಾಭಿಷೇಕವಾಗಲಿದೆ ಎಂದು ಅವರ ಆಪ್ತರೂ ಆದ ಶಾಸಕ ಇಕ್ಬಾಲ್ ಹುಸೇನ್ ಹೊಸ ಬಾಂಬ್ ಸಿಡಿಸಿದ್ದಾರೆ.

ಡಿಕೆಶಿಗೆ 6 & 9 ಅದೃಷ್ಟ ಸಂಖ್ಯೆ
ಡಿ.ಕೆ.ಶಿವಕುಮಾರ್ ಅವರಿಗೆ ಜನವರಿ 6 ಮತ್ತು 9 ಅದೃಷ್ಟ ಸಂಖ್ಯೆ. ಇನ್ನು ನಮ್ಮಲ್ಲಿ ಯಾವುದೇ ಬಣಗಳಿಲ್ಲ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರೂ ರಾಜ್ಯದ ಆಸ್ತಿ. ಡಿಕೆ ಶಿವಕುಮಾರ್ ಅವರ ಹೋರಾಟಕ್ಕೆ ಹಾಗೂ ಶ್ರಮಕ್ಕೆ ಪ್ರತಿಫಲ ಸಿಗಬೇಕು. ಹೀಗಾಗಿ ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು. ಅವರಿಗೆ ಅವಕಾಶ ಸಿಗಲೇಬೇಕು. ಇದಕ್ಕೆ ಹೈಕಮಾಂಡ್ ಕೂಡ ಸ್ಪಂದಿಸುತ್ತಿದೆ. ಹೀಗಾಗಿ ಬಹುತೇಕ ಜನವರಿ 6ರಂದೇ ಅವರಿಗೆ ಮುಖ್ಯಮಂತ್ರಿ ಸ್ಥಾನ ಸಿಗಲಿದೆ. ಈ ಬಗ್ಗೆ ನನಗೆ ಶೇ 99ರಷ್ಟು ವಿಶ್ವಾಸವಿದೆ ಎಂದಿದ್ದಾರೆ ಶಾಸಕ ಇಕ್ಬಾಲ್ ಹುಸೇನ್.
ಇನ್ನು ಡಿ.ಕೆ.ಶಿವಕುಮಾರ್ ಅವರೊಂದಿಗೆ ನಾನು ಕೂಡ ದೆಹಲಿಗೆ ಹೋಗಿ ವೋಟ್ ಚೋರಿ ಪ್ರತಿಭಟನೆಯಲ್ಲಿ ಭಾಗಿಯಾಗುತ್ತೇವೆ. ಆದರೆ ನಾವು ಹೈಕಮಾಂಡ್ ನಾಯಕರನ್ನು ಭೇಟಿಯಾಗುವುದಿಲ್ಲ. ಈಗಾಗಲೇ ನಾವು ನಮ್ಮ ಮನವಿ ಏನು ಎಂದು ಅವರಿಗೆ ತಿಳಿಸಿದ್ದೇವೆ. ಹೀಗಾಗಿ ಅವರಿಂದ ಒಳ್ಳೆಯ ಸ್ಪಂದನೆ ಸಿಗುವ ವಿಶ್ವಾಸವೂ ಇದೆ. ನಿರೀಕ್ಷೆಯಂತೆ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ನೀಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಇನ್ನು ಯತೀಂದ್ರ ಸಿದ್ದರಾಮಯ್ಯ ಅವರು ನಾಯಕತ್ವ ಬದಲಾವಣೆ ಇಲ್ಲ ಎಂದು ಹೇಳಿರಬಹುದು. ಯಾರು ಏನಾದರೂ ಹೇಳಲಿ, ರಾಜ್ಯದ ಜನ ಹಾಗೂ ನಮ್ಮ ಭಾಗದ ಶಾಸಕರು ಡಿಕೆ ಶಿವಕುಮಾರ್ ಅವರಿಗೆ ಸಿಎಂ ಆಗುವ ಅವಕಾಶ ಕೊಡಿ ಎಂದು ಕೇಳಿದ್ದೇವೆ. ಅವರು ಸಿಎಂ ಆಗುವುದು ಖಚಿತ ಎಂದಿದ್ದಾರೆ.
-
IPL 2026 Free Ticket: ರಾಜ್ಯದ ಶಾಸಕರಿಗೆ ಪ್ರತಿ ಪಂದ್ಯಕ್ಕೂ 3 ಟಿಕೆಟ್ ಉಚಿತ; ಡಿ.ಕೆ.ಶಿವಕುಮಾರ್ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Vijay Thalapathi: ಟಿವಿಕೆ ಸಂಸ್ಥಾಪಕ, ನಟ ವಿಜಯ್ ದಳಪತಿ ವಿರುದ್ಧ ಪ್ರಕರಣ ದಾಖಲು -
Thalapathy Vijay Assets: ನಾಮಪತ್ರ ಸಲ್ಲಿಸಿದ ವಿಜಯ್, ಇವರ ಒಟ್ಟು ಆಸ್ತಿ ಎಷ್ಟು? ಇಲ್ಲಿದೆ ಮಾಹಿತಿ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ












Click it and Unblock the Notifications