ಡಿ.ಕೆ ಶಿವಕುಮಾರ್ ಮುಂದಿನ ಮುಖ್ಯಮಂತ್ರಿ: ನಿಮ್ಮೆಲ್ಲರ ಸಹಕಾರ ಇರಲಿ ಎಂದ ಸಿದ್ದರಾಮಯ್ಯ

DK Shivakumar: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಹತ್ವದ ಸಂದೇಶವನ್ನು ಹಂಚಿಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಹೈಕಮಾಂಡ್ ಸೂಚನೆ ಕೊಟ್ಟಿರುವ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದಕ್ಕೆ ಉತ್ಸುಕರಾಗಿದ್ದಾರೆ. ಇಂದು ಬ್ರೇಕ್ ಫಾಸ್ಟ್ ಮೀಟಿಂಗ್ ನಡೆದಿದ್ದು. ಈ ವೇಳೆ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಡಿ.ಕೆ ಶಿವಕುಮಾರ್ ಅವರು ಆಶೀರ್ವಾ ತೆಗೆದುಕೊಂಡಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಕೊಡುವುದಕ್ಕೆ ಸೂಚನೆ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆಯಿಂದ ಪದತ್ಯಾಗ ಮಾಡುವುದಕ್ಕೆ ಮುಂದಾಗಿದ್ದಾರೆ. ಇದೀಗ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ಭೇಟಿಯು ಕುತೂಹಲಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವುದಕ್ಕೆ ಮುಂದಾದ ಮೇಲೆ ಗುರುವಾರ ಎಲ್ಲಾ ಶಾಸಕರು ಸಚಿವರನ್ನು ತಮ್ಮ ನಿವಾಸದಲ್ಲಿ ಉಪಹಾರಕ್ಕೆ ಆಹ್ವಾನಿಸಿದ್ದರು. ಇದೀಗ ಬ್ರೇಕ್‌ಫಾಸ್ಟ್‌ ಮೀಟಿಂಗ್ ವೇಳೆ ಡಿಕೆ ಶಿವಕುಮಾರ್​ ಅವರು ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಆಶೀರ್ವಾದ ತೆಗೆದುಕೊಂಡಿದ್ದಾರೆ.

DK Shivakumar

ಸಿದ್ದರಾಮಯ್ಯ ಸಹಕಾರ ಕೇಳಿದ ಡಿಕೆಶಿ

ಸಿದ್ದರಾಮಯ್ಯ ಅವರನ್ನು ಗುರುವಾರ ಬೆಳಗ್ಗೆಯೇ ಭೇಟಿ ಮಾಡಿದ ಡಿ.ಕೆ ಶಿವಕುಮಾರ್ ಅವರು, ಸಿದ್ದರಾಮಯ್ಯ ಅವರನ್ನು ಅಪ್ಪಿಕೊಂಡರು, ಕಾಲಿಗೆ ಬಿದ್ದು ಆರ್ಶೀವಾದ ಪಡೆದುಕೊಂಡರು. ಮುಂದಿನ ತಮ್ಮ ರಾಜಕೀಯ ಜೀವನದಲ್ಲಿ ಹಾಗೂ ಪಕ್ಷದ ಕೆಲಸದಲ್ಲಿ ಸಹಕಾರ ಮತ್ತು ಮಾರ್ಗದರ್ಶನ ಕೊಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ವಿನಂತಿಸಿದರು.

ಸೋಶಿಯಲ್ ಮೀಡಿಯಾದಲ್ಲಿ ಫೋಟೋ ವೈರಲ್

ಇನ್ನು ಕೆಲವೇ ಕ್ಷಣಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಭೇಟಿ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರ ಭೇಟಿಯ ಫೋಟೋಗಳು ಕೇವಲ ರಾಜಕೀಯ ಭೇಟಿಯಾಗಿದರೆ ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿ ಆಯಿತು.

ಡಿ.ಕೆ ಶಿವಕುಮಾರ್ ಮುಂದಿನ ಮುಖ್ಯಮಂತ್ರಿ: ನಿಮ್ಮೆಲ್ಲರ ಸಹಕಾರ ಇರಲಿ: ಸಿದ್ದರಾಮಯ್ಯ

ಇನ್ನು ಬೆಳಗ್ಗಿನ ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.ಕೆ ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿ ನಿಮ್ಮೆಲ್ಲರ ಸಹಕಾರವೂ ಅವರಿಗೆ ಇರಲಿ ಎಂದು ಹೇಳಿದ್ದಾರೆ ಎನ್ನಲಾಗಿದೆ. ಡಿಕೆಶಿ ಮುಂದಿನ ಮುಖ್ಯಮಂತ್ರಿ, ಅವರಿಗೆ ಸಹಕರಿಸಿದ ಅಂತ ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿಯೇ ಸಿದ್ದರಾಮಯ್ಯ ಹೇಳಿದ್ದಾರೆ. ಡಿಕೆಶಿ ಮುಖ್ಯಮಂತ್ರಿ ಆಗೋದನ್ನು ಯಾರಿಂದಲೂ ತಡೆಯಲು ಆಗೋಲ್ಲ. ಅವರೇ ಮುಂದಿನ ಸಿಎಂ. ನನಗೆ ಸಹಕರಿಸಿದಂತೆ ಅವರಿಗೂ ನಿಮ್ಮ ಸಹಕಾರ ಮುಂದುವರಿಯಲಿ ಅಂತ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ನ ಶಾಸಕರಿಗೆ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+